ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! ಸ್ಯಾಲರಿ ಪ್ಯಾಕೇಜ್ ಹೊಂದಿದವರಿಗೆ ಗೃಹ ಸಾಲ, ವೈಯಕ್ತಿಕ ಸಾಲ & ವಾಹನಾ ಸಾಲ ಕಡಿಮೆ ಬಡ್ಡಿದರದಲ್ಲಿ. Good news for Government Employees. Lowest Interest in Home loan, Personal Loan & Vehicle loan for those have salary package
ಸ್ನೇಹಿತರೇ ನಮಸ್ತೆ, ನೀವು ರಾಜ್ಯ ಸರ್ಕಾರಿ ನೌಕರರಾಗಿದ್ದರೇ ಈ ಲೇಖನವನ್ನು ಪೂರ್ಣವಾಗಿ ಓದಿ. ರಾಜ್ಯ ಸರ್ಕಾರಿ ನೌಕರರಿಗೆ ತಾವು ಸಂಬಳ ಪಡೆಯುವ ಬ್ಯಾಂಕುಗಳಲ್ಲಿ ಸ್ಯಾಲರಿ ಪ್ಯಾಕೇಜ್ ಪಡೆಯುವುದು ಕಡ್ಡಾಯಗೊಳಿಸಿದ ನಂತರ ಈಗ ಮತ್ತೊಂದು ತೀರ್ಮಾನ ತೆಗೆದುಕೊಂಡಿದೆ. ರಾಜ್ಯ ಸರ್ಕಾರಿ ನೌಕರರು ಸ್ಯಾಲರಿ ಪ್ಯಾಕೇಜ್ ಹೊಂದಿರುವ ಬ್ಯಾಂಕುಗಳಲ್ಲಿ ಗೃಹಸಾಲ, ವೈಯಕ್ತಿಕ ಸಾಲ ಹಾಗೂ ವಾಹನ ಖರೀದಿ ಸಾಲಗಳಲ್ಲಿ ರಿಯಾಯಿತಿ ಬಡ್ಡಿಗಳಲ್ಲಿ ಸಾಲ ನೀಡುವ ಸಂಬಂಧ ಬ್ಯಾಂಕ್ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ನಡುವೆ ಚರ್ಚಿಸಲು ವಿತ್ತೀಯ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಇತ್ತೀಚೆಗೆ, ಅನೇಕ ಬ್ಯಾಂಕುಗಳು ಸರ್ಕಾರಿ ಅಧಿಕಾರಿಗಳು/ನೌಕರರು ತಮ್ಮ ಉಳಿತಾಯ ಬ್ಯಾಂಕ್ ಖಾತೆಗಳನ್ನು ತೆರೆಯಲು ಆಕರ್ಷಕ “ಸಂಬಳ ಪ್ಯಾಕೇಜ್‌ಗಳನ್ನು” ನೀಡುತ್ತಿವೆ, ಇದರಲ್ಲಿ ಅಧಿಕಾರಿಗಳು/ನೌಕರರಿಗೆ ವಿವಿಧ ರಿಯಾಯಿತಿಗಳು ಮತ್ತು ಅಧಿಕಾರಿ/ನೌಕರರ ಕುಟುಂಬಗಳಿಗೆ ಹೆಚ್ಚುವರಿ ಪ್ರಯೋಜನಗಳು ಸೇರಿವೆ.
ಈ ಸಂಬಳ ಪ್ಯಾಕೇಜ್‌ಗಳಲ್ಲಿ, ಬ್ಯಾಂಕುಗಳ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಅಗತ್ಯವನ್ನು ಕಡ್ಡಾಯಗೊಳಿಸದೇ ಇರುವುದು, 2 ಅಥವಾ 3 ತಿಂಗಳ ನಿವ್ವಳ ವೇತನವನ್ನು ಓವರ್‌ಡ್ರಾಫ್ಟ್ (ಮುಂಗಡ) ಆಗಿ ನೀಡುವುದು, ವಸತಿ ಸಾಲಗಳ ಮೇಲೆ ಕಡಿಮೆ ಬಡ್ಡಿದರವನ್ನು ವಿಸ್ತರಿಸುವುದು, ಉಚಿತ NEFT/RTGS ವರ್ಗಾವಣೆಗಳು, ಉಚಿತ ಡಿಮ್ಯಾಂಡ್ ಡ್ರಾಫ್ಟ್ ಗಳು, ಉಚಿತ ರುಪೇ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ವಿಮೆ, ಬ್ಯಾಗೇಜ್ ವಿಮೆಗಳನ್ನು ನೀಡುವುದು, ಮತ್ತು ಲಾಕರ್ ಬಾಡಿಗೆಯಲ್ಲಿ ರಿಯಾಯಿತಿ ಇತ್ಯಾದಿಗಳನ್ನು ನೀಡುವುದು, ಈ ಕೊಡುಗೆಗಳು ಬ್ಯಾಂಕಿನಿಂದ ಬ್ಯಾಂಕಿಗೆ ಭಿನ್ನವಾಗಿರುತ್ತವೆ. ಮೇಲಿನ ಸೌಲಭ್ಯಗಳ ಜೊತೆಗೆ, ಅಧಿಕಾರಿ/ನೌಕರರ ನಿವ್ವಳ ಸಂಬಳವನ್ನು ಅವಲಂಬಿಸಿ ವಿವಿಧ ಯೋಜನೆಗಳ ಅಡಿಯಲ್ಲಿ ವೈಯಕ್ತಿಕ ಅಪಘಾತ ವಿಮೆ (PAI) ವ್ಯಾಪ್ತಿಯನ್ನು ಯಾವುದೇ ಹೆಚ್ಚುವರಿ ಪ್ರೀಮಿಯಂ ಅನ್ನು ವಿಧಿಸದೆ ನೀಡುತ್ತವೆ.
ಈ ಕಾರಣದಿಂದ ರಾಜ್ಯ ಸರ್ಕಾರ 21-02-2025 ರಂದು ಆದೇಶ ಹೊರಡಿಸಿ ವಿವಿಧ ಬ್ಯಾಂಕುಗಳು ಒದಗಿಸುವ “ಸಂಬಳ ಪ್ಯಾಕೇಜ್‌ಗಳ” ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ/ನೌಕರರಿಗೆ (ಸರ್ಕಾರಿ / ಸರ್ಕಾರಿ ಸಂಸ್ಥೆಗಳು, ಇತ್ಯಾದಿ) ಕಡ್ಡಾಯಗೊಳಿಸಿದೆ. ಬ್ಯಾಂಕ್‌ಗಳು/ಅಂಚೆ ಕಚೇರಿಗಳು ನೀಡುವ PMJJBY ಮತ್ತು PMSBY ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿ/ನೌಕರರನ್ನು ಸಂಬಂಧಪಟ್ಟ ಇಲಾಖೆ ಪ್ರೋತ್ಸಾಹಿಸುವುದು.
ಮುಂದುವರೆದು ದಿನಾಂಕ03-04-2025 ರ ಸಭಾಸೂಚನಾ ಪತ್ರದ ಮೂಲಕ ಕೆಳಗಿನಂತೆ ಸಭೆಗೆ ಆಹ್ವಾನಿಸಿದೆ:
ಅಧಿಕಾರಿಗಳು/ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ, ವಿವಿಧ ಬ್ಯಾಂಕುಗಳು ಒದಗಿಸುವ ವಿಶಿಷ್ಟ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುವಂತೆ ಸಂಬಳ ಪ್ಯಾಕೇಜ್‌ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ರಾಜ್ಯ ಸರ್ಕಾರವು ಕಡ್ಡಾಯಗೊಳಿಸಿದೆ.
ಸದರಿ ಯೋಜನೆಯಡಿ ಸರ್ಕಾರದ ಎಲ್ಲಾ ಅಧಿಕಾರಿಗಳು/ನೌಕರರು ಬ್ಯಾಂಕುಗಳು ನೀಡುತ್ತಿರುವ ಸಂಬಳ ಪ್ಯಾಕೇಜು ಖಾತೆಯಾಗಿ ಪರಿವರ್ತಿಸಿಕೊಳ್ಳಲು ಬ್ಯಾಂಕುಗಳು ಅನುಕೂಲ ಮಾಡಿಕೊಡ ಬೇಕಾಗಿದ್ದು, ಸದರಿ ವಿಷಯದಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ನಿವಾರಣೆ ಮಾಡುವುದು ಅವಶ್ಯಕವಾಗಿರುತ್ತದೆ.
ಮುಂದುವರೆದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾದಕ್ಷರು ರಾಜ್ಯ ಸರ್ಕಾರಿ ನೌಕರರ ಪರವಾಗಿ ಬ್ಯಾಂಕುಗಳು ನಂಬಳ ಪ್ಯಾಕೇಜು ಖಾತೆಯಾಗಿ ಪರಿವರ್ತಿಸಿಕೊಳ್ಳುವ ಅಧಿಕಾರಿ/ನೌಕರರಿಗೆ, ರಾಷ್ಟ್ರೀಕೃತ ಬ್ಯಾಂಕುಗಳು, ಗೃಹ ಸಾಲ, ವೈಯಕ್ತಿಕ ಸಾಲ ಮತ್ತು ವಾಹನ ಖರೀದಿ ಸಾಲಗಳನ್ನು ರಿಯಾಯಿತಿ ಬಡ್ಡಿ ದರದಲ್ಲಿ ನೀಡುವ ಸಂಬಂಧ ಮನವಿ ಮಾಡಿರುವರು.
ಈ ಹಿನ್ನೆಲೆಯಲ್ಲಿ, ಮೇಲಿನ ವಿಷಯಗಳನ್ನು ಚರ್ಚಿಸಲು ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳ ಅಧಿಕಾರಿಗಳೊಂದಿಗೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸರ್ಕಾರದ ಕಾರ್ಯದರ್ಶಿ (ವಿತ್ತೀಯ ಸುಧಾರಣೆ) ರವರ ಅಧ್ಯಕ್ಷತೆಯಲ್ಲಿ ದಿನಾಂಕ 15.04.2025 ರಂದು ಮಧ್ಯಾಹ್ನ 4.00 ಗಂಟೆಗೆ, ಕೊಠಡಿ ಸಂಖ್ಯೆ: 701, 7ನೇ ಮಹಡಿ, ಬಹುಮಹಡಿ ಕಟ್ಟಡ, ಬೆಂಗಳೂರು ಇಲ್ಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ.
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.