ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 31000/- UASD JRF Jobs 2025
ನಮಸ್ತೆ ಸ್ನೇಹಿತರೆ, ಕೃಷಿ ಮಹಾವಿದ್ಯಾಲಯ, ಧಾರವಾಡ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಧಾರವಾಡದ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೃಷಿ ಮಹಾವಿದ್ಯಾಲಯದಿಂದ ನಡೆಸಲಾಗುವ ನೇರ ಸಂದರ್ಶನಕ್ಕೆ ನಿಗದಿ ಪಡಿಸಿದ ದಿನಾಂಕದಂದು ಹಾಜರಾಗಲು ಸೂಚಿಸಲಾಗಿದೆ.
ಕಿರಿಯ ಸಂಶೋಧನಾರ್ಥಿ ಹುದ್ದೆಗಳ ಭರ್ತಿ ಕುರಿತಂತೆ ಕೃಷಿ ಮಹಾವಿದ್ಯಾಲಯದಿಂದ ನೇರ ಸಂದರ್ಶನವನ್ನು ದಿನಾಂಕ 12 ಫೆಬ್ರುವರಿ 2025 ರಂದು ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಭ್ಯರ್ಥಿಗಳು ಸದರಿ ದಿನದಂದು ಕೃಷಿ ಮಹಾವಿದ್ಯಾಲಯದ ಸಂದರ್ಶನ ಸ್ಥಳಕ್ಕೆ ಆಗಮಿಸಿ, ನೇರ ಸಂದರ್ಶನವನ್ನು ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಿ.
ಧಾರವಾಡದ ಕೃಷಿ ಮಹಾವಿದ್ಯಾಲಯದಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ | ಕೃಷಿ ಮಹಾವಿದ್ಯಾಲಯ |
ಹುದ್ದೆಗಳ ಹೆಸರು | ಕಿರಿಯ ಸಂಶೋಧನಾರ್ಥಿ |
ಹುದ್ದೆಗಳ ಸಂಖ್ಯೆ | 01 |
ಕೆಲಸದ ಸ್ಥಳ | ಧಾರವಾಡ |
ನೇಮಕಾತಿಯ ಕಾಲಾವಧಿ
ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಅಥವಾ ಯೋಜನೆ ಮುಕ್ತಾಯವಾಗುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ.
ವೇತನ ಅಥವಾ ಗೌರವದನ
ಜೂ. ರಿಸರ್ಚ್ ಫೆಲೋ ಆಗಿ ಆಯ್ಕೆಯಾಗುವವರಿಗೆ ಮಾಸಿಕ ರೂ. 31000/- ಮತ್ತು 16% ಮನೆ ಬಾಡಿಗೆ ಭತ್ಯೆ ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ
ಮಾನ್ಯತಾ ಹೊಂದಿದ ವಿಶ್ವವಿದ್ಯಾಲಯದಿಂದ Ph.D/ M.Sc (Agri) in Molecular Biology and Biotechnology/ Genetics and Plant breeding ವಿದ್ಯಾರ್ಹತೆಯನ್ನು ಹೊಂದಿರಬೇಕು. ಹಾಗೂ ಸಂಬಂಧಿಸಿದ ವಿಷಯದಲ್ಲಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ
ಗರಿಷ್ಟ ವಯೋಮಿತಿ 40 ವರ್ಷ
ಆಯ್ಕೆ ವಿಧಾನ
ಜೂ. ರಿಸರ್ಚ್ ಫೆಲೋ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ
ನೇರ ಸಂದರ್ಶನಕ್ಕೆ ಅಗತ್ಯವಿರುವ ದಾಖಲೆಗಳು
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಸೇವಾ ದಾಖಲಾತಿಗಳು
ನೇರ ಸಂದರ್ಶನ ನಡೆಯುವ ಸ್ಥಳ
ಡೀನ್ (ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡ
ನೇರ ಸಂದರ್ಶನ ನಡೆಯುವ ದಿನಾಂಕ
ಅಧಿಸೂಚನೆಯ ಅನುಸಾರ ದಿನಾಂಕ 12.02.2025 ರಂದು ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನ ಆರಂಭವಾಗುತ್ತದೆ
ಅಧಿಕೃತ ಲಿಂಕುಗಳು
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ. ಆದಾಗ್ಯೂ ಆಫೀಶಿಯಲ್ ವೆಬ್ಸೈಟ್/ ಸಂಸ್ಥೆಯನ್ನ ಒಮ್ಮೆ ಸಂಪರ್ಕಿಸಿ ಮತ್ತೊಮ್ಮೆ ಖಚಿತ ಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಿ.