ಜಿಲ್ಲಾ ಮಕ್ಕಳ ರಕ್ಷಣಾ ಕಛೇರಿಯಲ್ಲಿ ಖಾಲಿ ಇರುವ ರಕ್ಷಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: District Children Protection Unit Recruitment 2026

WhatsApp Group Join Now
Telegram Group Join Now
Spread the love

ಜಿಲ್ಲಾ ಮಕ್ಕಳ ರಕ್ಷಣಾ ಕಛೇರಿಯಲ್ಲಿ ಖಾಲಿ ಇರುವ ರಕ್ಷಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: District Children Protection Unit Recruitment 2026

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ವಿನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಜಿಲ್ಲಾ ಮಕ್ಕಳ ರಕ್ಷಣಾ ಕಛೇರಿ, ಕಲಬುರಗಿ ವತಿಯಿಂದ ಖಾಲಿ ಇರುವ ರಕ್ಷಣಾಧಿಕಾರಿ ಹುದ್ದೆಗಳನ್ನು ತಾತ್ಕಾಲಿಕವಾಗಿ ಬಾಹ್ಯ ಮೂಲದಿಂದ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ದತ್ತು ಪ್ರಕ್ರಿಯೆಗೆ ಒಳಪಡಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಕಚೇರಿಯಲ್ಲಿ ರಕ್ಷಣಾಧಿಕಾರಿ (ಅಸಾಂಸ್ಥಿಕ) ಹುದ್ದೆಯನ್ನು ಮಿಷನ್ ವಾತ್ಸಲ್ಯ ಮಾರ್ಗಸೂಚಿ ಅನ್ವಯ ಅರ್ಹ ಅಭ್ಯರ್ಥಿಯನ್ನು ಬಾಹ್ಯಮೂಲದಿಂದ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾಧಿಕಾರಿ (ಅಸಾಂಸ್ಥಿಕ)-1 ಹುದ್ದೆಗೆ ಅರ್ಹ ಅಭುರ್ಥಿಗಳು ಸೋಶಿಯಲ್ ವರ್ಕ್‌ನಲ್ಲಿ ಪಿಜಿ, ಚೈಲ್ಡ್ ಡೆವಲಪ್‌ಮೆಂಟ್‌, ಹುಮನ್ ರೈಡ್, ಪಬ್ಲಿಕ್ ಅಡ್ಮಿನಿಸ್ಟೇಷನ್, ಸೈಕಾಲಜಿ, ಲಾ, ಪಬ್ಲಿಕ್ ಹೆಲ್ತ್, ಕಮ್ಯುನಿಟಿ ರಿಸೋರ್ಸ್ ಮ್ಯಾನೇಜ್‌ಮೆಂಟ್ ವಿದ್ಯಾರ್ಹತೆಯನ್ನು ಹೊಂದಿದ ಹಾಗೂ ಮಕ್ಕಳ ಕ್ಷೇತ್ರದಲ್ಲಿ 2 ವರ್ಷಗಳ ಅನುಭವ 1 ವರ್ಷ ಕಂಪ್ಯೂಟರ್ ತರಬೇತಿ ಪಡೆಯಬೇಕು. ಅರ್ಹ ಅಭ್ಯರ್ಥಿಗಳು ಜ.23ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಎದುರುಗಡೆ ಇಲ್ಲಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-243219 ಗೆ ಸಂಪರ್ಕಿಸಲು ಕೋರಲಾಗಿದೆ.

ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಖಾಲಿ ಇರುವ 572 ಆಫೀಸ್ ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ‌RBI Office Attendant 572 vacancies 2026

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ಜಿಲ್ಲಾ ಮಕ್ಕಳ ರಕ್ಷಣಾ ಕಚೇರಿ
ಹುದ್ದೆಗಳ ಪದನಾಮ: ರಕ್ಷಣಾಧಿಕಾರಿ
ಹುದ್ದೆಗಳ ಸಂಖ್ಯೆ: – 01
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಕಲಬುರಗಿ

ವೇತನ ಶ್ರೇಣಿ:

ನಿಯಮಾವಳಿಗಳನ್ವಯ ಮಾಸಿಕ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ

ಅಭ್ಯರ್ಥಿಗಳು ಸೋಶಿಯಲ್ ವರ್ಕ್‌ನಲ್ಲಿ ಪಿಜಿ, ಚೈಲ್ಡ್ ಡೆವಲಪ್‌ಮೆಂಟ್‌, ಹುಮನ್ ರೈಟ್ಸ್, ಪಬ್ಲಿಕ್ ಅಡ್ಮಿನಿಸ್ಟೇಷನ್, ಸೈಕಾಲಜಿ, ಲಾ, ಪಬ್ಲಿಕ್ ಹೆಲ್ತ್, ಕಮ್ಯುನಿಟಿ ರಿಸೋರ್ಸ್ ಮ್ಯಾನೇಜ್‌ಮೆಂಟ್ ವಿದ್ಯಾರ್ಹತೆಯನ್ನು ಹೊಂದಿದ ಹಾಗೂ ಮಕ್ಕಳ ಕ್ಷೇತ್ರದಲ್ಲಿ 2 ವರ್ಷಗಳ ಅನುಭವ ‌ ಹಾಗೂ 1 ವರ್ಷ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಕನ್ನಡ & ಇಂಗ್ಲೀಷ್ ಓದಲು, ಬರೆಯಲು, ಅರ್ಥ ಮಾಡಿಕೊಳ್ಳಲು ಮತ್ತು ಮಾತನಾಡಲು ಬರಬೇಕು.

ಕರ್ನಾಟಕದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಾರ್ಡಬಾಯ್‌, ಶಿಕ್ಷಕರು, ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ‌Sainik School Bijapur Recruitment 2026

ವಯೋಮಿತಿ:  

ನಿಯಾಮಾವಳಿಗಳನ್ವಯ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

  1. ಭರ್ತಿ ಮಾಡಿರುವ ಅರ್ಜಿ ನಮೂನೆ
  2. ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
  3. ಜಾತಿ & ಆದಾಯ ಪ್ರಮಾಣ ಪತ್ರ,
  4. ಕನ್ನಡ ಮಾದ್ಯಮ ಪ್ರಮಾಣಪತ್ರ,
  5. ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
  6. ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಜ.23ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಎದುರುಗಡೆ ಇಲ್ಲಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-243219 ಗೆ ಸಂಪರ್ಕಿಸಲು ಕೋರಲಾಗಿದೆ.

KSOU ನಿಂದ ಕೆಎಎಸ್‌ ಹಾಗೂ ಐಎಎಸ್‌ ಪೂರ್ವಭಾವಿ ಪರೀಕ್ಷೆಗಳಿಗೆ ಉಚಿತ ಕೋಚಿಂಗ್‌ ನೀಡಲು ಅರ್ಜಿ ಆಹ್ವಾನ: Free Coaching for IAS, KAS Exam from KSOU 2026

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23-01-2026

ಅಧಿಕೃತ ಲಿಂಕುಗಳು/ Official Links

ನೋಟಿಫಿಕೇಶನ್ ಡೌನ್ಲೋಡ್

ಕೊನೆಯ ಮಾತು:

ಮಕ್ಕಳ ರಕ್ಷಣಾ ಕಛೇರಿ, ಕಲಬುರಗಿ ವತಿಯಿಂದ ಖಾಲಿ ಇರುವ ರಕ್ಷಣಾಧಿಕಾರಿ ಹುದ್ದೆಗಳನ್ನು ತಾತ್ಕಾಲಿಕವಾಗಿ ಬಾಹ್ಯ ಮೂಲದಿಂದ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top