ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Revenue Dept. SPLOCA Jobs 2025

WhatsApp Group Join Now
Telegram Group Join Now
Spread the love

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Revenue Dept. SPLOCA Jobs 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಮತ್ತೊಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಕಂದಾಯ ಇಲಾಖೆಯ ಅಡಿಯಲ್ಲಿ ಬರುವ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ, ಬೆಂಗಳೂರು ವತಿಯಿಂದ ಖಾಲಿ ಇರುವ ಕಿರಿಯ ಕಾರ್ಯದರ್ಶಿ, ಅಕೌಂಟ್ಸ್ ಸುಪರಿಡೆಂಟ್, ಅಸಿಸ್ಟೆಂಟ್ ಕಂಟ್ರೋರ್ ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ, ಬೆಂಗಳೂರುನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 05-05-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಡಿಸಿ ಆಫೀಸಿನಲ್ಲಿ ಖಾಲಿ ಇರುವ ಬ್ಲಾಕ್ ಫೆಲೋ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 55000/-

ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ಕಂದಾಯ ಇಲಾಖೆಯ ವಿಶೇಷಾಧಿಕಾರಿ & ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ
ಹುದ್ದೆಗಳ ಪದನಾಮ: ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ
ಹುದ್ದೆಗಳ ಸಂಖ್ಯೆ: 06 ಹುದ್ದೆಗಳು
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು

ಹುದ್ದೆಗಳ ವಿವರ & ವೇತನ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ ವೇತನ
ಅಸಿಸ್ಟೆಂಟ್ ಕಂಟ್ರೋಲರ್ 01 72000/-
ಆಡಿಟ್ ಆಫೀಸರ್ 01 60000/-
ಅಕೌಂಟ್ಸ್ ಸುಪರಿಟೆಂಡೆಂಟ್ 01 56000/-
ಲೀಗಲ್ ಆಫೀಸರ್ 01 65000-75000
ಪ್ರೈವೇಟ್ ಸೆಕ್ರೆಟರಿ (ಜೂನಿಯರ್) 01 35000/-
IT ಪರ್ಸನಲ್/ ಜೂ. ಪ್ರೋಗ್ರಾಮರ್ & ನೆಟ್ವರ್ಕಿಂಗ್ ಮ್ಯಾನೇಜರ್ 01 45000-50000

ವಿದ್ಯಾರ್ಹತೆ & ಅನುಭವ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಅಸಿಸ್ಟೆಂಟ್ ಕಂಟ್ರೋಲರ್ ಬಿಕಾಂ/ ಎಂಕಾಂ ಜೊತೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿರಬೇಕು.
ಆಡಿಟ್ ಆಫೀಸರ್
ಅಕೌಂಟ್ಸ್ ಸುಪರಿಟೆಂಡೆಂಟ್
ಲೀಗಲ್ ಆಫೀಸರ್ LLB/ LLM ಮುಗಿಸಿಬೇಕು
ಪ್ರೈವೇಟ್ ಸೆಕ್ರೆಟರಿ (ಜೂನಿಯರ್) ಪದವಿ & ಕಂಪ್ಯೂಟರ್ ಜ್ಞಾನ
IT ಪರ್ಸನಲ್/ ಜೂ. ಪ್ರೋಗ್ರಾಮರ್ & ನೆಟ್ವರ್ಕಿಂಗ್ ಮ್ಯಾನೇಜರ್ ಬಿಇ (CSE) ಮುಗಿದಿರಬೇಕು.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

  1. ವೈಯಕ್ತಿಕ ರೆಸ್ಯೂಮ್
  2. ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
  3. ಅನುಭವ ಪ್ರಮಾಣಪತ್ರ
  4. ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ತೆರಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
  • ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
  • ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ನಂತರ ಅದನ್ನು ಒಂದು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ______________ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
  • ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
  • ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.

ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 12981 ಪಂಚಾಯತ್ ಸೇವಕ್, ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ ಪಾವತಿಸುವುದು:

ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಕಳುಹಿಸಿಕೊಡುವ ವಿಳಾಸ:

ವಿಳಾಸ: ಕಂದಾಯ ಇಲಾಖೆ, ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ, ಬೆಂಗಳೂರು

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-05-2025

ಅಧಿಕೃತ ಲಿಂಕುಗಳು/ Official Links

ನೋಟಿಫಿಕೇಶನ್ ಡೌನ್ಲೋಡ್

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top