ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಅಧಿಸೂಚನೆ ಬಿಡುಗಡೆ: ವೇತನ ತಿಂಗಳಿಗೆ ರೂ. ರೂ. 144700-197200 Karnataka Water Board Recruitment 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ವಿನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 20-02-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೋತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಕರ್ನಾಟಕ ನೀರಾವರಿ ನಿಗಮ ನಿಯಮಿತದಲ್ಲಿ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ: |
ನೇಮಕಾತಿ ಕಛೇರಿ: ಕರ್ನಾಟಕ ನೀರಾವರಿ ನಿಗಮ ನಿಯಮಿತ |
ಹುದ್ದೆಗಳ ಪದನಾಮ: ಕಂಪನಿ ಕಾರ್ಯದರ್ಶಿ (Company Secretary) |
ಹುದ್ದೆಗಳ ಸಂಖ್ಯೆ: 01 ಹುದ್ದೆ |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಕರ್ನಾಟಕ |
ವೇತನ ಶ್ರೇಣಿ: |
ಅಧಿಸೂಚನೆಯ ಪ್ರಕಾರ ಮೂಲವೇತನ ಶ್ರೇಣಿ ರೂ. 144700-197200 ನಿಗದಿಪಡಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ |
ಅಭ್ಯರ್ಥಿಗಳು ಮಾನ್ಯತೆ ಪಡೆದ UGC ಯಿಂದ ACS ವಿದ್ಯಾರ್ಹತೆ ಪಡೆದಿರಬೇಕು. ಕಂಪನಿ ಕಾರ್ಯದರ್ಶಿಯಾಗಿ ಹತ್ತು ವರ್ಷಗಳ ಅನುಭವ ಹೊಂದಿರಬೇಕು. Institute of Companies Secretaries in India ದ ಸದಸ್ಯರಾಗಿರಬೇಕು. ಹಣಕಾಸು / ಮಾರ್ಕೆಂಟಿಂಗ್ ಪದವಿ ಹೊಂದಿದವರಿಗೆ ಆಧ್ಯತೆ ನೀಡಲಾಗುವುದು.
ವಯೋಮಿತಿ: |
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 45 ವರ್ಷಗಳನ್ನು ಮೀರುವಂತಿಲ್ಲ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು: |
1. ಭರ್ತಿ ಮಾಡಿರುವ ಅರ್ಜಿ ನಮೂನೆ
2. ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
3. ಜಾತಿ & ಆದಾಯ ಪ್ರಮಾಣ ಪತ್ರ, ಕನ್ನಡ ಮಾದ್ಯಮ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
4. ಸೇವಾ ದಾಖಲಾತಿಗಳು
5. ಸಂಶೋಧನಾ ಲೇಖನಗಳು, ಅವಾರ್ಡ್ ಗಳು, ಇತರೆ ಪ್ರಸಂಶನೀಯ ಪ್ರಮಾಣಪತ್ರಗಳು
6. ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ? |
1. ಈ ಲೇಖನದ ಕೊನೆಯ ಭಾಗದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ..
2. ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
3. ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
4. ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ.
5. ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
6. ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.
ಅರ್ಜಿ ಕಳುಹಿಸಿಕೊಡುವ ವಿಳಾಸ: |
ಕರ್ನಾಟಕ ನೀರಾವರಿ ನಿಗಮ ನಿಯಮಿತ, 4ನೇ ಮಹಡಿ, ಕಾಫಿ ಬೋರ್ಡ್ ಕಟ್ಟಡ, ನಂ1, ಡಾ. ಬಿ. ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ: |
ಅರ್ಜಿ ಸಲ್ಲಿಸಲು ಆರಂಭ: 16-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-02-2025
ಅರ್ಜಿ ನಮೂನೆ ಹಾಗೂ ಅಧಿಸೂಚನೆ ಡೌನ್‌ಲೋಡ್ ಮಾಡಿಕೊಳ್ಳಿ.
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.