ಗೃಹ ರಕ್ಷಕ ದಳದಲ್ಲಿ ಖಾಲಿ ಇರುವ 140 ಹೋಂ ಗಾರ್ಡ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: 140 Home guards recruitment in karwar district 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕಾರವಾರ ಜಿಲ್ಲೆಯ ಜಿಲ್ಲಾ ಗೃಹ ರಕ್ಷಕ ದಳದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಗೃಹ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಗೃಹ ರಕ್ಷಕ ದಳ, ಕಾರವಾರ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಗೃಹ ರಕ್ಷಕ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 07-03-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಗೃಹ ರಕ್ಷಕ ದಳ ಇಲಾಖೆಯಲ್ಲಿ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಗೃಹ ರಕ್ಷಕ ದಳ |
ಹುದ್ದೆಗಳ ಪದನಾಮ: ಗೃಹ ರಕ್ಷಕ (Home Guards) |
ಹುದ್ದೆಗಳ ಸಂಖ್ಯೆ: 140 ಹುದ್ದೆಗಳು |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಕಾರವಾರ |
ಖಾಲಿ ಹುದ್ದೆಗಳ ವಿವರ:
ಕಾರವಾರ ಜಿಲ್ಲೆಯಲ್ಲಿ ಖಾಲಿ ಇರುವ 140 ಗೃಹರಕ್ಷಕ/ ಗೃಹ ರಕ್ಷಕಿ ಹುದ್ದೆಗಳ ಭರ್ತಿ ನಡೆಯುತ್ತಿದೆ.
ವೇತನ ಶ್ರೇಣಿ:
ಗೃಹ ರಕ್ಷಕ ದಳದಿಂದ ನಿಗದಿಪಡಿಸಿದ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 19 ವರ್ಷ ಪೂರೈಸಿರಬೇಕು & 50 ವರ್ಷವನ್ನು ಮೀರಿರಬಾರದು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಭರ್ತಿ ಮಾಡುವ ಅರ್ಜಿ ನಮೂನೆ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣಪತ್ರ,
ಗ್ರಾಮೀಣ ಪ್ರಮಾಣಪತ್ರ
ಕನ್ನಡ ಮಾದ್ಯಮ ಪ್ರಮಾಣಪತ್ರ
ಸೇವಾ ದಾಖಲಾತಿಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
ಜಿಲ್ಲಾ ಗೃಹ ರಕ್ಷಕ ದಳದ ಕಛೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ಎಲ್ಲ ದಾಖಲೆಗಳನ್ನು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ಗೃಹ ರಕ್ಷಕ/ ಗೃಹ ರಕ್ಷಕಿ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ…
ಅರ್ಜಿ ಪಡೆಯುವ & ಕಳುಹಿಸುವ ವಿಳಾಸ: ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರ ಕಛೇರಿ, ಕೋಡಿಬಾಗ, ಕಾರವಾರ
ಸಂಪರ್ಕಿಸಿ: 08382-200137 ಅಥವಾ 9480898775
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-03-2025
ಪ್ರಮುಖ ಲಿಂಕುಗಳು:
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.