ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 261 ಸ್ಟೆನೋಗ್ರಾಫರ್ ಗ್ರೇಡ್ ಸಿ & ಡಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: SSC Steno Grade C & D Recruitment 2025
ನಮಸ್ತೆ ಸ್ನೇಹಿತರೇ, ಇಂದು ಈ ಲೇಖನದಲ್ಲಿ ಹೊಸ ಉದ್ಯೋಗ ಮಾಹಿತಿಯನ್ನು ಹಂಚಿಕೊಳ್ಳಲಿದ್ದೇನೆ. ಸಿಬ್ಬಂದಿ ನೇಮಕಾತಿ ಆಯೋಗದಿಂದ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು/ ಸಂಸ್ಥೆಗಳು/ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೇಡ್ ಸಿ & ಡಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಪಿಯುಸಿ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Staff Selection Commission ನ ವತಿಯಿಂದ ಖಾಲಿ ಇರುವ ಒಟ್ಟು 261 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು 26-06-2025ರವರೆಗೆ ನೀಡಲಾಗಿದೆ. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
SSC Stenographer Grade C & D Exam 2025 ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ
ನೇಮಕಾತಿ ಸಂಸ್ಥೆ | ಸಿಬ್ಬಂದಿ ನೇಮಕಾತಿ ಆಯೋಗ |
ಹುದ್ದೆಗಳ ಪದನಾಮ | ಸ್ಟೆನೋಗ್ರಾಫರ್ ಗ್ರೇಡ್ ಸಿ & ಡಿ |
ಹುದ್ದೆಗಳ ಸಂಖ್ಯೆ | 261 |
ಕೆಲಸದ ಸ್ಥಳ | ದೇಶದಾದ್ಯಂತಾ |
ವೇತನ/ Salary Scale
ಕೇಂದ್ರ ಸರ್ಕಾರದ 7ನೇ ವೇತನ ನಿಯಮಾವಳಿಗಳ ಹಂತ 1 ರಿಂದ ಹಂತ 8ರವರೆಗೆ ವೇತನ ನೀಡಲಾಗುತ್ತದೆ.
ವಯೋಮಿತಿ/ Age limit:
ದಿನಾಂಕ 01-08-2025ಕ್ಕೆ ನಿಗದಿಪಡಿಸಿದಂತೆ
ಕನಿಷ್ಟ ವಯೋಮಿತಿ: 18 ವರ್ಷ
ಗರಿಷ್ಟ ವಯೋಮಿತಿ: 30 ವರ್ಷ
ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು & ಸ್ಟೆನೋಗ್ರಾಫಿ ಕೋರ್ಸ್ ಆಗಿರಬೇಕು.
(ಸ್ನೇಹಿತರೇ ಈ ನೇಮಕಾತಿ ಸೇರಿದಂತೆ ಯಾವುದೇ ನೇಮಕಾತಿ/ ಸ್ಕಾಲರ್ಶಿಫ್/ ಸ್ಕೀಮ್ ಗಳಿಗೆ ಅರ್ಜಿ ಸಲ್ಲಿಸಿಕೊಡಲಾಗುವುದು. ವಾಟ್ಸಪ್ (9108736889) ಮುಖಾಂತರ ದಾಖಲೆಗಳನ್ನು ಕಳುಹಿಸಿದರೇ ಕಡಿಮೆ ದರದಲ್ಲಿ ಅರ್ಜಿ ಸಲ್ಲಿಸಿ ಪಿಡಿಎಫ್ ಅನ್ನು ನಿಮಗೆ ಕಳುಹಿಸಿಕೊಡಲಾಗುವುದು)
ಅರ್ಜಿ ಶುಲ್ಕ/ Application Fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ: ರೂ. 100/-ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪಜಾ/ ಪಪಂ/ ಅಂಗವಿಕಲ/ ಮಾಜಿಸೈನಿಕ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಕರ್ನಾಟಕದಲ್ಲಿನ ಪರೀಕ್ಷಾ ಕೇಂದ್ರಗಳು:
ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ, ಶಿವಮೊಗ್ಗ, ಉಡುಪಿ, ಹುಬ್ಬಳ್ಳಿ
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು
ಸೇವಾ ದಾಖಲಾತಿಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಹಾಕುವ ವಿಧಾನ/ Application Submission Method:
- ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
- ಅಭ್ಯರ್ಥಿಗಳು www.ssc.gov.in ವೆಬ್ಸೈಟ್ ಗ ಬೇಟಿ ನೀಡಿ Registration ಟ್ಯಾಬ್ ಗೆ ಹೋಗಿ. ಅಲ್ಲಿ ನೊಂದಣಿ ಮಾಡಿಕೊಳ್ಳಿ.
- ನೊಂದಣಿ ಮಾಡಿಕೊಂಡ ನಂತರ Registration Number & Password ಅನ್ನು ಬಳಸಿಕೊಂಡು ಲಾಗಿನ್ ಮಾಡಿಕೊಳ್ಳಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
- Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-06-2025
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-06-2025
ಕಂಪ್ಯೂಟರ್ ಬೇಸಡ್ ಪರೀಕ್ಷೆಯ ದಿನಾಂಕ: ಆಗಸ್ಟ್ 6-11ರವರೆಗೆ
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: |
ಅರ್ಜಿ ಸಲ್ಲಿಸಿ/ Apply Online: |
ವೆಬ್ಸೈಟ್/ Website : |
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.