KSOU ನಿಂದ ಕೆಎಎಸ್‌ ಹಾಗೂ ಐಎಎಸ್‌ ಪೂರ್ವಭಾವಿ ಪರೀಕ್ಷೆಗಳಿಗೆ ಉಚಿತ ಕೋಚಿಂಗ್‌ ನೀಡಲು ಅರ್ಜಿ ಆಹ್ವಾನ: Free Coaching for IAS, KAS Exam from KSOU 2026

WhatsApp Group Join Now
Telegram Group Join Now
Spread the love

KSOU ನಿಂದ ಕೆಎಎಸ್‌ ಹಾಗೂ ಐಎಎಸ್‌ ಪೂರ್ವಭಾವಿ ಪರೀಕ್ಷೆಗಳಿಗೆ ಉಚಿತ ಕೋಚಿಂಗ್‌ ನೀಡಲು ಅರ್ಜಿ ಆಹ್ವಾನ: Free Coaching for IAS and KAS Exam from KSOU

ಸ್ನೇಹಿತರೇ ನಮಸ್ತೆ, ಭಾರತೀಯ ಆಡಳಿತ ಸೇವೆ (ಐಎಎಸ್)‌, ಕರ್ನಾಟಕ ಆಡಳಿತ ಸೇವೆ (ಕೆಎಎಸ್)‌ ಅಧಿಕಾರಿಯಾಗಬೇಕು ಎಂಬುದು ಎಲ್ಲರ ಕನಸಾಗಿರುತ್ತದೆ. ಆದರೆ ಅದು ಕೆಲವರ ಸ್ವತ್ತು ಮಾತ್ರ ಆಗುತ್ತದೆ. ಆಸಕ್ತರು ಮತ್ತು ಹುದ್ದೆಗಳ ಲಭ್ಯತೆಯ ನಡುವಿನ ಅಗಾಧವಾದ ವ್ಯತ್ಯಾಸ ಇದಕ್ಕೆ ಕಾರಣ. ಪ್ರಸ್ತುತ ಯಾರು ಹೆಚ್ಚು ಸಿದ್ದತೆಯನ್ನು ಮಾಡಿಕೊಂಡಿರುತ್ತಾರೋ, ಯಾರು ನಿರಂತರವಾಗಿ ಪಠ್ಯಕ್ರಮಕ್ಕೆ ತಕ್ಕಂತೆ ಅಧ್ಯಯನಶೀಲರಾಗಿರುತ್ತಾರೋ ಅಂತವರಿಗೆ ಈ ಹುದ್ದೆಗಳು ಲಭಿಸುತ್ತವೆ. ಕೆಲವರು ಹೆಚ್ಚು ಹಣ ಪಾವತಿಸಿ ಕೋಚಿಂಗ್‌ ಹೋಗುತ್ತಾರೆ. ಇನ್ನು ಕೆಲವರು ಹಣ ಪಾವತಿಸಲು ಸಾದ್ಯವಾಗದೇ ಇರುವವರು ಸ್ವಯಂ ಅಧ್ಯಯನ ಕೈಗೊಳ್ಳುತ್ತಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಕೆಎಎಸ್‌ & ಐಎಎಸ್‌ ಪರೀಕ್ಷೆಗೆ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ. ಇದು ಪೂರ್ವಭಾವಿ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳಲು ತುಂಬಾ ಉಪಕಾರಿಯಾಗಿದೆ. ಆಸಕ್ತರು ಈ ಸದಾವಕಾಶವನ್ನು ಬಳಸಿಕೊಳ್ಳಿ. 

ಪಿಯುಸಿ ಮುಗಿಸಿದ ಅಭ್ಯರ್ಥಿಗಳಿಗೆ ಅಜೀಂ ಪ್ರೇಂಜಿ ಫೌಂಡೇಷನ್‌ ನಿಂದ ರೂ. 30000/- ದ ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ: Apply for Deepika Ajim Premji Foundation Schalorship 2026

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್‌ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್‌ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ದಿನಾಂಕ: 17.01.2026 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್ ‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಎಎಸ್‌ ಎಂದರೇನು?

ಇದು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಗೆಜೆಟೆಡ್ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ರಾಜ್ಯ ಮಟ್ಟದ ನಾಗರಿಕ ಸೇವಾ ಪರೀಕ್ಷೆಯಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಭಾರತೀಯ ನಾಗರಿಕರಾಗಿರಬೇಕು, ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು, ವಯಸ್ಸು ಮತ್ತು ಮೀಸಲಾತಿ ಮಾನದಂಡಗಳನ್ನು ಪೂರೈಸಬೇಕು, ಕನ್ನಡ ಭಾಷೆಯ ಜ್ಞಾನ ಕಡ್ಡಾಯವಾಗಿದೆ.

ಅಂಚೆ ಇಲಾಖೆಯಲ್ಲಿ 28740 ಗ್ರಾಮ ಡಾಕ್‌ ಸೇವಕ್ ಹುದ್ದೆಗಳ ಬೃಹತ್‌ ನೇಮಕಾತಿಗೆ ಅರ್ಜಿ- Indian Postal GDS Recruitment 2026

ಐಎಎಸ್‌ ಪರೀಕ್ಷೆ ಎಂದರೇನು?

ಐಎಎಸ್ ಪರೀಕ್ಷೆಯು ಭಾರತೀಯ ಆಡಳಿತ ಸೇವಾ ಪರೀಕ್ಷೆಯನ್ನು ಸೂಚಿಸುತ್ತದೆ, ಇದನ್ನು ಅಧಿಕೃತವಾಗಿ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) ಎಂದು ಕರೆಯಲಾಗುತ್ತದೆ.

ಇದು ಭಾರತದ ಅತ್ಯಂತ ಪ್ರತಿಷ್ಠಿತ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾಗಿದೆ, ಇದನ್ನು ಭಾರತ ಸರ್ಕಾರದ ಉನ್ನತ ನಾಗರಿಕ ಸೇವೆಗಳಿಗೆ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ನಡೆಸುತ್ತದೆ.

 

 

ಕೊನೆಯ ಮಾತು:

ಐಎಎಸ್‌ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್‌ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ದಿನಾಂಕ: 17.01.2026 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ. ನಿಮಗೆ ಒಳ್ಳೆಯದಾಗಲಿ ಎಂದು ಆಶಿಸುತ್ತೇನೆ. ಧನ್ಯವಾದಗಳು

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top