ಅರ್ಬನ್ ಕೋ-ಆಫ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಸೇರಿ ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ: Bailhongal Urban Coop Bank Jobs 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ವಿನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ದಿ ಬೈಲಹೊಂಗಲ ಅರ್ಬನ್ ಕೋ-ಆಫ್ ಬ್ಯಾಂಕ್ ಲಿ. ಬೈಲಹೊಂಗಲ ವತಿಯಿಂದ ಖಾಲಿ ಇರುವ ಕಿರಿಯ ಸಹಾಯಕ & ಸಿಪಾಯಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
The Bailhogal Urban Co-op Bank Limited ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಕಿರಿಯ ಸಹಾಯಕ ಮತ್ತು ಸಿಪಾಯಿ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 15-02-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ದಿ ಬೈಲಹೊಂಗಲ ಅರ್ಬನ್ ಕೋ-ಆಫ್ ಬ್ಯಾಂಕ್ ಲಿ. ಬೈಲಹೊಂಗಲ ದಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ದಿ ಬೈಲಹೊಂಗಲ ಅರ್ಬನ್ ಕೋ-ಆಫ್ ಬ್ಯಾಂಕ್ ಲಿ. ಬೈಲಹೊಂಗಲ |
ಹುದ್ದೆಗಳ ಪದನಾಮ: ಕಿರಿಯ ಸಹಾಯಕ & ಸಿಪಾಯಿ |
ಹುದ್ದೆಗಳ ಸಂಖ್ಯೆ: 08 ಹುದ್ದೆಗಳು |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೈಲಹೊಂಗಲ, ಬೆಳಗಾವಿ |
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಕಿರಿಯ ಸಹಾಯಕ | 06 |
ಸಿಪಾಯಿ | 02 |
ವೇತನ ಶ್ರೇಣಿ:
ಅಧಿಸೂಚನೆಯ ಪ್ರಕಾರ ಮೂಲವೇತನ ಶ್ರೇಣಿ ಕೆಳಗೆ ನೀಡಿದಂತೆ ನಿಗದಿಪಡಿಸಲಾಗಿದೆ.
ಹುದ್ದೆಗಳ ಹೆಸರು | ವೇತನ |
ಕಿರಿಯ ಸಹಾಯಕ | 27650-52650 |
ಸಿಪಾಯಿ | 1950-37900 |
ಶೈಕ್ಷಣಿಕ ವಿದ್ಯಾರ್ಹತೆ
ಕಿರಿಯ ಸಹಾಯಕ:
- ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು.
- ಕನ್ನಡ & ಇಂಗ್ಲೀಷ್ ಓದಲು, ಬರೆಯಲು, ಅರ್ಥ ಮಾಡಿಕೊಳ್ಳಲು ಮತ್ತು ಮಾತನಾಡಲು ಬರಬೇಕು.
- ಗಣಕಯಂತ್ರ ಕಾರ್ಯಾಚರಣೆ ಕುರಿತು ಗೊತ್ತಿರಬೇಕು.
- ಬಿಕಾಂ/ಬಿಎಸ್ಸಿ/ಎಮ್ಎಸ್ಸಿ/ಬಿಇ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
- ಸಿಪಾಯಿ: ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ ಪೂರ್ಣಗೊಳಿಸಿರಬೇಕು.
- ಕನ್ನಡ ಓದಲು, ಬರೆಯಲು, ಅರ್ಥ ಮಾಡಿಕೊಳ್ಳಲು ಮತ್ತು ಮಾತನಾಡಲು ಬರಬೇಕು.
ವಯೋಮಿತಿ:
ಅಭ್ಯರ್ಥಿಗಳು ದಿನಾಂಕಕ್ಕೆ ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 35 ವರ್ಷಗಳನ್ನು ಮೀರುವಂತಿಲ್ಲ. ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದವರಿಗೆ 05 ವರ್ಷ ಹಾಗೂ ಇತರೆ ಹಿಂದೂಳಿದ ವರ್ಗದವರಿಗೆ 03 ವರ್ಷ ಸಡಿಲಿಕೆ ದೊರೆಯುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಭರ್ತಿ ಮಾಡಿರುವ ಅರ್ಜಿ ನಮೂನೆ
- ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
- ಗಣಕಯಂತ್ರ ಕೋರ್ಸ್ ಪ್ರಮಾಣಪತ್ರ
- ಅರ್ಜಿ ಶುಲ್ಕ ಪಾವತಿಸಿದ ರಸೀಧಿ
- ಜಾತಿ & ಆದಾಯ ಪ್ರಮಾಣ ಪತ್ರ,
- ಕನ್ನಡ ಮಾದ್ಯಮ ಪ್ರಮಾಣಪತ್ರ,
- ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
- ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ತೆರಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
- ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
- ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
- ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ನಂತರ ಅದನ್ನು ಒಂದು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ______________ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
- ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
- ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.
ಅರ್ಜಿ ಶುಲ್ಕ ಪಾವತಿಸುವುದು:
ಕಿರಿಯ ಸಹಾಯಕ ಹುದ್ದೆಗಳಿಗೆ : ರೂ. 1000/-
ಸಿಪಾಯಿ ಹುದ್ದೆಗಳಿಗೆ: ರೂ. 500/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ಶೇ. 50% ರಿಯಾಯಿತಿ ಇದೆ)
ಅರ್ಜಿ ಶುಲ್ಕವನ್ನು ದಿ ಬೈಲಹೊಂಗಲ ಅರ್ಬನ್ ಕೋ-ಆಫ್ ಬ್ಯಾಂಕ್ ಲಿ. ಬೈಲಹೊಂಗಲ ಹೆಸರಿಗೆ ಪಾವತಿಯಾಗುವಂತೆ ಪೋಸ್ಟಲ್ ಆರ್ಡರ್ / ಡಿಡಿ ಮೂಲಕ ತುಂಬಬೇಕು.
ಅರ್ಜಿ ಕಳುಹಿಸಿಕೊಡುವ ವಿಳಾಸ:
ದಿ ಬೈಲಹೊಂಗಲ ಅರ್ಬನ್ ಕೋ-ಆಫ್ ಬ್ಯಾಂಕ್ ಲಿ. ಬೈಲಹೊಂಗಲ #365/45, ಬಜಾರ ರೋಡ್, ಬೈಲಹೊಂಗಲ-591102 ಬೈಲಹೊಂಗಲ, ಜಿಲ್ಲಾ ಬೆಳಗಾವಿ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-02-2025
ಅಧಿಕೃತ ಲಿಂಕುಗಳು/ Official Links
ನೋಟಿಫಿಕೇಶನ್ ಡೌನ್ಲೋಡ್ |