ಬೆಂಗಳೂರಿನ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 40000-65000:
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ವಿನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಬೆಂಗಳೂರು ವತಿಯಿಂದ ಖಾಲಿ ಇರುವ ಮುಖ್ಯ ಕಾರ್ಯನಿರ್ವಹಣಾಧಿಕಾರಿ/ಕಾರ್ಯದರ್ಶಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
The Bharath Cooperative Bank ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 27-03-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ. |
ಹುದ್ದೆಗಳ ಪದನಾಮ: ಕಾರ್ಯದರ್ಶಿ |
ಹುದ್ದೆಗಳ ಸಂಖ್ಯೆ: 01 ಹುದ್ದೆ |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು |
ವೇತನ ಶ್ರೇಣಿ:
ಅಧಿಸೂಚನೆಯ ಪ್ರಕಾರ ಮೂಲವೇತನ ಶ್ರೇಣಿ ಕೆಳಗೆ ನೀಡಿದಂತೆ ನಿಗದಿಪಡಿಸಲಾಗಿದೆ.
ಮೂಲವೇತನ ರೂ. 40050-56550 (ಜೊತೆಗೆ ವಿಶೇಷ ಭತ್ಯೆ 20000/-)
ಶೈಕ್ಷಣಿಕ ವಿದ್ಯಾರ್ಹತೆ:
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ದಿನಾಂಕಕ್ಕೆ ಕನಿಷ್ಟ 35 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 50 ವರ್ಷಗಳನ್ನು ಮೀರುವಂತಿಲ್ಲ..
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಭರ್ತಿ ಮಾಡಿರುವ ಅರ್ಜಿ ನಮೂನೆ
- ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
- ಅನುಭವ ಪ್ರಮಾಣಪತ್ರ
- ಅರ್ಜಿ ಶುಲ್ಕ ಪಾವತಿಸಿದ ರಸೀಧಿ
- ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ತೆರಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
- ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
- ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
- ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ನಂತರ ಅದನ್ನು ಒಂದು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ______________ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
- ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
- ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.
ಅರ್ಜಿ ಶುಲ್ಕ ಪಾವತಿಸುವುದು:
ರೂ. 1800/-
(ಸಾಮಾನ್ಯ/ ಓಬಿಸಿ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಸಬೇಕು)
ಅರ್ಜಿ ಶುಲ್ಕವನ್ನು ಅಧ್ಯಕ್ಷರು, ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಬೆಂಗಳೂರು ಅವರ ಹೆಸರಿಗೆ ಡಿಡಿ ಮೂಲಕ ತುಂಬಬೇಕು.
ಅರ್ಜಿ ಕಳುಹಿಸಿಕೊಡುವ ವಿಳಾಸ:
ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ನಂ 30, 15ನೇ ಕ್ರಾಸ್,3ನೇ ಬ್ಲಾಕ್, ಜಯನಗರ, ಬೆಂಗಳೂರು-560011
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-03-2025
ಅಧಿಕೃತ ಲಿಂಕುಗಳು/ Official Links
ನೋಟಿಫಿಕೇಶನ್ ಡೌನ್ಲೋಡ್ |