ದಿ ಜಮಖಂಡಿ ಅರ್ಬನ್‌ ಕೋ-ಆಪ್‌ ಬ್ಯಾಂಕ್‌ ನಲ್ಲಿ ಖಾಲಿ ಇರುವ ಜೂ. ಅಸಿಸ್ಟೆಂಟ್‌, ವಾಚ್‌ ಮ್ಯಾನ್‌ & ಡ್ರೈವರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ: The Jamkhandi Urban Coop Bank Recruitment 2025

WhatsApp Group Join Now
Telegram Group Join Now
Spread the love

ದಿ ಜಮಖಂಡಿ ಅರ್ಬನ್‌ ಕೋ-ಆಪ್‌ ಬ್ಯಾಂಕ್‌ ನಲ್ಲಿ ಖಾಲಿ ಇರುವ ಜೂ. ಅಸಿಸ್ಟೆಂಟ್‌, ವಾಚ್‌ ಮ್ಯಾನ್‌ & ಡ್ರೈವರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ: The Jamkhandi Urban Coop Bank Recruitment 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ದಿ ಜಮಖಂಡಿ ಅರ್ಬನ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿಮಿಟೆಡ್, ಜಮಖಂಡಿ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ.  ಇದರಲ್ಲಿ ಖಾಲಿ ಇರುವ  ಕಿರಿಯ ಸಹಾಯಕರು, ಗಣಕಯಂತ್ರ ನಿರ್ವಾಹಕರು, ವಾಹನ ಚಾಲಕರು ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ದಿ ಜಮಖಂಡಿ ಅರ್ಬನ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿಮಿಟೆಡ್‌ , ಜಮಖಂಡಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 27-09-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

JOB NEWS: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಲೆಕ್ಕ ಅಧೀಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Revenue Dept. Account Superintendent Jobs 2025

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ ದಿ ಜಮಖಂಡಿ ಅರ್ಬನ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿಮಿಟೆಡ್‌, ಜಮಖಂಡಿ
ಹುದ್ದೆಗಳ ಹೆಸರು ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ
ಹುದ್ದೆಗಳ ಸಂಖ್ಯೆ 45
ಕೆಲಸದ ಸ್ಥಳ ಜಮಖಂಡಿ

 

ಹುದ್ದೆಗಳ ವಿವರ:

ಕಿರಿಯ ಸಹಾಯಕರು 14
ಗಣಕಯಂತ್ರ ನಿರ್ವಾಹಕರು 04
ಸಿಪಾಯಿ 16
ರಾತ್ರಿ ಕಾವಲುಗಾರರು 08
ವಾಹನ ಚಾಲಕರು 02
ಗನ್‌ ಮ್ಯಾನ್‌ 01
ಒಟ್ಟು ಹುದ್ದೆಗಳು 45

 

ವೇತನ ಶ್ರೇಣಿ/ Salary Scale:

ಕಿರಿಯ ಸಹಾಯಕರು 33450-62600
ಗಣಕಯಂತ್ರ ನಿರ್ವಾಹಕರು 33450-62600
ಸಿಪಾಯಿ 21400-42000
ರಾತ್ರಿ ಕಾವಲುಗಾರರು 21400-42000
ವಾಹನ ಚಾಲಕರು 21400-42000
ಗನ್‌ ಮ್ಯಾನ್‌ 21400-42000

 

ವಯೋಮಿತಿ/ Age limit:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಟ 35 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಕೆಟಗೆರಿ 1 ಅಭ್ಯರ್ಥಿಗಳಿಗೆ : 40 ವರ್ಷ

2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ: 38 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷಗಳ ಸಡಿಲಿಕೆ

JOB NEWS: ಗ್ರಾಮೀಣ ಬ್ಯಾಂಕುಗಳಲಿ ಖಾಲಿ ಇರುವ 13217 ಕ್ಲರ್ಕ್‌, ಆಫೀಸ್‌ ಅಸಿಸ್ಟೆಂಟ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: IBPS RRB Recruitment 2025

ಶೈಕ್ಷಣಿಕ ಅರ್ಹತೆಗಳು/ Educational Qualification:

ಕಿರಿಯ ಸಹಾಯಕರು:

  1. i) ದ್ವಿತೀಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾಗಿರಬೇಕು.
  2. ii) ಕನ್ನಡವನ್ನು ಓದುವ ಸಾಮರ್ಥದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು; ಮತ್ತು
  3. ii) ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ ಜ್ಞಾನವಿರಬೇಕು.

ಆದ್ಯತೆ : ಭಾರತದ ಕಾನೂನಿನ ಅಡಿಯಲ್ಲಿ ಸ್ಥಾಪನೆಯಾದ ಯಾವುದೇ ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಹೊಂದಿದ ಹಾಗೂ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವದು.

