ಪಿಎಚ್‌ಡಿ ಅಭ್ಯರ್ಥಿಗಳಿಗೆ ಸ್ಕಾಲರ್‌ಶಿಫ್‌ ಯೋಜನೆಗೆ ಅರ್ಜಿ ಆಹ್ವಾನ: PhD Scholarship Application Invites 2026   

WhatsApp Group Join Now
Telegram Group Join Now
Spread the love

ಪಿಎಚ್‌ಡಿ ಅಭ್ಯರ್ಥಿಗಳಿಗೆ ಸ್ಕಾಲರ್‌ಶಿಫ್‌ ಯೋಜನೆಗೆ ಅರ್ಜಿ ಆಹ್ವಾನ: PhD Scholarship Application Invites 2026   

ಸ್ನೇಹಿತರೇ ನೀವು ಪಿಎಚ್ಡಿ ಮಾಡುತ್ತಿದ್ದರೇ ಈ ಲೇಖನವನ್ನು ಪೂರ್ತಿಯಾಗಿ ಓದಿಕೊಳ್ಳಿ. ರಾಜ್ಯ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಎಚ್‌ ಡಿ ವ್ಯಾಸಂಗ ಮಾಡುತ್ತಿರುವ ಹಿಂದೂಳಿದ ವರ್ಗಗಳ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಆಫ್ಲೈನ್‌ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಮಾಹಿತಿಯನ್ನು ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. 

2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:10.02.2025ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್.ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, II(ಎ), III(ಎ) ಹಾಗೂ III(ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:09.01.2026ರ ಸಂಜೆ 5.30 ಗಂಟೆ – https://bcwd.karnataka.gov.in ಲಭ್ಯವಿದ್ದು, ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿ, ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಪ ಪರೀಕ್ಷಾ ಪ್ರಾಧಿಕಾರದಿಂದ ನಡೆಯಬೇಕಿದ್ದ ಪರೀಕ್ಷೆಗಳು ಏಕಾಏಕಿ ಮುಂದಕ್ಕೆ!, ವಿವಿಧ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದ ಕೆಇಎ

ಶೈಕ್ಷಣಿಕ ವಿದ್ಯಾರ್ಹತೆಗಳು:

(a) ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.

(b) ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಗಳಲ್ಲಿ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿಎಚ್.ಡಿ ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು.

(c) ಅಭ್ಯರ್ಥಿಗಳು ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನಕ್ಕಾಗಿ ಮಾಡಿಸಿರುವ ನೋಂದಾಣಿ ದಿನಾಂಕವು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸುವ ಕೊನೆಯ ದಿನಾಂಕಕ್ಕೆ ಹಿಂದಿನ 2 ವರ್ಷದೊಳಗಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸುವ ಕೊನೆಯ ದಿನಾಂಕಕ್ಕೆ ಅನ್ವಯಿಸುವಂತೆ  ಅಭ್ಯರ್ಥಿಯ ಗರಿಷ್ಠ ವಯೋಮಿತಿ 35 ವರ್ಷಗಳು.

ನಿಗದಿಪಡಿಸಿರುವ ಅರ್ಹತೆಗಳು:

(a) ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

(b) ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, II(ಎ), III(ಎ) ಅಥವಾ III(ಬಿ) ಗೆ ಸೇರಿರಬೇಕು.

(c) ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಹಾಗೂ ಕರ್ನಾಟಕದಲ್ಲಿರುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ (Full Time) ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು.

(d) ಈ ಸೌಲಭ್ಯವನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಯು ಭಾರತ ಸರ್ಕಾರ/ಕರ್ನಾಟಕ ಸರ್ಕಾರ/ವಿಶ್ವವಿದ್ಯಾಲಯ ಅಥವಾ ಇತರೆ ಯಾವುದೇ ಸಂಸ್ಥೆಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗೆ ಆಯ್ಕೆಯಾಗಿರಬಾರದು ಹಾಗೂ ಫೆಲೋಶಿಪ್ ಪಡೆದಿರಬಾರದು/ಪಡೆಯಬಾರದು. ಯಾವುದೇ ಕಾರಣಕ್ಕೂ ಅಭ್ಯರ್ಥಿಯು ಪಿಎಚ್.ಡಿ ಅಧ್ಯಯನವನ್ನು ಅರ್ಧದಲ್ಲಿ ಮೊಟಕುಗೊಳಿಸಬಾರದು. ಮೊಟಕುಗೊಳಿಸಿದಲ್ಲಿ ಅಂತಹ ಅಭ್ಯರ್ಥಿಗೆ ನೀಡಿದ ವ್ಯಾಸಂಗ ವೇತನ/ಫೆಲೋಶಿಪ್ ಮೊತ್ತವನ್ನು ಸಂಬಂಧಪಟ್ಟ ಅಭ್ಯರ್ಥಿ ಹಾಗೂ ಅವರ ತಂದೆ-ತಾಯಿ/ಪೋಷಕರು ಸರ್ಕಾರಕ್ಕೆ ಹಿಂದಿರುಗಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸೂಚನೆಗಳು

