ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: PRC RDPR Recruitment 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಪಂಚಾಯತ್ ರಾಜ್ ಆಯುಕ್ತಾಲಯದ Social Responsive Local Government Cell ನಲ್ಲಿ ಖಾಲಿ ಇರುವ Subject Expert & Young Professional ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಕರ್ನಾಟಕ RDPR ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 29-05-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಕರ್ನಾಟಕ ಪಂಚಾಯತ್ ರಾಜ್ ಇಲಾಖೆ |
ಹುದ್ದೆಗಳ ಪದನಾಮ: ವಿಷಯ ಪರಿಣಿತರು ಮತ್ತು ಯಂಗ್ ಪ್ರೊಫೇಶನಲ್ |
ಹುದ್ದೆಗಳ ಸಂಖ್ಯೆ: 03 ಹುದ್ದೆಗಳು |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು |
ಖಾಲಿ ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ವಿಷಯ ಪರಿಣಿತರು (Subject Expert) | 01 |
ಯಂಗ್ ಪ್ರೊಫೆಶನಲ್ | 02 |
ವೇತನ ಶ್ರೇಣಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಾಸಿಕ ನಿಗದಿಪಡಿಸಿದ ವೇತನ ನೀಡುತ್ತಾರೆ.
ಹುದ್ದೆಗಳ ಹೆಸರು | ವೇತನ |
ವಿಷಯ ಪರಿಣಿತರು (Subject Expert) | 1,00,000/- |
ಯಂಗ್ ಪ್ರೊಫೆಶನಲ್ | 75,000/- |
ಗುತ್ತಿಗೆಯ ಅವಧಿ:
ಮೇಲಿನ ಹುದ್ದೆಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಒಂದು ವರ್ಷದ ಅವಧಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅವರ ಕಾರ್ಯಕ್ಷಮತೆ & ಅವಶ್ಯಕತೆಗೆ ಅನುಗುಣವಾಗಿ ನವೀಕರಿಸಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ Sociology/ Social Work/ Rural Development/ Public Policy ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು.
ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 35 ವರ್ಷಗಳನ್ನು ಮೀರುವಂತಿಲ್ಲ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಭರ್ತಿ ಮಾಡುವ ಅರ್ಜಿ ನಮೂನೆ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಮಾತೃ ಇಲಾಖೆಯಿಂದ ಆಕ್ಷೇಪಣೆರಹಿತ ಪ್ರಮಾಣಪತ್ರ
ಸೇವಾ ದಾಖಲಾತಿಗಳು
ಸಂಶೋಧನಾ ಲೇಖನಗಳು, ಅವಾರ್ಡ್ ಗಳು, ಇತರೆ ಪ್ರಸಂಶನೀಯ ಪ್ರಮಾಣಪತ್ರಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
ಈ ಲೇಖನದ ಕೊನೆಯ ಭಾಗದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ..
ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ಎಲ್ಲ ದಾಖಲೆಗಳನ್ನು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ Subject Expert/ Young Professional ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ…
ಅರ್ಜಿ ಕಳುಹಿಸುವ ವಿಳಾಸ: ಪಂಚಾಯತ್ ರಾಜ್ ಆಯುಕ್ತಾಲಯ, ಕಾಳಿದಾಸ ರಸ್ತೆ, ಗಾಂಧಿನಗರ, ಬೆಂಗಳೂರು ವಿಳಾಸಕ್ಕೆ ಕಳುಹಿಸಬಹುದು ಅಥವಾ prc-recruitment@ka-gov.in ಗೆ ಇಮೇಲ್ ಮುಖಾಂತರ ಕಳುಹಿಸಬಹುದು.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ: 22-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-05-2025
ಪ್ರಮುಖ ಲಿಂಕುಗಳು:
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.