ಜಿಲ್ಲಾ ಕಾನೂನು ಪ್ರಾಧಿಕಾರದಲ್ಲಿ ಖಾಲಿ ಇರುವ ಆಡಳಿತ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: DLSA Admin Assistant jobs 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿಕ್ಕಮಗಳೂರು ವತಿಯಿಂದ ಖಾಲಿ ಇರುವ ಆಡಳಿತ ಸಹಾಯಕ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಚಿಕ್ಕಮಗಳೂರಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 07-05-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
JOB NEWS: ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ |
ಹುದ್ದೆಗಳ ಪದನಾಮ: ಆಡಳಿತ ಸಹಾಯಕ |
ಹುದ್ದೆಗಳ ಸಂಖ್ಯೆ: 01 |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಚಿಕ್ಕಮಗಳೂರು |
ವಿದ್ಯಾರ್ಹತೆ & ಅನುಭವ:
- ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದ ಯಾವುದಾದರೂ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು.
- ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಕಿರಿಯ ಶ್ರೇಣಿ (ಜೂನಿಯರ್ ಟೈಪಿಂಗ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
- ಕಂಪ್ಯೂಟರ್‌ನಲ್ಲಿ ಡೇಟಾವನ್ನು ಫೀಡ್ ಮಾಡಲು ಬರಬೇಕು.
- ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಡಿಕ್ಟೇಶನ್ ತೆಗೆದುಕೊಂಡು ಟೈಪ್ ಮಾಡುವ ಸಾಮರ್ಥ್ಯ ಹೊಂದಿರಬೇಕು
- ಕಡತ (ಫೈಲ್) ನಿರ್ವಹಣೆ ಮತ್ತು ಸಂಸ್ಕರಣೆಯ ಜ್ಞಾನ ಹೊಂದಿರಬೇಕು.
JOB NEWS: ರೈತರ ಮಾರಾಟ ಸಹಕಾರ ಸಂಘದಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಷರತ್ತುಗಳು
ಸದರಿ ಹುದ್ದೆಗೆ ಅಭ್ಯರ್ಥಿಗಳನ್ನು ಸಂಪೂರ್ಣ ಹೊರಗುತ್ತಿಗೆ ಆಧಾರದ ಮೇಲೆ 06 ತಿಂಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುವುದು.
ಅಭ್ಯರ್ಥಿಗಳ 06 ತಿಂಗಳ ಅವಧಿ ಮುಗಿಯುವ ಪೂರ್ವದಲ್ಲಿ ಅವರ ಕಾರ್ಯವೈಖರಿ ಗಮನಿಸಿ ತೃಪ್ತಿಕರವಾಗಿದ್ದಲ್ಲಿ ಮತ್ತೊಂದು ಅವಧಿಗೆ ಪ್ರಾಧಿಕಾರವು ಇಚ್ಚಿಸಿದ್ದಲ್ಲಿ ಒಂದು/ಎರಡು ದಿನಗಳ ಬಿಡುವಿನಲ್ಲಿ ನಂತರ ನಿಯಮಾನುಸಾರ ಅಭ್ಯರ್ಥಿಗಳಿಂದ ಮನವಿಯನ್ನು ಪಡೆದು ಮರು ನೇಮಕ ಮಾಡಿಕೊಳ್ಳಲು ಅವಕಾಶವಿರುತ್ತದೆ.
ಸದರಿ ಹುದ್ದೆಯು ಸಂಪೂರ್ಣ ತಾತ್ಕಾಲಿಕವಾಗಿದ್ದು, ನೇಮಕಗೊಂಡ ಅಭ್ಯರ್ಥಿಯು ಸದರಿ ಹುದ್ದೆಯಲ್ಲಿ ಅವರನ್ನು ಖಾಯಂಗೊಳಿಸುವ ಯಾವುದೇ ಹಕ್ಕನ್ನು ಪ್ರತಿಪಾದಿಸಲು ಅವಕಾಶವಿರುವುದಿಲ್ಲ,
ಸದರಿ ಹುದ್ದೆಗೆ ನಿಗಧಿಗೊಳಿಸಿರುವ ಮಾಸಿಕ ಸಂಭಾವನೆಯು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಿರ್ದೇಶಿಸಲ್ಪಟ್ಟಿದ್ದು, ಈ ಕುರಿತು ಸರ್ಕಾರದಿಂದ ಅಥವಾ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮುಂದೆ ಹೊರಡಿಸಬಹುದಾದ ಮಾರ್ಗಸೂಚಿಗಳಿಗೆ ಅನುಸಾರ ಬದಲಾವಣೆಗೆ ಒಳಪಡುವಂತಹ ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.
ನೇಮಕಗೊಂಡ ಅಭ್ಯರ್ಥಿಯು ಅಗತ್ಯಬಿದ್ದರೆ ಸಾರ್ವತ್ರಿಕ ರಜಾ ದಿನಗಳಲ್ಲೂ ಸಹ ಕಛೇರಿ ಕರ್ತವ್ಯಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸಲು ಬದ್ಧರಾಗಿರತಕ್ಕದ್ದು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಭರ್ತಿ ಮಾಡಿರುವ ಅರ್ಜಿ ನಮೂನೆ
- ಶೈಕ್ಷಣಿಕ ಪ್ರಮಾಣಪತ್ರಗಳು
- ಟೈಪಿಂಗ್ ಕೋರ್ಸ್ & ಕಂಪ್ಯೂಟರ್ ಕೋರ್ಸಿನ ಪ್ರಮಾಣಪತ್ರಗಳು
- ಬ್ಯಾಂಕ್ ಖಾತೆ
- ಆಧಾರ್ ಕಾರ್ಡ್
- ಇತ್ತೀಚಿನ ಬಾವಚಿತ್ರ
- ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಈ ಅಧಿಸೂಚನೆಯೊಂದಿಗೆ ನೀಡಿರುವ ನಮೂನೆಯಲ್ಲಿ ತಮ್ಮ ಸಂಪೂರ್ಣ ಮಾಹಿತಿಯನ್ನು ಸೂಕ್ತ ದಾಖಲೆಗಳೊಂದಿಗೆ ಹಾಗೂ ಪಾಸ್‌ಪೋರ್ಟ್ ಅಳತೆ 01 ಇತ್ತೀಚಿನ ಭಾವಚಿತ್ರಗಳೊಂದಿಗೆ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಲಯದ ಆವರಣ, ಚಿಕ್ಕಮಗಳೂರು ಇಲ್ಲಿಗೆ ಕೊನೆಯ ದಿನಾಂಕದೊಳಗಾಗಿ ಅಂದರೆ ದಿನಾಂಕ:07.05.2025 ರ ಸಂಜೆ 5.30ರೊಳಗಾಗಿ ಸಲ್ಲಿಸತಕ್ಕದ್ದು ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
JOB NEWS: ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ :
ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-05-2025
ಅಧಿಕೃತ ಲಿಂಕುಗಳು/ Official Links
ನೋಟಿಫಿಕೇಶನ್ ಡೌನ್ಲೋಡ್ |
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.