  1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯವನ್ನು ಪಡೆಯಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ.
  2. ಕೇಂದ್ರ ಸರ್ಕಾರ/ರಾಜ್ಯ ಸರ್ಕಾರ/ಅನುದಾನಿತ ಸಂಸ್ಥೆ/ಸಾರ್ವಜನಿಕ ಸ್ವಾಮ್ಯತೆಗೆ ಒಳಪಟ್ಟ ಸಂಸ್ಥೆಗಳ ಉದ್ಯೋಗಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಹರಲ್ಲ.
  3. 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರಬೇಕು (ದಿನಾಂಕ:10.02.2025ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್.ಡಿ ಪ್ರಾರಂಭಿಸಿರಬೇಕು).
  4. ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಮಾಸಿಕ ರೂ.10,000/- ದಂತೆ ಗರಿಷ್ಠ 3 ವರ್ಷಗಳ ಅವಧಿಗೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ಪ್ರವರ್ಗವಾರು, ಮೀಸಲಾತಿ, ಮೆರಿಟ್, ಅನುದಾನ ಲಭ್ಯತೆ ಹಾಗೂ ಹಾಜರಾತಿಗೆ ಅನುಗುಣವಾಗಿ ಹಾಗೂ ನಿಯಮಾನುಸಾರ ಅರ್ಹ ಅಭ್ಯರ್ಥಿಗಳಿಗೆ ನೀಡಲಾಗುವುದು.
  5. ತಹಶೀಲ್ದಾರರಿಂದ ಪಡೆಯುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರವು ಕಡ್ಡಾಯವಾಗಿ ಅಭ್ಯರ್ಥಿಯ ಹೆಸರಿನಲ್ಲಿಯೇ ಇರಬೇಕು ಹಾಗೂ ಅದು expiry ಆಗಿರಬಾರದು.
  6. ಒಂದೇ ಕುಟುಂಬದ ಗರಿಷ್ಠ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
  7. ಒಬ್ಬ ಅಭ್ಯರ್ಥಿಗೆ ಒಂದು ಬಾರಿ ಮಾತ್ರ ಪಿಎಚ್.ಡಿ ಅಧ್ಯಯನಕ್ಕಾಗಿ ಈ ಸೌಲಭ್ಯವನ್ನು ನೀಡಲಾಗುವುದು.

ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರಾತಿಗಾಗಿ ನಿಗಿದಿಪಡಿಸಿರುವ ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯಮಿತಿ.

(a) ಪ್ರವರ್ಗ-I- ರೂ.4.50 ಲಕ್ಷ.

(b) ಪ್ರವರ್ಗ-II(ಎ), III(ಎ) ಮತ್ತು III(ಬಿ) – ರೂ.3.50 ಲಕ್ಷ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ:

ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಆಫ್-ಲೈನ್ ಮೂಲಕ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸುವುದು. ಅಭ್ಯರ್ಥಿಗಳು ತಾವು ಪಿಎಚ್‌.ಡಿ ಅಧ್ಯಯನ ಮಾಡುತ್ತಿರುವ ವಿಶ್ವವಿದ್ಯಾಲಯ/ಸಂಸ್ಥೆ ಇರುವಂತಹ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಇದನ್ನು ಸಲ್ಲಿಸುವುದು.

 

ಅರ್ಜಿ ಸಲ್ಲಿಸಲು ಲಗತ್ತಿಸಬೇಕಾದ ದಾಖಲೆಗಳು:

ಎಸ್.ಎಸ್.ಎಲ್.ಸಿ/10ನೇ ತರಗತಿಯ ಅಂಕಪಟ್ಟಿ.

ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

ವಾಸಸ್ಥಳ ಪ್ರಮಾಣ ಪತ್ರ.

ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳು.

ಪಿಎಚ್.ಡಿ ಅಧ್ಯಯನಕ್ಕಾಗಿ ನೋಂದಣಿ ಮಾಡಿರುವ ಬಗ್ಗೆ ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಯಿಂದ ಪ್ರಮಾಣ ಪತ್ರ (ಇದರಲ್ಲಿ ನೋಂದಣಿ ದಿನಾಂಕವು ಕಡ್ಡಾಯವಾಗಿ ನಮೂದಾಗಿರಬೇಕು).

ಇತರೆ ಯಾವುದೇ ಮೂಲಗಳಿಂದ ವ್ಯಾಸಂಗ ವೇತನಕ್ಕೆ ಆಯ್ಕೆಯಾಗದಿರುವ ಬಗ್ಗೆ ವಿಶ್ವವಿದ್ಯಾಲಯ/ಶಿಕ್ಷಣ ಸಂಸ್ಥೆ/ಕಾಲೇಜಿನಿಂದ ನಿಗದಿತ ನಮೂನೆಯಲ್ಲಿ ದೃಢೀಕರಣ ಪತ್ರ (ಇದಕ್ಕೆ ಸಂಬಂಧಿಸಿದ ನಮೂನೆಯನ್ನು ಇಲಾಖಾ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸಂಬಂಧಿಸಿದವರಿಂದ ದೃಢೀಕರಿಸಿ ಸಲ್ಲಿಸುವುದು).

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-01-2026

 

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top