Grama Panchayath recruitment 2026: ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರು ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ:

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಚಿತ್ರದುರ್ಗ ಜಿಲ್ಲಾ ಪಂಚಾಯತ ಕಾರ್ಯಾಲಯ, ಚಿತ್ರದುರ್ಗ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಕರ ವಸೂಲಿಗಾರರು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳು ಲಭ್ಯವಿರುವ ಗ್ರಾಮ ಪಂಚಾಯತಿಯ ನಿವಾಸಿಗಳು ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿರುವ ಆನ್ಲೈನ್ ಲಿಂಕ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ.
ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 08-02-2026 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಚಿತ್ರದುರ್ಗ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯತಿ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
| ಸರ್ಕಾರಿ ಸಂಸ್ಥೆ | ಜಿಲ್ಲಾ ಪಂಚಾಯತ್ |
| ಹುದ್ದೆಗಳ ಪದನಾಮ | ಕರವಸೂಲಿಗಾರರು |
| ಹುದ್ದೆಗಳ ಸಂಖ್ಯೆ | 09 |
| ಕೆಲಸದ ಸ್ಥಳ | ಚಿತ್ರದುರ್ಗ ಜಿಲ್ಲೆ |
| ಅರ್ಜಿ ಸಲ್ಲಿಸಲು ಕಡೆಯ ದಿನಾಂಕ | 08-02-2026 |
| ನಮ್ಮ ಟೆಲಿಗ್ರಾಮ್ ಗೆ ಸೇರುವ ಲಿಂಕ್ |
ವೇತನ/ Salary:
ಸರ್ಕಾರದ ನಿಯಮಾವಳಿಗಳನ್ವಯ ವೇತನ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.
ವಯೋಮಿತಿ/ Age limit:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಟಕೆಳಕಂಡ ವರ್ಷವನ್ನು ಮೀರಿರಬಾರದು.
| ವರ್ಗ | ಗರಿಷ್ಠ ವಯೋಮಿತಿ |
| ಸಾಮಾನ್ಯ ವರ್ಗ | 35 ವರ್ಷ |
| 2ಎ, 2ಬಿ, 3ಎ & 3ಬಿ | 38 ವರ್ಷ |
| ಪ.ಜಾ/ ಪ.ಪಂ/ ಪ್ರ 1 | 40 ವರ್ಷ |
ಶೈಕ್ಷಣಿಕ ಅರ್ಹತೆಗಳು/ Educational Qualification:
ಕರ ವಸೂಲಿಗಾರ (Bill Collector):
ದ್ವಿತೀಯ ಪದವಿ ಪೂರ್ವ ಪರೀಕ್ಷೆ (ಪಿ.ಯು.ಸಿ)ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ತರಬೇತಿ ಪಡೆದಿರುವ ಪ್ರಮಾಣಪತ್ರ ಪಡೆದಿರಬೇಕು. ಪಿಯುಸಿಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು.
ವಾಸಸ್ಥಳ/ Residential:
ಕರವಸೂಲಿಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಯಾಗಿರತಕ್ಕದು, ಪರಂತು ಸಂಬಂಧಪಟ್ಟ ಗ್ರಾಮ ಪಂಚಾಯತ್ ನಿವಾಸಿ ಲಭ್ಯತೆ ಇಲ್ಲದಿದ್ದಲ್ಲಿ ಆಯಾ ತಾಲ್ಲೂಕು ಪಂಚಾಯತಿಯ ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯತ್ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸುವುದು. ಸಂಬಂಧಿಸಿದಂತೆ, ಸಕ್ಷಮ ಪ್ರಾಧಿಕಾರವಾದ ತಹಸೀಲ್ದಾರ್ ಇವರಿಂದ ವಾಸಸ್ಥಳ ಪ್ರಮಾಣ ಪತ್ರ ಪಡೆದು ಸಲ್ಲಿಸತಕ್ಕದ್ದು.
ಅರ್ಜಿ ಶುಲ್ಕ / Application Fees:
ಅರ್ಜಿ ಸಲ್ಲಿಸಲು ಯಾರಿಗೂ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆವಿಧಾನ/ Selection procedure:
ಪಿ.ಯು.ಸಿ. ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿದ ಅಂಕಗಳನ್ನು ಆಧರಿಸಿ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಶೇಕಡ 50% ಅಂಕಗಳನ್ನು ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಶೇಕಡ 50% ಅಂಕಗಳನ್ನು ಒಳಗೊಂಡಿರುವ ಅರ್ಹತೆಯ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುವುದು.
ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಷ್ಟರ್ (C & R) ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು / ಮೆರಿಟ್ ನ್ನು ಹೊಂದಿದಲ್ಲಿ ವಯಸ್ಸಿನಲ್ಲಿ ಹಿರಿಯರಾದವರನ್ನು ಆಯ್ಕೆಗೆ ಪರಿಗಣಿಸಲಾಗುವುದು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ & ಇಮೇಲ್ ಐಡಿ
ಇತ್ತೀಚಿನ ಪಾಸ್ಫೋರ್ಟ್ ಸೈಜಿನ ಕಲರ್ ಭಾವಚಿತ್ರ
ಶೈಕ್ಷಣಿಕ ದಾಖಲಾತಿಗಳು (ಹತ್ತನೇ & ಪಿಯುಸಿ ಅಂಕಪಟ್ಟಿ)
ವಾಸಸ್ಥಳ ದೃಡಿಕರಣ ಪತ್ರ
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ,
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಹಾಕುವ ವಿಧಾನ/ Application Submission Method:
- ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
- ಅಭ್ಯರ್ಥಿಗಳು https://www.chitradurga.nic.in/ ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
- ಅಧಿಸೂಚನೆಯಲ್ಲಿನಮೂದಾಗಿರುವ ಬಾರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ UPI ನಲ್ಲಿ ಅರ್ಜಿ ಶುಲ್ಕ ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
ಸಾಮಾನ್ಯ ಸೂಚನೆಗಳು :
ಅಭ್ಯರ್ಥಿಯು ತನ್ನ ಇತ್ತೀಚಿನ 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರಗಳನ್ನು ಲಗತ್ತಿಸಬೇಕು.
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಪತ್ರಾಂಕಿತ ಅಧಿಕಾರಿಯ ದೃಢೀಕರಣದೊಂದಿಗೆ ಸಲ್ಲಿಸುವುದು.
ಹುದ್ದೆಗೆ ನಿಗಧಿಪಡಿಸಿದಂತೆ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಗಳಿಂದ ಕನಿಷ್ಠ 3 ಅಥವಾ 6 ತಿಂಗಳ ತರಬೇತಿ ಹೊಂದಿದ ಗಣಕಯಂತ್ರ ಪ್ರಮಾಣ ಪತ್ರ ಸಲ್ಲಿಸುವುದು.
ಕಾನೂನು ಬಾಹಿರ/ನೀತಿ ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದು ಕಂಡುಬಂದಿದ್ದಲ್ಲಿ ನೇಮಕಾತಿಗೆ ಅನರ್ಹರಾಗಿರುತ್ತಾರೆ.
ಅರ್ಜಿಯಲ್ಲಿ ತಪ್ಪು / ಸುಳ್ಳು ಮಾಹಿತಿ ನೀಡಿ ಉದ್ಯೋಗ ಪಡೆಯುವ ಅಭ್ಯರ್ಥಿಗಳನ್ನು ಯಾವುದೇ ಸಮಯದಲ್ಲಾದರೂ ವಜಾ ಮಾಡಲಾಗುತ್ತದೆ ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಅರ್ಜಿಯಲ್ಲಿ ನೀಡುವ ವಿಳಾಸ ಮತ್ತು ಮೊಬೈಲ್ ಸಂಖ್ಯೆಯೇ ಅಂತಿಮವಾಗಿದ್ದು, ಎಲ್ಲಾ ಪತ್ರ ವ್ಯವಹಾರಗಳನ್ನು ಅದೇ ವಿಳಾಸಕ್ಕೆ ಕಳುಹಿಸಿ ಕೊಡಲಾಗುವುದು. ನಂತರದಲ್ಲಿ ವಿಳಾಸ ಬದಲಾವಣೆ ಬಗ್ಗೆ ಯಾವುದೇ ಪತ್ರ ವ್ಯವಹಾರವನ್ನು ಪರಿಗಣಿಸಲಾಗುವುದಿಲ್ಲ.
ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾಗುವ ಅಭ್ಯರ್ಥಿಗಳಿಗೆ ಅಂಚೆ ಹಾಗೂ ಕಛೇರಿ ದೂರವಾಣಿ ಮೂಲಕ ಮಾಹಿತಿ ನೀಡಲಾಗುವುದು. ಕಡ್ಡಾಯವಾಗಿ ಅರ್ಜಿಯಲ್ಲಿ ನಮೂದಿಸಿದ ಎಲ್ಲಾ ಮೂಲ ದಾಖಲೆಗಳನ್ನು ಸಲ್ಲಿಸತಕ್ಕದ್ದು.
