RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Apply for NIRDPR Recruitment 2026
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆ (NIRDPR) ನಲ್ಲಿ ಖಾಲಿ ಇರುವ ಸೀನಿಯರ್ ಕೆಪಾಸಿಟ್ ಬಿಲ್ಡಿಂಗ್ ಕನ್ಸಲ್ಟೆಂಟ್ ಹಾಗೂ ಕೆಪಾಸಿಟಿ ಬಿಲ್ಡಿಂಗ್ ಕನ್ಸಲ್ಟೆಂಟ್ (ರೆಗ್ಯೂಲರ್ & ಬ್ಯಾಕ್‌ಲಾಗ್) ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. NIRDPR ನಲ್ಲಿ ಖಾಲಿ ಇರುವ 98 ಹುದ್ದೆಗಳನ್ನು ತುಂಬಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಇನ್ನು ಅರ್ಜಿ ಸಲ್ಲಿಸದವರು ಕೂಡಲೇ ಅರ್ಜಿ ಸಲ್ಲಿಸಿ.
National Institute of Rural Development & Panchayath, Hyderabad ದಲ್ಲಿ ಖಾಲಿ ಇರುವ 98 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 29-01-2026 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆ (NIRDPR) ನಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ಶಿವಮೊಗ್ಗ ಜಿಲ್ಲಾ ಗೃಹರಕ್ಷಕ ದಳದಲ್ಲಿ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ!
ಹುದ್ದೆಗಳ ವಿವರ/ Post Details:
| ಸಂಸ್ಥೆ | ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆ (NIRDPR) |
| ಹುದ್ದೆಗಳ ಹೆಸರು | ಸೀನಿಯರ್ ಕೆಪಾಸಿಟ್ ಬಿಲ್ಡಿಂಗ್ ಕನ್ಸಲ್ಟೆಂಟ್ ಹಾಗೂ ಕೆಪಾಸಿಟಿ ಬಿಲ್ಡಿಂಗ್ ಕನ್ಸಲ್ಟೆಂಟ್ |
| ಹುದ್ದೆಗಳ ಸಂಖ್ಯೆ | 98 ಹುದ್ದೆಗಳು |
| ಕೆಲಸದ ಸ್ಥಳ | ದೇಶದ ಎಲ್ಲ ಕಡೆ |
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಸೀನಿಯರ್ ಕೆಪಾಸಿಟ್ ಬಿಲ್ಡಿಂಗ್ ಕನ್ಸಲ್ಟೆಂಟ್ | 10 ಹುದ್ದೆಗಳು |
| ಕೆಪಾಸಿಟಿ ಬಿಲ್ಡಿಂಗ್ ಕನ್ಸಲ್ಟೆಂಟ್ | 88 ಹುದ್ದೆಗಳು |
ಮೀಸಲಾತಿವಾರು ಹಂಚಿಕೆ:
ಸಾಮಾನ್ಯ ವರ್ಗ: 31
ಪರಿಶಿಷ್ಟ ಜಾತಿ: 20
ಪರಿಶಿಷ್ಟ ಪಂಗಡ: 10
ಇತರೆ ಹಿಂದೂಳಿದ ವರ್ಗ: 34
ಆರ್ಥಿಕವಾಗಿ ಹಿಂದೂಳಿದ ವರ್ಗ: 03
ಅಂಗವಿಕಲ : 06
ವೇತನ/ Salary Scale
ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆ (NIRDPR) ನಿಯಾಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.
| ಹುದ್ದೆಗಳ ಹೆಸರು | ವೇತನ |
| ಸೀನಿಯರ್ ಕೆಪಾಸಿಟ್ ಬಿಲ್ಡಿಂಗ್ ಕನ್ಸಲ್ಟೆಂಟ್ | ರೂ. 75000/- |
| ಕೆಪಾಸಿಟಿ ಬಿಲ್ಡಿಂಗ್ ಕನ್ಸಲ್ಟೆಂಟ್ | ರೂ.60000/- |
ವಯೋಮಿತಿ/ Age limit:
ದಿನಾಂಕ 31-01-2026ಕ್ಕೆ ನಿಗದಿಪಡಿಸಿದಂತೆ
ಗರಿಷ್ಟ ವಯೋಮಿತಿ 50 ವರ್ಷ
ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ನಿಗದಿಪಡಿಸಿದಷ್ಷು ವರ್ಷಗಳ ಅನುಭವವನ್ನು ಹೊಂದಿರಬೇಕು.
ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ/ Application Fees:
| ವರ್ಗ/ ಕೆಟಗೆರಿ | ಪಾವತಿಸಬೇಕಾದ ಶುಲ್ಕ |
| ಪ.ಜಾ/ಪ.ಪಂ/ ಅಂಗವಿಕಲ | ಅರ್ಜಿ ಶುಲ್ಕವಿಲ್ಲ |
| ಸಾಮಾನ್ಯ/ಓಬಿಸಿ/ಇಡಬ್ಲೂಎಸ್ | ರೂ.300/- |
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಆಧಾರ್ ಕಾರ್ಡ್,
ಇತ್ತೀಚಿನ ಫಾಸ್ಪೋರ್ಟ್ ಸೈಜಿನ ಭಾವಚಿತ್ರ,
ಚಾಲ್ತಿಯಲ್ಲಿರುವ ಇಮೇಲ್ ಐಡಿ & ಮೊಬೈಲ್ ಸಂಖ್ಯೆ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಮಾಜಿಸೈನಿಕ, ಹಾಗೂ ಇತರೆ ಪ್ರಮಾಣಪತ್ರಗಳು.
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಹಾಕುವ ವಿಧಾನ/ Application Submission Method:
- ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
- ಅಭ್ಯರ್ಥಿಗಳು www.nirdpr.in/ ವೆಬ್ಸೈಟ್ ಗ ಬೇಟಿ ನೀಡಿ Career Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
- Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-01-2026
Important Links/ ಪ್ರಮುಖ ಲಿಂಕುಗಳು:
| ಅಧಿಸೂಚನೆ/ Notification: |
| ಅರ್ಜಿ ಸಲ್ಲಿಸಿ/ Apply Online: |
| ವೆಬ್ಸೈಟ್/ Website : |
ಕೊನೆಯ ಮಾತು:
ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆ (NIRDPR) ನಲ್ಲಿ ಖಾಲಿ ಇರುವ ಸೀನಿಯರ್ ಕೆಪಾಸಿಟ್ ಬಿಲ್ಡಿಂಗ್ ಕನ್ಸಲ್ಟೆಂಟ್ ಹಾಗೂ ಕೆಪಾಸಿಟಿ ಬಿಲ್ಡಿಂಗ್ ಕನ್ಸಲ್ಟೆಂಟ್ (ರೆಗ್ಯೂಲರ್ & ಬ್ಯಾಕ್‌ಲಾಗ್) ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ನೇಮಕಾತಿ ಕುರಿತಂತೆ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.
