ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ. ಬೀದರ್ ನಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: DCC Bank Recruitment in Bidar 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಬೀದರ್ ವತಿಯಿಂದ ಖಾಲಿ ಇರುವ ಮುಖ್ಯ ಪ್ರಧಾನ ವ್ಯವಸ್ಥಾಪಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
District Central Bank, Bidar ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ Chief General Manager ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 06-03-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಬೀದರ್ ಜಿಲ್ಲಾ ಸಹಕಾರಿ ಬ್ಯಾಂಕ್ ನಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಬೀದರ್ ಜಿಲ್ಲಾ ಸಹಕಾರಿ ಬ್ಯಾಂಕ್ |
ಹುದ್ದೆಗಳ ಪದನಾಮ: ಮುಖ್ಯ ಪ್ರಧಾನ ವ್ಯವಸ್ಥಾಪಕರು |
ಹುದ್ದೆಗಳ ಸಂಖ್ಯೆ: 01 ಹುದ್ದೆ |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೀದರ್ |
ವೇತನ ಶ್ರೇಣಿ:
ಬ್ಯಾಂಕಿನ ನಿಯಮಾವಳಿಗಳನ್ವಯ ವೇತನ & ಇತರೆ ಭತ್ಯೆಗಳು ದೊರೆಯುತ್ತವೆ.
ಅರ್ಹತಾ ಮಾನದಂಡಗಳು:
- ಅನುಭವ : ಕನಿಷ್ಠ 10 ರಿಂದ 15 ವರ್ಷಗಳ ಬ್ಯಾಂಕಿಂಗ್, ಹಣಕಾಸು ಅಥವಾ ನಿರ್ವಹಣಾ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
- ವಯಸ್ಸು : 65 ವರ್ಷಕ್ಕಿಂತ ಕಡಿಮೆ ಇರಬೇಕು.
- ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ, ಹಣಕಾಸು ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ/ಪಿಜಿ ಮಾಸ್ಟರ್ಸ್ (ಎಂ.ಕಾಂ, ಎಮ್.ಬಿ.ಎ, ಎಮ್.ಎ ಅರ್ಥಶಾಸ್ತ್ರ) ಹೊಂದಿರಬೇಕು.
ಹುದ್ದೆಯ ಜವಾಬ್ದಾರಿಗಳು:
- ಬ್ಯಾಂಕಿನ ಪ್ರಗತಿಗಾಗಿ ಪ್ರಮುಖ ನಿರ್ಧಾರವನ್ನು ಕೈಗೊಳ್ಳುವುದು.
- ಆರ್ಥಿಕ ಯೋಜನೆ ಮತ್ತು ನಿರ್ವಹಣೆ ಕಾರ್ಯಗಳಲ್ಲಿ ಪರಿಣತಿ ಹೊಂದಿರುವುದು.
- ನಿಯಮಾವಳಿ ಪಾಲನೆ ಮತ್ತು ತಂಡ ನಿರ್ವಹಣೆಯಲ್ಲಿ ತಜ್ಞತೆ ಹೊಂದಿರುವುದು.
- ಬ್ಯಾಂಕಿಂಗ್ ವ್ಯವಸ್ಥೆಯ ಪ್ರಾಮಾಣಿಕತೆಯನ್ನು ಕಾಯ್ದುಕೊಳ್ಳುವುದು.
JOB NEWS: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 33438 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಭರ್ತಿ ಮಾಡಿರುವ ಅರ್ಜಿ ನಮೂನೆ
- ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
- ಗಣಕಯಂತ್ರ ಕೋರ್ಸ್ ಪ್ರಮಾಣಪತ್ರ
- ಅರ್ಜಿ ಶುಲ್ಕ ಪಾವತಿಸಿದ ರಸೀಧಿ
- ಜಾತಿ & ಆದಾಯ ಪ್ರಮಾಣ ಪತ್ರ,
- ಕನ್ನಡ ಮಾದ್ಯಮ ಪ್ರಮಾಣಪತ್ರ,
- ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
- ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ತೆರಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
- ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
- ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
- ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ನಂತರ ಅದನ್ನು ಒಂದು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ______________ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
- ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
- ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.
ಅರ್ಜಿ ಶುಲ್ಕ ಪಾವತಿಸುವುದು:
ಸಾಮಾನ್ಯ, ಪ್ರವರ್ಗ 2 (ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ: ರೂ. 2000/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ-: ರೂ. 1000/-
ಅರ್ಜಿ ಶುಲ್ಕವನ್ನು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಬೀದರ ಹೆಸರಿಗೆ ಪಾವತಿಯಾಗುವಂತೆ ಡಿಡಿ ಮೂಲಕ ತುಂಬಬೇಕು.
ಅರ್ಜಿ ಕಳುಹಿಸಿಕೊಡುವ ವಿಳಾಸ:
ವಿಳಾಸ: ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಬೀದರ ಕೇಂದ್ರ ಕಚೇರಿ ಬಸವೇಶ್ವರ ಚೌಕ ಬೀದರ.- 585 401
JOB NEWS: ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 2152 ಹೂಡಿಕೆ ಸಹಾಯಕ & ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-03-2025
ಅಧಿಕೃತ ಲಿಂಕುಗಳು/ Official Links
ನೋಟಿಫಿಕೇಶನ್ ಡೌನ್ಲೋಡ್ |