ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಅತಿಥಿ ಉಪನ್ಯಾಸಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ| Gulbarga University GF Walk in 2025
ನಮಸ್ತೆ ಸ್ನೇಹಿತರೆ, ಗುಲ್ಬರ್ಗಾ ವಿಶ್ವವಿದ್ಯಾಲಯದ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವಿಶ್ವವಿದ್ಯಾಲಯದ ಮುಖ್ಯ ಆವರಣ ಹಾಗೂ ಸ್ನಾತಕೋತ್ತರ ಕೇಂದ್ರ ಆಳಂದದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗುಲ್ಬರ್ಗ ವಿಶ್ವವಿದ್ಯಾಲಯದಿಂದ ನಡೆಸಲಾಗುವ ನೇರ ಸಂದರ್ಶನಕ್ಕೆ ನಿಗದಿ ಪಡಿಸಿದ ದಿನಾಂಕದಂದು ಹಾಜರಾಗಲು ಸೂಚಿಸಲಾಗಿದೆ.
ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿ ಕುರಿತಂತೆ ಗುಲ್ಬರ್ಗ ವಿಶ್ವವಿದ್ಯಾಲಯದಿಂದ ವಿವಿಧ ವಿಷಯಗಳ ನೇರ ಸಂದರ್ಶನವನ್ನು ದಿನಾಂಕ 13 ಜನವರಿ 2025 ರಂದು ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಭ್ಯರ್ಥಿಗಳು ಸದರಿ ದಿನದಂದು ಗುಲ್ಬರ್ಗ ವಿಶ್ವವಿದ್ಯಾಲಯದ ಸಂದರ್ಶನ ಸ್ಥಳಕ್ಕೆ ಆಗಮಿಸಿ, ನೇರ ಸಂದರ್ಶನವನ್ನು ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಿ.
ನೇಮಕಾತಿಯ ಕಾಲಾವಧಿ
ಅತಿಥಿ ಉಪನ್ಯಾಸಕ ಹುದ್ದೆಗಳನ್ನ 2024-25ನೇ ಶೈಕ್ಷಣಿಕ ಸಾಲಿಗೆ ಮಾತ್ರ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಶೈಕ್ಷಣಿಕ ವರ್ಷ ಮುಗಿದ ನಂತರ ಅತಿಥಿ ಉಪನ್ಯಾಸಕ ಕಾರ್ಯವು ಮುಗಿಯುತ್ತದೆ.
ಖಾಲಿ ಇರುವ ವಿಷಯ
ಗುಲ್ಬರ್ಗ ವಿಶ್ವವಿದ್ಯಾಲಯದ ಮುಖ್ಯ ಆವರಣದ ಮೆಟೀರಿಯಲ್ ಸೈನ್ಸ್ ಶಿಕ್ಷಣ ಮತ್ತು ಸ್ನಾತಕೋತ್ತರ ಕೇಂದ್ರ ಅಳಂದದಲ್ಲಿ ಗಣಿತಶಾಸ್ತ್ರ ವಿಷಯಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ತುಂಬಿಕೊಳ್ಳಲಾಗುತ್ತಿದೆ.
ವೇತನ ಅಥವಾ ಗೌರವದನ
ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಕಾರ್ಯಭಾರಗಳಿಗೆ ಅನುಗುಣವಾಗಿ ನಿಗದಿಪಡಿಸಿದ ಮಾಸಿಕ ವೇತನ ಅಥವಾ ಗೌರವದನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ
ಮಾನ್ಯತಾ ಹೊಂದಿದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪಿಎಚ್ಡಿ ನೆಟ್ ಅಥವಾ ಸ್ಲೇಟ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ
ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಹಾಜರಾಗಲು ಯಾವುದೇ ಕನಿಷ್ಠ ಅಥವಾ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿರುವುದಿಲ್ಲ.
ಆಯ್ಕೆ ವಿಧಾನ
ಅತಿಥಿ ಉಪನ್ಯಾಸಕ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ
ನೇರ ಸಂದರ್ಶನಕ್ಕೆ ಅಗತ್ಯವಿರುವ ದಾಖಲೆಗಳು
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಸೇವಾ ದಾಖಲಾತಿಗಳು
ನೇರ ಸಂದರ್ಶನ ನಡೆಯುವ ಸ್ಥಳ
ಸಿಂಡಿಕೇಟ್ ಸಭಾಂಗಣ ಗುಲ್ಬರ್ಗಾ ವಿಶ್ವವಿದ್ಯಾಲಯ
ನೇರ ಸಂದರ್ಶನ ನಡೆಯುವ ದಿನಾಂಕ
ಅಧಿಸೂಚನೆಯ ಅನುಸಾರ ದಿನಾಂಕ 13.01.2025 ರಂದು ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನ ಆರಂಭವಾಗುತ್ತದೆ.
ಪ್ರಮುಖ ಲಿಂಕುಗಳು
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ. ಆದಾಗ್ಯೂ ಆಫೀಶಿಯಲ್ ವೆಬ್ಸೈಟ್/ ಸಂಸ್ಥೆಯನ್ನ ಒಮ್ಮೆ ಸಂಪರ್ಕಿಸಿ ಮತ್ತೊಮ್ಮೆ ಖಚಿತ ಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಿ.