ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿ. ವಿಜಯಪುರ: ಕಿರಿಯ ಸಹಾಯಕರು ಮತ್ತು ಸಿಪಾಯಿ ಹುದ್ದೆಗಳಿಗೆ ನೇಮಕಾತಿ: CMS Cooperative Society Recruitmen 2026
ವಿಜಯಪುರದ ಪ್ರತಿಷ್ಠಿತ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ಲಿಮಿಟೆಡ್ , ತನ್ನ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗವನ್ನು ಅರಸುತ್ತಿರುವ ಯುವಕ-ಯುವತಿಯರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿ ಪ್ರಕಟಣೆಯು 13/02/2026 ರಂದು ಹೊರಡಿಸಲಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.
ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 10 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
- ಕಿರಿಯ ಸಹಾಯಕರು (Junior Assistants): ಒಟ್ಟು 5 ಹುದ್ದೆಗಳು ಲಭ್ಯವಿವೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 27650-650-29600-750-32600-850-36000-950-39800-1100-46400-1250-52650 ರೂ. ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
- ಸಿಪಾಯಿ (Peon): ಒಟ್ಟು 5 ಹುದ್ದೆಗಳು ಲಭ್ಯವಿವೆ. ಈ ಹುದ್ದೆಗೆ 19950-450-20400-500-22400-550-24600-600-27000-650-29600-750-32600-850-36000-950-37900 ರೂ. ವೇತನ ಶ್ರೇಣಿ ಇರುತ್ತದೆ.
- ಈ ಮೇಲಿನ ಹುದ್ದೆಗಳಿಗೆ ರಾಜ್ಯ ಸರ್ಕಾರವು ಕಾಲಕಾಲಕ್ಕೆ ಮಂಜೂರು ಮಾಡುವ ತುಟ್ಟಿ ಭತ್ಯೆ ಹಾಗೂ ಇತರೆ ಭತ್ಯೆಗಳನ್ನು ಬ್ಯಾಂಕಿನ ಆರ್ಥಿಕ ಸ್ಥಿತಿ ಮತ್ತು ಆಡಳಿತ ಮಂಡಳಿಯ ಮಂಜೂರಾತಿ ಒಳಪಟ್ಟು ನೀಡಲಾಗುವುದು.
ವಿದ್ಯಾರ್ಹತೆ
ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ಹುದ್ದೆಗೆ ಅನುಗುಣವಾಗಿ ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು:
- ಕಿರಿಯ ಸಹಾಯಕರು: ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಧಿಕೃತ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ.70% ಅಂಕಗಳೊಂದಿಗೆ ಪದವಿ ಹೊಂದಿರಬೇಕು. B.Com, BSC, BCA, BBA, ಅಥವಾ BE ಪದವೀಧರರಿಗೆ ಪ್ರಾತಿನಿಧ್ಯ ನೀಡಲಾಗುವುದು. ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಜ್ಞಾನ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು
- ಸಿಪಾಯಿ: SSLC (10ನೇ ತರಗತಿ) ತೇರ್ಗಡೆಯಾಗಿರಬೇಕು. ಕನ್ನಡವನ್ನು ಒಂದು ವಿಷಯವನ್ನಾಗಿ ಓದಿ ಉತ್ತೀರ್ಣರಾಗಿರಬೇಕು. ವಾಹನ ಚಾಲನಾ ಪರವಾನಗಿ (Driving License) ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
- ಅಭ್ಯರ್ಥಿಗಳಿಗೆ ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆಗಳಲ್ಲಿ ಓದಲು ಮತ್ತು ಬರೆಯಲು ಪ್ರಭುತ್ವ ಹೊಂದಿರತಕ್ಕದ್ದು.
ವಯೋಮಿತಿ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಕರ್ನಾಟಕ ಸಹಕಾರ ಸಂಘಗಳ ನಿಯಮ 1960ರ ಪ್ರಕಾರ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷಗಳು
- ಇತರೆ ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷಗಳು
- ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷಗಳು
ಅರ್ಜಿ ಶುಲ್ಕದ ವಿವರ
ಅರ್ಜಿದಾರರು ತಮ್ಮ ವರ್ಗಕ್ಕೆ ಅನುಗುಣವಾಗಿ ಡಿಮ್ಯಾಂಡ್ ಡ್ರಾಫ್ಟ್ (D.D) ಮೂಲಕ ಶುಲ್ಕವನ್ನು ಪಾವತಿಸಬೇಕು:
- ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ: ರೂ. 1000/
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ: ರೂ. 500/-
- ಡಿ.ಡಿ ಯನ್ನು “ವ್ಯವಸ್ಥಾಪಕರು, ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ ನಿ., ವಿಜಯಪುರ” ಇವರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಕಡ್ಡಾಯವಾಗಿ ಲಗತ್ತಿಸಬೇಕು. ಈ ಹಣವನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ.
ಆಯ್ಕೆ ವಿಧಾನ
ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನದ ಆಧಾರದ ಮೇಲೆ ಮಾಡಲಾಗುವುದು
- ಲಿಖಿತ ಪರೀಕ್ಷೆ: ಒಟ್ಟು 200 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ಇದರಲ್ಲಿ ಕನ್ನಡ ಭಾಷೆ (40 ಅಂಕಗಳು), ಇಂಗ್ಲಿಷ್ ಭಾಷೆ (30 ಅಂಕಗಳು), ಸಾಮಾನ್ಯ ಜ್ಞಾನ (30 ಅಂಕಗಳು), ಹಾಗೂ ಸಹಕಾರ ಮತ್ತು ಬ್ಯಾಂಕಿಂಗ್ (100 ಅಂಕಗಳು) ವಿಷಯಗಳು ಇರುತ್ತವೆ.
