ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಪರೀಕ್ಷೆಯ ಕುರಿತು ಮಾಹಿತಿ: KEA IDCCD Training Exam Updates
ನಮಸ್ತೆ ಗೆಳೆಯರೇ, ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳ ಉಚಿತ ಪೂರ್ವಭಾವಿ ತರಬೇತಿ ಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನಿಯೋಜಿಸುವ ಕುರಿತಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆಗೊಳಿಸಲಾಗಿದೆ.
ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಯುಪಿಎಸ್ಸಿ ಪೂರ್ವಭಾವಿ ತರಬೇತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 12-1-2025 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಹಾಜರಾಗಬೇಕು. ಅದಕ್ಕೆ ಪೂರ್ವದಲ್ಲಿ ಈಗಾಗಲೇ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆಗೊಂಡಿರುವ ತಮ್ಮ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪರೀಕ್ಷಾ ಕೇಂದ್ರಗಳಿಗೆ ತೆಗೆದುಕೊಂಡು ಹೋಗ ತಕ್ಕದ್ದು.
2024-25 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯುಪಿಎಸ್ಸಿ ಪೂರ್ವಬಾವಿ ಪರೀಕ್ಷೆಯ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಈ ಹಿಂದೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸಿದವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 12.01.2025 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಬೇಕು. ಅದಕ್ಕೆ ಸಂಬಂಧಿಸಿದಂತೆ ಪ್ರವೇಶ ಪತ್ರಗಳನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆಗೊಳಿಸಲಾಗಿರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ತಮ್ಮ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆಯ ದಿನದಂದು ಹಾಜರಾಗಬೇಕಾಗುತ್ತದೆ
ಗಮನದಲ್ಲಿಡಬೇಕಾದ ಅಂಶಗಳು
1. ಇಲಾಖಾ ವೆಬ್ ಸೈಟ್ ನಲ್ಲಿ ಕಾಲಕಾಲಕ್ಕೆ ನೀಡಲಾಗುವ ಮಾಹಿತಿಯು ಅಧಿಕೃತ ಮತ್ತು ಅಂತಿಮವಾಗಿರುತ್ತದೆ.
2. ಇಲಾಖಾ ವತಿಯಿಂದ ಯಾವುದೇ ಪತ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲವಾದ್ದರಿಂದ ಇಲಾಖಾ ವೆಬ್ಸೈಟ್ ಅನ್ನು ಕಾಲಕಾಲಕ್ಕೆ ವೀಕ್ಷಿಸತಕ್ಕದ್ದು ಹಾಗೂ ವೆಬ್ಸೈಟ್ನಲ್ಲಿ ನೀಡಲಾದ ಸೂಚನೆಯನುಸಾರವಾಗಿ ಪ್ರವೇಶ ಪರೀಕ್ಷಾ ಪತ್ರ ಡೌನ್ಲೋಡ್ ಮಾಡಿಕೊಂಡು ಸಾಮಾನ್ಯ ಪ್ರವೇಶ ಪರೀಕ್ಷೆಗೆ ತರಬೇತಿ ಸಂಸ್ಥೆಯ ಆಯ್ಕೆ ಹಾಗೂ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗತಕ್ಕದ್ದು
3. ತಪ್ಪು ಮಾಹಿತಿಯ ಕಾರಣದಿಂದ ಉಂಟಾಗಬಹುದಾದ ಲೋಪಗಳಿಗೆ ಸಂಬಂಧಪಟ್ಟ ಅಭ್ಯರ್ಥಿಗಳೆ ಜವಾಬ್ದಾರರಾಗಿರುತ್ತಾರೆ
4. ನಿಗದಿತ ದಿನಾಂಕದಂದು ಪ್ರವೇಶ ಪರೀಕ್ಷೆ ಕೌನ್ಸಿಲಿಂಗ್ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸುವುದಿಲ್ಲ. ಇಂತಹ ನಿರ್ಲಕ್ಷಕ್ಕೆ ಅಭ್ಯರ್ಥಿಗಳೇ ನೇರ ಹೊಣೆಗಾರರಾಗಿರುತ್ತಾರೆ
ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳುವ ವಿಧಾನ
1. ಅರ್ಜಿ ಸಲ್ಲಿಸಿದವರು ಕೂಡಲೇ https://swdservices.karnataka.gov.in/IGCCD ವೆಬ್ಸೈಟ್ ಗೆ ಭೇಟಿ ನೀಡಿ.
2. ನಂತರ ವೆಬ್ಸೈಟ್ ನ ಹೋಂ ಪೇಜ್ ನಲ್ಲಿ ಸ್ಕ್ರೋಲ್ ಆಗುತ್ತಿರುವ ಕೆಇಎ ಸಿಇಟಿ ಪರೀಕ್ಷೆಯ ಹಾಲ್ ಟಿಕೆಟ್ ಡೌನ್ಲೋಡ್ ಎಂಬ ಬಟನ್ ನ ಮೇಲೆ ಕ್ಲಿಕ್ ಮಾಡಿ
3. ನಂತರ UPSC Preliminary ಪರೀಕ್ಷೆಯನ್ನು ಆಯ್ಕೆ ಮಾಡಿಕೊಂಡು ಅಪ್ಲಿಕೇಶನ್ ನಂಬರ್ ಅನ್ನು ನೀಡಿ ನಿಮ್ಮ ಹೆಸರಿನ ನಾಲ್ಕು ಇಂಗ್ಲಿಷ್ ಲೆಟರ್ಸ್ ಗಳನ್ನು ನಮೂದಿಸಿ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ
4. ನಿಮ್ಮ ಅಡ್ಮಿಷನ್ ಟಿಕೆಟ್ ಡೌನ್ಲೋಡ್ ಆಗುತ್ತದೆ, ಅದರಲ್ಲಿ ನೀಡಿರುವ ಸ್ಥಳ ಮತ್ತು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ.
ಪ್ರಮುಖ ಲಿಂಕುಗಳು
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ. ಆದಾಗ್ಯೂ ಆಫೀಶಿಯಲ್ ವೆಬ್ಸೈಟ್/ ಸಂಸ್ಥೆಯನ್ನ ಒಮ್ಮೆ ಸಂಪರ್ಕಿಸಿ ಮತ್ತೊಮ್ಮೆ ಖಚಿತ ಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಿ.