ಪಿಡಿಓ ಪರೀಕ್ಷೆ ಹಾಜರಾದವರಿಗೆ ಬಹು ಮುಖ್ಯ ಮಾಹಿತಿ ನೀಡಿದ ಆಯೋಗ- Exam updates for PDO Applicant by KPSC 2025
ನಮಸ್ತೆ ಗೆಳೆಯರೇ ದಿನಾಂಕ 13.03.2024 ರಂದು ವಿವಿಧ ಇಲಾಖೆಗಳಲ್ಲಿನ ಒಟ್ಟು 277 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ದಿನಾಂಕ 18-1-2025 ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು. ಆದರೆ ಪಂಚಾಯತ್ ರಾಜ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ವಿನಾಯಿತಿ ಕೊಡುವ ಸಲುವಾಗಿ ಸದರಿ ದಿನದಂದು ನಡೆಯಬೇಕಿದ್ದ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಿ ದಿನಾಂಕ 13-01-2025 ರಂದು ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಣೆಯನ್ನು ಹೊರಡಿಸಲಾಗಿದೆ.
ದಿನಾಂಕ 13.3.2024 ರನ್ವಯ ಅಧಿಸೂಚಿಸಿರುವ ವಿವಿಧ ಇಲಾಖೆಯಲ್ಲಿನ ಗ್ರೂಪ್ ಬಿ 277 ರಾಜ್ಯ ವೃಂದದ ಹುದ್ದೆಗಳಿಗೆ ದಿನಾಂಕ 18 ಜನವರಿ 2025 ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು ಆದರೆ ಇತ್ತೀಚಿಗೆ ನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೆ ಲಕ್ಷಾಂತರ ಅಭ್ಯರ್ಥಿಗಳು ಹಾಜರಾಗಿದ್ದು ಹಲವಾರು ಅಭ್ಯರ್ಥಿಗಳು ಪ್ರಸ್ತುತ ಪರೀಕ್ಷೆಗಳಿಗೂ ಸಹ ಅಭ್ಯರ್ಥಿಗಳಾಗಿರುತ್ತಾರೆ. ಪಂಚಾಯತ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲಿಯೇ ಪ್ರಕಟವಾಗುವ ಸಾಧ್ಯತೆ ಇದ್ದು, ಅದರಲ್ಲಿ ಹಾಜರಾದ ಅಭ್ಯರ್ಥಿಗಳು ಮತ್ತೊಮ್ಮೆ ಕನ್ನಡ ಭಾಷಾ ಪರೀಕ್ಷೆಯನ್ನು ಬರೆಯುವುದರಿಂದ ಆಯೋಗಕ್ಕೆ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಹೆಚ್ಚಿನ ಹೊರೆಯಾಗುವುದಲ್ಲದೆ ಅಭ್ಯರ್ಥಿಗಳಿಗೂ ಸಹ ಹೊರೆಯಾಗಲಿದೆ. ಆದ್ದರಿಂದ ದಿನಾಂಕ 18-1-2025 ರಂದು ನಿಗದಿಯಾಗಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮಾತ್ರ ಮುಂದೂಡಲಾಗಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರ ಪರಿಷ್ಕೃತ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಕೆಪಿಎಸ್ಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮುಂದುವರೆದು ದಿನಾಂಕ 13.03.2024 ರನ್ವಯ ಅಧಿಸೂಚಿಸಿರುವ ಹುದ್ದೆಗಳಿಗೆ ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ಪತ್ರಿಕೆಗಳ ಪರೀಕ್ಷೆಗಳನ್ನು ಈಗಾಗಲೇ ನಿಗದಿಪಡಿಸಿರುವ ವೇಳಾಪಟ್ಟಿಯಂತೆಯೇ ನಡೆಸಲಾಗುವುದು ಅದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸ್ನೇಹಿತರೆ 277 ರಾಜ್ಯ ವೃಂದದ ಗ್ರೂಪ್ ಬಿ ಹುದ್ದೆಗಳ ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ಪತ್ರಿಕೆ ಪರೀಕ್ಷೆಗಳು ಜನವರಿ 19 ಮತ್ತು ಜನವರಿ 25ರಂದು ನಿಗದಿಪಡಿಸಿದಂತೆ ಯಥಾಪ್ರಕಾರ ನಡೆಯುತ್ತವೆ. ಈಗಾಗಲೇ ಕೆಪಿಎಸ್ಸಿಯ ಅಧಿಕೃತ ವೆಬ್ಸೈಟ್ನಲ್ಲಿ ಆ ಹುದ್ದೆಗಳಿಗೆ ಸಂಬಂಧಿಸಿದಂತ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವುದು.
ಪ್ರಮುಖ ಲಿಂಕುಗಳು
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ. ಆದಾಗ್ಯೂ ಆಫೀಶಿಯಲ್ ವೆಬ್ಸೈಟ್/ ಸಂಸ್ಥೆಯನ್ನ ಒಮ್ಮೆ ಸಂಪರ್ಕಿಸಿ ಮತ್ತೊಮ್ಮೆ ಖಚಿತ ಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಿ.