ಕಾಲೇಜು ಶಿಕ್ಷಣ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: DCTE Jobs 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ವಿನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಖಾಲಿ ಇರುವ ಕಾನೂನು ಸಮಾಲೋಚಕರನ್ನು ಭರ್ತಿ ಮಾಡಲು ಅನುಭವವುಳ್ಳ ನುರಿತ ನ್ಯಾಯವಾದಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
Department of Collegiate & Technical Education ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 31-07-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ |
ಹುದ್ದೆಗಳ ಪದನಾಮ: ಕಾನೂನು ಸಮಾಲೋಚಕ |
ಹುದ್ದೆಗಳ ಸಂಖ್ಯೆ: 01 |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು |
ವೇತನ ಶ್ರೇಣಿ:
ಇಲಾಖೆಯ ನಿಯಮಾವಳಿಗಳ ಅನುಸಾರ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ
ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಲ್ಲಿ ನೊಂಧಣಿಯಾಗಿರಬೇಕು. 10 ರಿಂದ 12 ವರ್ಷಗಳ ಕಾಲ ಕಾನೂನು ವಿಷಯದಲ್ಲಿ ನುರಿತಿರಬೇಕು.
ವಯೋಮಿತಿ:
ಗರಿಷ್ಟ 60 ವರ್ಷಗಳವರೆಗೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
- ಅನುಭವ ಪ್ರಮಾಣಪತ್ರ
- ಬಾರ್ ಕೌನ್ಸಿಲ್ ನೊಂದಣಿಪತ್ರ
- ಫೋಟೊ ಗುರುತಿನ ಪತ್ರ
- 3 Years ITR Fillings
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ತೆರಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
- ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
- ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
- ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಪಿಡಿಎಫ್ ರೂಪದಲ್ಲಿ ತನ್ನಿ ನಂತರ ಅದನ್ನು nemakathi1@gmail.com ಇಮೇಲ್ ಗೆ ಕಳುಹಿಸಿ.
ಅರ್ಜಿ ಕಳುಹಿಸಿಕೊಡುವ ವಿಳಾಸ:
Department of Collegiate & Technical Education, Unnatha Sikshana Souda, Shedhadri Road, Bangalore 560001
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-07-2025
ಅಧಿಕೃತ ಲಿಂಕುಗಳು/ Official Links
ನೋಟಿಫಿಕೇಶನ್ ಡೌನ್ಲೋಡ್ |