ಗಣಕಯಂತ್ರ ನಿರ್ವಾಹಕರು:

  • ದ್ವಿತೀಯ ಪಿ.ಯು.ಸಿ ಯಲ್ಲಿ ಅಥವಾ ಮೂರು ವರ್ಷದ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್‌ನಲ್ಲಿ ಉತ್ತೀರ್ಣರಾಗಿರಬೇಕು.
  • ಸೀನಿಯರ್ ಕನ್ನಡ/ಇಂಗ್ಲೀಷ್ ಟೈಪ್ ರೈಟಿಂಗ್‌ನಲ್ಲಿ ಉತ್ತೀರ್ಣರಾಗಿದ್ದು ಅಥವಾ ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ ಜ್ಞಾನವಿರಬೇಕು; ಮತ್ತು
  • ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.
  • ಆದ್ಯತೆ : ಭಾರತದ ಕಾನೂನಿನ ಅಡಿಯಲ್ಲಿ ಸ್ಥಾಪನೆಯಾದ ಯಾವುದೇ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್‌ ಇಂಜಿನಿಯರಿಂಗ್ Computer Science/ Information Science/ Electronic and Communication ಪದವಿಯನ್ನು ಹೊಂದಿದ ಹಾಗೂ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವದು.‌

ಸಿಪಾಯಿ:

  1. ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ರಾತ್ರಿ ಕಾವಲುಗಾರರು:

  1. ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ವಾಹನ ಚಾಲಕ:

  1. i) ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
  2. ii) ಕಾನೂನುಬದ್ಧ ಲಘು ವಾಹನ ಹಾಗೂ ಭಾರಿ ವಾಹನ ಚಾಲನೆ ಪರವಾನಿಗೆಯೊಂದಿಗೆ 5 ವರ್ಷದ ಅನುಭವ ಹೊಂದಿರಬೇಕು.

ಗನ್‌ ಮ್ಯಾನ್:‌

  1. i) ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ಆದ್ಯತೆ : ಮಾಜಿ ಸೈನಿಕರಿಗೆ ಆದ್ಯತೆ ನೀಡಲಾಗುವದು.

ಅರ್ಜಿ ಶುಲ್ಕ:

ಹುದ್ದೆಗಳು ಸಾಮಾನ್ಯ & ಇತರೆ ಪ್ರವರ್ಗಗಳಿಗೆ ಪಜಾ/ಪಪಂ/ಮಾಜಿಸೈನಿಕ
ಕಿರಿಯ ಸಹಾಯಕರು 2000/- (+18% ಜಿಎಸ್‌ಟಿ) 1000/- (+18% ಜಿಎಸ್‌ಟಿ)
ಗಣಕಯಂತ್ರ ನಿರ್ವಾಹಕರು
ಸಿಪಾಯಿ 1000/- (+18% ಜಿಎಸ್‌ಟಿ) 500/- (+18% ಜಿಎಸ್‌ಟಿ)
ರಾತ್ರಿ ಕಾವಲುಗಾರರು
ವಾಹನ ಚಾಲಕರು
ಗನ್‌ ಮ್ಯಾನ್‌

ಅರ್ಜಿ ಶುಲ್ಕವನ್ನು ನೆಟ್‌ ಬ್ಯಾಂಕಿಂಗ್/‌ ಕ್ರೆಡಿಟ್‌ ಕಾರ್ಡ್/‌ ಡೆಬಿಟ್‌ ಕಾರ್ಡ್‌/ ಯುಪಿಐ ಬಳಸಿಕೊಂಡು ಆನ್ಲೈನ್‌ ಮೂಲಕ ಪಾವತಿಸಬೇಕು.

 ಆಯ್ಕೆವಿಧಾನ/ Selection procedure:

ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಚಾಲ್ತಿಯಲ್ಲಿರುವ ಮೊಬೈಲ್‌ ಸಂಖ್ಯೆ ಮತ್ತು ಇಮೇಲ್‌ ಐಡಿ

ಶೈಕ್ಷಣಿಕ ಮೂಲ ದಾಖಲಾತಿಗಳು

ಇತ್ತೀಚಿನ ಫಾಸ್ಫೋರ್ಟ್‌ ಸೈಜಿನ ಭಾವಚಿತ್ರ

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ,

ಸೇವಾ ದಾಖಲಾತಿಗಳು

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು www.thejamkhandiurbanbank.com ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  4. ನಂತರ ಪೇಮೆಂಟ್‌ ಪೋರ್ಟಲ್‌ ನಲ್ಲಿ ಅಗತ್ಯವಿರುವ ಅರ್ಜಿ ಶುಲ್ಕವನ್ನು ಪಾವತಿಸಿ
  5. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.

JOB NEWS: ಕರ್ನಾಟಕದ ನವೋದಯ ವಿದ್ಯಾಲಯಗಳಲ್ಲಿ ಖಾಲಿ ಇರುವ 64 ಹಾಸ್ಟೆಲ್‌ ವಾರ್ಡನ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 35000/- Jawahar Navoday Hostel Warden  2025

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-08-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-09-2025    

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:
ಅರ್ಜಿ ಸಲ್ಲಿಸಿ/ Apply Online:
ವೆಬ್ಸೈಟ್/ Website :

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top