ಮೈಸೂರಿನ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BRBNMPL Mysore Recruitment 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಭಾರತೀಯ ರಿಜರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ ನ ವತಿಯಿಂದ ಖಾಲಿ ಇರುವ ಮುಖ್ಯ ಹಣಕಾಸು ಅಧಿಕಾರಿ ಕಮ್ ಕಂಪನಿ ಕಾರ್ಯದರ್ಶಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಭಾರತೀಯ ರಿಜರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್, ಬೆಂಗಳೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 25-04-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಭಾರತೀಯ ರಿಜರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ |
ಹುದ್ದೆಗಳ ಪದನಾಮ: ಮುಖ್ಯ ಹಣಕಾಸು ಅಧಿಕಾರಿ ಕಮ್ ಕಂಪನಿ ಕಾರ್ಯದರ್ಶಿ |
ಹುದ್ದೆಗಳ ಸಂಖ್ಯೆ: ಮಾಹಿತಿ ನೀಡಿಲ್ಲ |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಮೈಸೂರು |
ಹುದ್ದೆಗಳ ವಿವರ & ವೇತನ:
ರೂ. 278720/-
ಈ ವೇತನದ ಜೊತೆಗೆ ಮನೆಬಾಡಿಗೆ ಭತ್ಯೆಯನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ & ಅನುಭವ:
ಮಾನ್ಯತೆ ಹೊಂದಿದ ಸಂಸ್ಥೆಯಿಂದ ಚಾರ್ಟರ್ಡ್ ಅಕೌಂಟೆಂಟ್ & ಕಂಪನಿ ಸೆಕ್ರೆಟರಿ ಅರ್ಹತೆಯನ್ನು ಹೊಂದಿರಬೇಕು. ಹಾಗೂ 15 ವರ್ಷಗಳ ಅನುಭವವನ್ನು ಸಂಬಂಧಿಸಿದ ಕ್ಷೇತ್ರದಲ್ಲಿ ಹೊಂದಿರಬೇಕು.
ವಯೋಮಿತಿ:-
ದಿ:01-04-2025ಕ್ಕೆ ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಟ-45 ವರ್ಷ ಹಾಗೂ ಗರಿಷ್ಟ 52 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಭರ್ತಿ ಮಾಡಿರುವ ಅರ್ಜಿ ನಮೂನೆ
- ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
- ಇತ್ತೀಚಿನ ಪಾಸ್ಪೋರ್ಟ್ ಸೈಜಿನ ಭಾವಚಿತ್ರ
- ಅನುಭವ ಪ್ರಮಾಣಪತ್ರ
- ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
- ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ತೆರಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
- ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
- ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
- ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ನಂತರ ಅದನ್ನು ಒಂದು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ Chief Financial Manager Cum Company Secretary ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
- ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
- ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.
ಅರ್ಜಿ ಸಲ್ಲಿಸುವ ವಿಳಾಸ: The Chief General Manager, Bharatiya Reerve Bank Note Mudran Private Limited, Corporate Office, No. 3 & 4, 1st Stage, 1st Phase, BTM Layout, Banneraghatta Road, Post Box, No. 2924, Bengaluru-560029
ಅರ್ಜಿ ಶುಲ್ಕ ಪಾವತಿಸುವುದು:
ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-04-2025
ಅಧಿಕೃತ ಲಿಂಕುಗಳು/ Official Links
ನೋಟಿಫಿಕೇಶನ್ ಡೌನ್ಲೋಡ್ |
website |
APPLICATION FORMAT |