ಕರ್ನಾಟಕದ ವಸತಿ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಾರ್ಡಬಾಯ್ (Wardboy) ಹುದ್ದೆಗಳಿಗೆ ಅರ್ಜಿ ಆಹ್ವಾನ: Sainik School Kodagu jobs for warden 2025
ನಮಸ್ತೆ ಸ್ನೇಹಿತರೇ, ಹೊಸ ಉದ್ಯೋಗ ಮಾಹಿತಿಗೆ ಸ್ವಾಗತ, ಕೊಡಗು ಸೈನಿಕ ಶಾಲೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ, ಸೈನಿಕ ಸ್ಕೂಲ್ ನಲ್ಲಿ ಖಾಲಿ ಇರುವ ವಾರ್ಡಬಾಯ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇದೇ ತಿಂಗಳು 9ನೇ ತಾರೀಖು ಕೊನೆಯ ದಿನಾಂಕವಾಗಿದ್ದು, ಇನ್ನು ಅರ್ಜಿ ಸಲ್ಲಿಸದವರು ಕೂಡಲೇ ತಮ್ಮ ತಮ್ಮ ಅರ್ಜಿ ಸಲ್ಲಿಸಿ.
Sainik School, Kodagu ಯಲ್ಲಿನ ವಾರ್ಡಬಾಯ್ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 09-05-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೋತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
JOB NEWS: ಜಿಲ್ಲಾ ಕಾನೂನು ಪ್ರಾಧಿಕಾರದಲ್ಲಿ ಖಾಲಿ ಇರುವ ಆಡಳಿತ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸೈನಿಕ ಶಾಲೆಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಸೈನಿಕ ಶಾಲೆ, ಕೊಡಗು |
ಹುದ್ದೆಗಳ ಪದನಾಮ: ವಾರ್ಡಬಾಯ್ |
ಹುದ್ದೆಗಳ ಸಂಖ್ಯೆ: 02 |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಕೊಡಗು |
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ವಾರ್ಡಬಾಯ್ | 02 |
ವೇತನ:
ಮಾಸಿಕ ರೂ. 22000/- ನೀಡಲಾಗುತ್ತದೆ.
ವಿದ್ಯಾರ್ಹತೆ/ Education:
ಅಭ್ಯರ್ಥಿಗಳು ಮಾನ್ಯತೆ ಹೊಂದಿದ ಸಂಸ್ಥೆಯಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು ಹಾಗೂ ನಿಗದಿಪಡಿಸಿದ ಕ್ಷೇತ್ರದಲ್ಲಿ ನ್ಯಾಷನಲ್ ಸ್ಕಿಲ್ ಡೆವಲಪ್ಮೆಂಟ್ ಅನುಮೋದಿತ ಸರ್ಟಿಫಿಕೇಟ್ ಕೋರ್ಸ್ ಅನ್ನು ಮಾಡಿರಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ, ಇತರೆ ಹಿಂದೂಳಿದ ವರ್ಗ (OBC) : 03 ವರ್ಷ ಮತ್ತು ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ: ರೂ. 350/-
ಸಾಮಾನ್ಯ & ಇತರೆ:
ರೂ. 500/- ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ The Principal, Sainik School, Kodagu ಹೆಸರಿನಲ್ಲಿ ಕಟ್ಟಬೇಕು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು/ Required Documents:
ಭರ್ತಿ ಮಾಡಿರುವ ಅರ್ಜಿ ನಮೂನೆ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣ ಪತ್ರ, ಕನ್ನಡ ಮಾದ್ಯಮ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
ಆಧಾರ್ ಕಾರ್ಡ್
ಸೇವಾ ದಾಖಲಾತಿಗಳು
ಶುಲ್ಕ ಪಾವತಿಸಿದ ಡಿಮ್ಯಾಂಡ್ ಡ್ರಾಫ್ಟ್
ಇತರೆ ಅಗತ್ಯವಿರುವ ದಾಖಲೆಗಳು
JOB NEWS:ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವುದು ಹೇಗೆ/ How to Apply?
ಈ ಲೇಖನದ ಕೊನೆಯ ಭಾಗದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ.
ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳು & ಡಿಮ್ಯಾಂಡ್ ಡ್ರಾಫ್ಟ್ ಅನ್ನು ಲಗತ್ತಿಸಿ ಲಕೋಟೆಯ ಒಳಗೆ ಇಟ್ಟು, ಲಕೋಟೆಯ ಮೇಲೆ (“Application for the Post of Wardboy ____________”) ಎಂದು ಬರೆದು ಕೆಳಗೆ ನೀಡಲಾದ ವಿಳಾಸಕ್ಕೆ ದಿನಾಂಕ 09-05-2025 ರ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ. ಮತ್ತು ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಪ್ರಸ್ತುತ ಪಡಿಸಬೇಕು.
ಅರ್ಜಿ ಕಳುಹಿಸಿಕೊಡುವ ವಿಳಾಸ:
Principal, Sainik School, Kudige, Taluk Kushalnagar, Dist- Koadgu, Karnataja-571232
JOB NEWS: ರೈತರ ಮಾರಾಟ ಸಹಕಾರ ಸಂಘದಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-05-2025
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ |
ಅರ್ಜಿ ನಮೂನೆ |
ಆಧಿಕೃತ ಜಾಲತಾಣ |
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.