- ಮೌಖಿಕ ಸಂದರ್ಶನ: ಲಿಖಿತ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು 15 ಅಂಕಗಳ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ
- ನಿಗದಿತ ಅರ್ಜಿ ನಮೂನೆಯನ್ನು ಬ್ಯಾಂಕಿನ ಅಧಿಕೃತ ವೆಬ್ಸೈಟ್ www.cmsbank.in ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಪ್ರಧಾನ ಕಛೇರಿಯಿಂದ ಖುದ್ದಾಗಿ ಪಡೆಯಬಹುದು
- ಕಛೇರಿಯ ವಿಳಾಸ: “ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ ನಿ., ವಿಜಯಪುರ, ಮೀನಾಕ್ಷಿ ಚೌಕ, ಮಿರ್ದೆ ಗಲ್ಲಿ, ವಿಜಯಪುರ-586101”. ಅರ್ಜಿಗಳನ್ನು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 4:30 ರ ಒಳಗೆ ಪಡೆಯಬಹುದು
- ಭರ್ತಿ ಮಾಡಿದ ಅರ್ಜಿಯನ್ನು “ಸಿಬ್ಬಂದಿ ನೇಮಕಾತಿ ಸಮೀತಿಯ ಸಂಚಾಲಕರು ಹಾಗೂ ಪ್ರಧಾನ ವ್ಯವಸ್ಥಾಪಕರು, ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ ನಿ., ವಿಜಯಪುರ-586101” ಇವರ ಹೆಸರಿನಲ್ಲಿ ಸಲ್ಲಿಸಬೇಕು.
- ಅರ್ಜಿಯಲ್ಲಿನ ಎಲ್ಲಾ ಅಂಕಣಗಳನ್ನು ಪೂರ್ಣವಾಗಿ ಭರ್ತಿ ಮಾಡಿರಬೇಕು.
- ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳನ್ನು ಮತ್ತು ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ (Attestation) ಅರ್ಜಿಯೊಂದಿಗೆ ಲಗತ್ತಿಸುವುದು ಕಡ್ಡಾಯವಾಗಿದೆ
- ಅರ್ಜಿಗೆ ಸ್ವ-ಹಸ್ತಾಕ್ಷರವಿರುವ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಬೇಕು.
ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ 2026: ಜೂನಿಯರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಲಗತ್ತಿಸಬೇಕಾದ ಪ್ರಮುಖ ದಾಖಲೆಗಳು: ಜನ್ಮ ಪ್ರಮಾಣ ಪತ್ರ, SSLC ಅಂಕಪಟ್ಟಿ, PUC ಅಂಕಪಟ್ಟಿ, ಡಿಗ್ರಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ವಾಹನ ಚಾಲನಾ ಅನುಮತಿ ಪತ್ರ, ಡಿ.ಡಿ, ಮತ್ತು 2 ಫೋಟೋಗಳು. ವಯಸ್ಸು ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ವರ್ಗಾವಣೆ ಪ್ರಮಾಣ ಪತ್ರ (TC) ಲಗತ್ತಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅವಶ್ಯಕ ದಾಖಲೆಗಳೊಂದಿಗೆ ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 10-03-2026 ರಂದು ಸಾಯಂಕಾಲ 4:30 ಘಂಟೆಯ ಒಳಗೆ ಬ್ಯಾಂಕಿನ ಕಛೇರಿಗೆ ತಲುಪುವಂತೆ ಸಲ್ಲಿಸಬೇಕು. ನಿಗದಿತ ಸಮಯದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಪ್ರಮುಖ ಲಿಂಕುಗಳು/ Important Links:
| ಅಧಿಸೂಚನೆ/ Notification: |
| ಅರ್ಜಿ ನಮೂನೆ/ Applಿcation form: |
| Join to Telegram |
ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQ)
- ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-03-2026, ಸಾಯಂಕಾಲ 4:30 ಘಂಟೆ.
- ಕಿರಿಯ ಸಹಾಯಕ ಹುದ್ದೆಗೆ ಶೈಕ್ಷಣಿಕ ಅರ್ಹತೆ ಏನು? ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ.70% ಅಂಕಗಳೊಂದಿಗೆ ಪದವಿ ಪಡೆದಿರಬೇಕು. B.Com/BSC/BCA/BBA/BE ಪದವೀಧರರಿಗೆ ಪ್ರಾತಿನಿಧ್ಯ ಇರುತ್ತದೆ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಎಷ್ಟು? ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 1000/- ಆಗಿರುತ್ತದೆ.
- ಅರ್ಜಿ ನಮೂನೆಯನ್ನು ಎಲ್ಲಿಂದ ಪಡೆಯಬಹುದು? ಅರ್ಜಿ ನಮೂನೆಯನ್ನು ಬ್ಯಾಂಕಿನ ವೆಬ್ಸೈಟ್ www.cmsbank.in ಮೂಲಕ ಅಥವಾ ವಿಜಯಪುರದ ಮೀನಾಕ್ಷಿ ಚೌಕದಲ್ಲಿರುವ ಬ್ಯಾಂಕಿನ ಪ್ರಧಾನ ಕಛೇರಿಯಿಂದ ಖುದ್ದಾಗಿ ಪಡೆಯಬಹುದು.
ಕೊನೆಯ ಮಾತು:
ವಿಜಯಪುರದ ಪ್ರತಿಷ್ಠಿತ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ಲಿಮಿಟೆಡ್ , ತನ್ನ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.
