ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಹತ್ತನೇ, ಪಿಯುಸಿ ಆದವರಿಂದ ಅರ್ಜಿ ಆಹ್ವಾನ: Apply for Grama Panchayath Aranakala Recruitment 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ವಿನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಗ್ರಾಮ ಪಂಚಾಯತ್ ಕಾರ್ಯಾಲಯ, ಅರಣಕಲ, ಕಾಳಗಿ ತಾಲೂಕು ಪಂಚಾಯತ ಕಲಬುರಗಿ ಜಿಲ್ಲೆಯ ವತಿಯಿಂದ ಖಾಲಿ ಇರುವ ಪಂಪ್ ಆಪರೇಟರ್, ಸ್ವಚ್ಛತಗಾರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
Grama Panchayath Aranakala ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 16-06-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಗ್ರಾಮ ಪಂಚಾಯತ್ ಕಾರ್ಯಲಯ ಅರಣಕಲ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಗ್ರಾಮ ಪಂಚಾಯತ್ ಕಾರ್ಯಲಯ, ಅರಣಕಲ |
ಹುದ್ದೆಗಳ ಪದನಾಮ: ಪಂಪ್ ಆಪರೇಟರ್ & ಸ್ವಚ್ಛತಗಾರ |
ಹುದ್ದೆಗಳ ಸಂಖ್ಯೆ: 02 ಹುದ್ದೆಗಳು |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಅರಣಕಲ, ಕಲಬುರಗಿ |
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಪಂಪ್ ಆಪರೇಟರ್ | 01 |
ಸ್ವಚ್ಛತಗಾರ | 01 |
ವೇತನ ಶ್ರೇಣಿ:
ನಿಯಮಾವಳಿಗಳನ್ವಯ ಮಾಸಿಕ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ
ಸ್ವಚ್ಛತಗಾರ: ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ ಪೂರ್ಣಗೊಳಿಸಿರಬೇಕು.
ಪಂಪ್ ಆಪರೇಟರ್: ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು.
ಕನ್ನಡ & ಇಂಗ್ಲೀಷ್ ಓದಲು, ಬರೆಯಲು, ಅರ್ಥ ಮಾಡಿಕೊಳ್ಳಲು ಮತ್ತು ಮಾತನಾಡಲು ಬರಬೇಕು.
ವಯೋಮಿತಿ:
ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿ ನಿಗದಿಪಡಿಸಿಲ್ಲ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಭರ್ತಿ ಮಾಡಿರುವ ಅರ್ಜಿ ನಮೂನೆ
- ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
- ಜಾತಿ & ಆದಾಯ ಪ್ರಮಾಣ ಪತ್ರ,
- ಕನ್ನಡ ಮಾದ್ಯಮ ಪ್ರಮಾಣಪತ್ರ,
- ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
- ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ತೆರಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
- ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
- ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
- ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ನಂತರ ಅದನ್ನು ಒಂದು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ______________ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
- ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
- ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.
ಅರ್ಜಿ ಕಳುಹಿಸಿಕೊಡುವ ವಿಳಾಸ:
ಗ್ರಾಮ ಪಂಚಾಯತ ಕಾರ್ಯಲಯ, ಅರಣಕಲ, ಕಲಬುರಗಿ
ಪ್ರಮುಖ ದಿನಾಂಕಗಳು:
ಅರ್ಜಿ ಸುಲ್ಲಿಸುವ ಪ್ರಾರಂಭದ ದಿನಾಂಕ: 04-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-06-2025
ಅಧಿಕೃತ ಲಿಂಕುಗಳು/ Official Links
ನೋಟಿಫಿಕೇಶನ್ ಡೌನ್ಲೋಡ್ |
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.