ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನೇಮಕಾತಿ 2026: ಕಿರಿಯ ಸಹಾಯಕ ಮತ್ತು ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ: Chartered Sahakari Bank Niyamitha Recruitment 2026
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ವಿನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಚಾರ್ಟರ್ಡ್ ಸಹಕಾರಿ ಬ್ಯಾಂಕ್ ವತಿಯಿಂದ ಖಾಲಿ ಇರುವ ಕಿರಿಯ ಸಹಾಯಕ ಮತ್ತು ಚಾಲಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ಸುಪ್ರಿಂಕೋರ್ಟ್ ನಲ್ಲಿ ಖಾಲಿ ಇರುವ 90 ಕ್ಲರ್ಕ್ ಕಮ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನೇಮಕಾತಿಯ ಪಕ್ಷಿನೋಟ:
| ನೇಮಕಾತಿ ಕಛೇರಿ: ಚಾರ್ಟರ್ಡ್ ಸಹಕಾರಿ ಬ್ಯಾಂಕ್ |
| ಹುದ್ದೆಗಳ ಪದನಾಮ: ಕಿರಿಯ ಸಹಾಯಕ & ಚಾಲಕ |
| ಹುದ್ದೆಗಳ ಸಂಖ್ಯೆ: – 09 |
| ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು |
ಬೆಂಗಳೂರಿನ ಕೋರಮಂಗಲದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ನಿಗದಿಪಡಿಸಿದ ದಿನಾಂಕದೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತಾದ ಹುದ್ದೆಯ ವಿವರ, ವಿದ್ಯಾರ್ಹತೆ, ವಯೋಮಿತಿ, ಮತ್ತು ಅರ್ಜಿ ಸಲ್ಲಿಸುವ ವಿಧಾನದ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
1. ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ (Vacancy Details & Salary)
ಒಟ್ಟು 9 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಹುದ್ದೆವಾರು ವಿವರ ಮತ್ತು ವೇತನ ಶ್ರೇಣಿ ಈ ಕೆಳಗಿನಂತಿದೆ:
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ | ವೇತನ ಶ್ರೇಣಿ (ರೂಗಳಲ್ಲಿ) |
| ಕಿರಿಯ ಸಹಾಯಕರು (Junior Assistant) | 7 |
₹37,500 – ₹76,100 + ಇತರೆ ಭತ್ಯೆಗಳು |
| ಚಾಲಕ ಕಂ ಅಟೆಂಡರ್ (Driver cum Attender) | 2 |
₹29,600 – ₹52,800 + ಇತರೆ ಭತ್ಯೆಗಳು |
2. ಶೈಕ್ಷಣಿಕ ಅರ್ಹತೆಗಳು (Educational Qualification)
ಅಭ್ಯರ್ಥಿಗಳು ಈ ಕೆಳಕಂಡ ಅರ್ಹತೆಯನ್ನು ಹೊಂದಿರಬೇಕು:
- ಕಿರಿಯ ಸಹಾಯಕರು:
- o ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿಯಲ್ಲಿ ಸರಾಸರಿ ಶೇಕಡ 60 ಮತ್ತು ಅದಕ್ಕಿಂತ ಹೆಚ್ಚು ಅಂಕಗಳೊಂದಿಗೆ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು.
- o ಬಿ.ಕಾಂ, ಎಂ.ಕಾಂ ಅಥವಾ ಎಂ.ಬಿ.ಎ (ಫೈನಾನ್ಸ್) ಪದವೀಧರರಿಗೆ ಆದ್ಯತೆ ನೀಡಲಾಗುವುದು.
- o ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
- o ಕನ್ನಡವನ್ನು ಓದಲು, ಬರೆಯಲು ಮತ್ತು ಸ್ಪಷ್ಟವಾಗಿ ಮಾತನಾಡಲು ಬರಬೇಕು.
- ಚಾಲಕ ಕಂ ಅಟೆಂಡರ್:
- o ಎಸ್.ಎಸ್.ಎಲ್.ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
- o ಕಾನೂನುಬದ್ಧ ಲಘು ಮೋಟಾರು ವಾಹನ (LMV) ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
3. ವಯೋಮಿತಿ (Age Limit)
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ ವಿವರ ಹೀಗಿದೆ:
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1: 40 ವರ್ಷಗಳು.
- ಹಿಂದುಳಿದ ಜಾತಿ ಮತ್ತು ವರ್ಗದವರಿಗೆ (OBC): 38 ವರ್ಷಗಳು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷಗಳು.
4. ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕವನ್ನು “Chartered Sahakari Bank Niyamitha” ಅವರ ಹೆಸರಿಗೆ ಡಿಮ್ಯಾಂಡ್ ಡ್ರಾಫ್ಟ್ (DD) ಮೂಲಕ ಪಾವತಿಸಬೇಕು. ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ.
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1: ₹1,200/-.
- ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ₹2,000/-.
5. ಆಯ್ಕೆ ವಿಧಾನ (Selection Process)
- ಕಿರಿಯ ಸಹಾಯಕರು:
- o 200 ಅಂಕಗಳ ಲಿಖಿತ ಪರೀಕ್ಷೆ ನಡೆಯಲಿದೆ (ಕನ್ನಡ, ಇಂಗ್ಲಿಷ್, ಸಾಮಾನ್ಯ ಜ್ಞಾನ, ಸಹಕಾರಿ ವಿಷಯ, ಸಂವಿಧಾನ ಮತ್ತು ಬ್ಯಾಂಕಿಂಗ್ ವಿಷಯಗಳು).
- ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳಿಗೆ ಶೇ. 85 ಮತ್ತು ಸಂದರ್ಶನಕ್ಕೆ ಶೇ. 15 ಅಂಕಗಳನ್ನು ನಿಗದಿಪಡಿಸಲಾಗಿದೆ.
- o 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
- ಚಾಲಕ ಕಂ ಅಟೆಂಡರ್:
- o ಕನ್ನಡ ಭಾಷೆ ಮತ್ತು ಸಾಮಾನ್ಯ ಜ್ಞಾನದ ಪರೀಕ್ಷೆ ಹಾಗೂ ವಾಹನ ಚಾಲನಾ ಸಾಮರ್ಥ್ಯದ ಪರೀಕ್ಷೆ ನಡೆಸಲಾಗುತ್ತದೆ.
6. ಪ್ರಮುಖ ದಿನಾಂಕಗಳು (Important Dates)
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-01-2026.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-02-2026 (ಸಜೆ 5:30 ರ ಒಳಗೆ).
RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:
7. ಅರ್ಜಿ ಸಲ್ಲಿಸುವುದು ಹೇಗೆ? (How to Apply)
- ಬ್ಯಾಂಕಿನ ವೆಬ್‌ಸೈಟ್ www.csbank.in ಅಥವಾ charteredsahakari.bank.in ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
- ಅರ್ಜಿಯನ್ನು ಭರ್ತಿ ಮಾಡಿ, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಬೇಕು.
- ವಿದ್ಯಾರ್ಹತೆ, ಜನ್ಮ ದಿನಾಂಕ ಮತ್ತು ಅನುಭವ ಪತ್ರಗಳ ಸ್ವಯಂ ದೃಢೀಕರಿಸಿದ ನಕಲು ಪ್ರತಿಗಳನ್ನು ಲಗತ್ತಿಸಿ.
- ಅರ್ಜಿ ಶುಲ್ಕದ ಡಿಮ್ಯಾಂಡ್ ಡ್ರಾಫ್ಟ್ (DD) ಯನ್ನು ಲಗತ್ತಿಸಿ.
- ಲಕೋಟೆಯ ಮೇಲೆ “ಯಾವ ಹುದ್ದೆಗಾಗಿ ಅರ್ಜಿ” (ಯಾವ ಹುದ್ದೆಗೆ ಎಂಬುದನ್ನು ನಮೂದಿಸಿ) ಎಂದು ಬರೆದು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು ಅಥವಾ ಖುದ್ದಾಗಿ ತಲುಪಿಸಬೇಕು:
ವಿಳಾಸ: ಚಾರ್ಟಡ್ ಸಹಕಾರಿ ಬ್ಯಾಂಕ್ ನಿಯಮಿತ, ನಂ. 1, 1ನೇ ಮುಖ್ಯ ರಸ್ತೆ, 1ನೇ ಬ್ಲಾಕ್, ಕೋರಮಂಗಲ, ಬೆಂಗಳೂರು – 560034.
Important Links/ ಪ್ರಮುಖ ಲಿಂಕುಗಳು:
| ಅಧಿಸೂಚನೆ/ Notification: |
| ಅರ್ಜಿ ನಮೂನೆ/ Application form: |
| ವೆಬ್ಸೈಟ್/ Website : |

ಕೊನೆಯ ಮಾತು:
ಚಾರ್ಟರ್ಡ್ ಸಹಕಾರಿ ಬ್ಯಾಂಕ್ ವತಿಯಿಂದ ಖಾಲಿ ಇರುವ ಕಿರಿಯ ಸಹಾಯಕ ಮತ್ತು ಚಾಲಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹತ್ತನೇ ಹಾಗೂ ಯಾವುದೇ ಪದವಿ ಆದವರು ಈ ಉದ್ಯೋಗಾವಕಾಶವನ್ನು ಪಡೆದುಕೊಳ್ಳಬಹುದು. ಈ ನೇಮಕಾತಿ ಕುರಿತಂತೆ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.
FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು)
ಪ್ರಶ್ನೆ 1: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಉತ್ತರ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18-02-2026 ಆಗಿದೆ.
ಪ್ರಶ್ನೆ 2: ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದೇ? ಉತ್ತರ: ಇಲ್ಲ. ಅರ್ಜಿಗಳನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.
ಪ್ರಶ್ನೆ 3: ಡಿಡಿ (DD) ಯಾರ ಹೆಸರಿನಲ್ಲಿ ತೆಗೆಯಬೇಕು? ಉತ್ತರ: ಡಿಡಿಯನ್ನು “Chartered Sahakari Bank Niyamitha” ಹೆಸರಿನಲ್ಲಿ ಪಡೆಯಬೇಕು.
ಪ್ರಶ್ನೆ 4: ಕಿರಿಯ ಸಹಾಯಕ ಹುದ್ದೆಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವೇ? ಉತ್ತರ: ಹೌದು, ಕಿರಿಯ ಸಹಾಯಕ ಹುದ್ದೆಗೆ ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
ಪ್ರಶ್ನೆ 5: ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರೊಬೇಷನರಿ ಅವಧಿ ಇದೆಯೇ? ಉತ್ತರ: ಹೌದು, ಆಯ್ಕೆಯಾದ ಅಭ್ಯರ್ಥಿಗಳನ್ನು 2 ವರ್ಷಗಳ ಅವಧಿಗೆ ಪ್ರೊಬೇಷನರಿ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು.