. ನಿಗದಿಪಡಿಸಿದ ದಿನಾಂಕದಂದು ದಾಖಲಾತಿಗಳ ಪರಿಶೀಲನೆಗೆ ಹಾಜರಾಗದೇ ಇರುವ ಅಭ್ಯರ್ಥಿಗಳು ಅನರ್ಹಗೊಳ್ಳುತ್ತಾರೆ ಹಾಗೂ ಅವರ ಹೆಸರನ್ನು ನೇಮಕಾತಿ ಪ್ರಕ್ರಿಯೆಯಿಂದ ಕೈಬಿಡಲಾಗುವುದು.
. ಅರ್ಜಿಯಲ್ಲಿ ಕೇಳಿರುವ ಪೂರ್ಣ ಮಾಹಿತಿಯನ್ನು ಭರ್ತಿ ಮಾಡಿಲ್ಲದೇ ಇರುವ ಅಭ್ಯರ್ಥಿಗಳ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೇ ತಿರಸ್ಕರಿಸಲಾಗುವುದು.
ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಓದಲು, ಬರೆಯಲು ಮತ್ತು ಅರ್ಥ ಮಾಡಿಕೊಳ್ಳುವ ಜ್ಞಾನದ ಅವಶ್ಯಕತೆ ಕಡ್ಡಾಯವಾಗಿರುತ್ತದೆ. ಹಾಗೂ ಸರ್ಕಾರಿ ನಿಯಮಾನುಸಾರ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ತೇರ್ಗಡೆಯಾಗುವುದು.
ಹೆಚ್ಚಿನ ವಿವರಗಳಿಗಾಗಿ ಚಿತ್ರದುರ್ಗ ಜಿಲ್ಲೆಯ ವೆಬ್‌ಸೈಟ್ chitradurga.nic.in ರಲ್ಲಿ ಲಭ್ಯವಿರುತ್ತದೆ ಮತ್ತು ಸ್ಪಷ್ಟಿಕರಣ ಅವಶ್ಯವಿದ್ದಲ್ಲಿ ಸಹಾಯವಾಣಿ ಸಂಖ್ಯೆ: 9448224723 ಗೆ ಕಛೇರಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
ಹುದ್ದೆಗಳು ಖಾಲಿ ಇರುವ ಸ್ಥಳಗಳು:
| ಗ್ರಾಮ ಪಂಚಾಯತಿ | ಮೀಸಲಾತಿ |
| ಮೈಲನಹಳ್ಳಿ | ಪ.ಜಾ (ಎ) |
| ಹಿರೇಹಳ್ಳಿ | ಸಾಮಾನ್ಯ |
| ಸಿರಿಗೆರೆ | ಪ.ಪಂ |
| ಸಾಣಿಗೆರೆ | ಸಾಮಾನ್ಯ |
| ತಂಡಗ | ಪ್ರವರ್ಗ 1 |
| ನುಲೇನೂರ | ಸಾಮಾನ್ಯ |
| ದೊಡ್ಡೇರಿ | 2ಎ |
| ಜಾಜೂರು | ಸಾಮಾನ್ಯ |
| ಗನ್ನಾಯಕನಹಳ್ಳಿ | ಪಜಾ (ಬಿ) |
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-02-2025
Important Links/ ಪ್ರಮುಖ ಲಿಂಕುಗಳು:
| ಅಧಿಸೂಚನೆ/ Notification: |
| ಅರ್ಜಿ ಸಲ್ಲಿಸಿ/ Apply Online: |
| ವೆಬ್ಸೈಟ್/ Website : |
ಕೊನೆಯ ಮಾತು:
ಚಿತ್ರದುರ್ಗ ಜಿಲ್ಲಾ ಪಂಚಾಯತ ಕಾರ್ಯಾಲಯ, ಚಿತ್ರದುರ್ಗ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಕರ ವಸೂಲಿಗಾರರು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಪಿಯುಸಿ ಮುಗಿಸಿದ ಸ್ಥಳೀಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಮೊದಲು ಎಲ್ಲ ಅಗತ್ಯ ದಾಖಲೆಗಳು ಇರುವುದನ್ನು ಮತ್ತು ಅವುಗಳು ಸಿಂಧುವಾಗಿರುವುದನ್ನು ಖಚಿತಪಡಿಸಿಕೊಳ್ಳಿ. ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮೂಲಕ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ನೇಮಕಾತಿಗೆ ಪರೀಕ್ಷೆಯನ್ನು ನಡೆಸದೇ ಪಿಯುಸಿ ಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳುತ್ತಾರೆ. ಆದ್ದರಿಂದ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಅಭ್ಯರ್ಥಿಗಳು ಅರ್ಜಿ ಹಾಕಿ. ಒಳ್ಳೆಯದಾಗಲಿ ಎಂದು ಆಶಿಸುತ್ತೇವೆ.
