ಕೆಪಿಎಸ್ಸಿ ಯಿಂದ ನಡೆದ 384 ಕೆಎಎಸ್ ಪರೀಕ್ಷೆಯ ಕೀ ಉತ್ತರಗಳು & ಆಕ್ಷೇಪಣೆ ಸಲ್ಲಿಸಲು ಅವಕಾಶ- KAS EXAM KEY ANSWERS 2025
ಸ್ನೇಹಿತರೆ ನಮಸ್ತೆ ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 29.12.2024 ರಂದು ನಡೆದ 384 ಕೆಎಎಸ್ ಗೆಜೆಟೆಡ್ ಪ್ರೊಬೆಷನರ್ ಮರು ಪರೀಕ್ಷೆಯ ಕೀ ಉತ್ತರಗಳನ್ನು ಇದೀಗ ತಾನೇ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಕೀ ಉತ್ತರಗಳ ಕುರಿತಾಗಿ ಯಾವುದೇ ಗೊಂದಲಗಳು ಅಥವಾ ಆಕ್ಷೇಪಣೆಗಳು ಇದ್ದಲ್ಲಿ ಕೀ ಉತ್ತರ ಪ್ರಕಟಿಸಿದ ಏಳು ದಿನಗಳ ಒಳಗಾಗಿ ಸಲ್ಲಿಸಬಹುದಾಗಿದೆ.
ಆಯೋಗವು ದಿನಾಂಕ:29-12-2024ರಂದು ನಡೆಸಿದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ (ಆರ್.ಪಿ.ಸಿ.ವೃಂದ ಮತ್ತು ಹೈ.ಕ. ವೃಂದ) ಪೂರ್ವಭಾವಿ ಮರುಪರೀಕ್ಷೆಯ ಪತ್ರಿಕೆ-I (ವಿಷಯ ಸಂಕೇತ-589) ಮತ್ತು ಪತ್ರಿಕೆ-II (ವಿಷಯ ಸಂಕೇತ-590)ರ ಕೀ-ಉತ್ತರಗಳನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿರುತ್ತದೆ.
ಅಭ್ಯರ್ಥಿಗಳು ಸದರಿ “ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ದಿನಾಂಕ:22-01-2025ರಂದು ಸಂಜೆ 5-30 ರೊಳಗಾಗಿ ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001 ಈ ವಿಳಾಸಕ್ಕೆ ಮಾತ್ರ ತಲುಪುವಂತೆ ಕಳುಹಿಸತಕ್ಕದ್ದು, ಆಕ್ಷೇಪಣೆಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ: 22-01-2025 ಸಂಜೆ 5:30 ಆಗಿದ್ದು, ಈ ಅವಧಿಯ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ
ಹಾಗೂ ಅಭ್ಯರ್ಥಿಗಳ ಆಕ್ಷೇಪಣೆಗಳು ಅಂಚೆಯ ಮೂಲಕ ಆಯೋಗಕ್ಕೆ ತಲುಪಲು ವಿಳಂಬವಾದಲ್ಲಿ ಕೆ.ಪಿ.ಎಸ್.ಸಿ.ಯು ಜವಾಬ್ದಾರಿಯಾಗಿರುವುದಿಲ್ಲ. ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಅಭ್ಯರ್ಥಿಗಳಿಗೆ ಸೂಚನೆಗಳು:
1) ಆಕ್ಷೇಪಣೆಗಳನ್ನು ಕಡ್ಡಾಯವಾಗಿ ಆಯೋಗದ ಜಾಲತಾಣದಲ್ಲಿ ಪ್ರಕಟಿಸಿರುವ ನಮೂನೆಯಲ್ಲಿಯೇ (ಕನ್ನಡ ಅಥವಾ ಇಂಗ್ಲೀಷ್) ಸಲ್ಲಿಸಬೇಕು.
2) ಆಕ್ಷೇಪಣೆಗಳನ್ನು ಸಲ್ಲಿಸುವ ಪ್ರತಿ ಪ್ರಶ್ನೆಗೆ ರೂ.50/-ರಂತೆ ಶುಲ್ಕವನ್ನು (ಐ.ಪಿ.ಓ ಅಥವಾ ಡಿ.ಡಿ. ಮೂಲಕ) ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು, ಇವರ ಹೆಸರಿಗೆ ಸಂದಾಯ ಮಾಡಬೇಕು.
3) ಶುಲ್ಕ ಸಂದಾಯ ಮಾಡದ ಆಕ್ಷೇಪಣಾ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
4) ಪ್ರತಿ ಪ್ರಶ್ನೆಯ ಕೀ ಉತ್ತರಕ್ಕೆ ಸಲ್ಲಿಸುವ ಆಕ್ಷೇಪಣೆಗಳಿಗೆ ಪೂರಕವಾಗಿ ಸಲ್ಲಿಸುವ ದಾಖಲೆಗಳಿಗೆ ಸಂಬಂಧಿಸಿದಂತೆ ಲೇಖಕರ ಹೆಸರು, ಪ್ರಕಾಶನದ ಪ್ರತಿ ಇತ್ಯಾದಿ ವಿವರಗಳನ್ನು ಆಕ್ಷೇಪಣೆಗಳೊಂದಿಗೆ ನಿಗದಿತ ನಮೂನೆಯಲ್ಲಿ ನಮೂದಿಸತಕ್ಕದ್ದು.
5) ದಾಖಲೆಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು.
6) ದಾಖಲೆಗಳ ಪ್ರತಿ ಪುಟದ ಮೇಲೆ ಪ್ರಶ್ನೆ ಸಂಖ್ಯೆ ಮತ್ತು ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯತಕ್ಕದ್ದು.
7) ಆಕ್ಷೇಪಣೆಯೊಂದಿಗೆ ಅಭ್ಯರ್ಥಿಯು ದೃಢೀಕರಿಸಿದ ಪ್ರವೇಶ ಪತ್ರದ ಪ್ರತಿಯನ್ನು ಪರಿಶೀಲನೆಗಾಗಿ ಲಗತ್ತಿಸಬೇಕು.
ಪ್ರಮುಖ ಲಿಂಕುಗಳು:
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ. ಆದಾಗ್ಯೂ ಆಫೀಶಿಯಲ್ ವೆಬ್ಸೈಟ್/ ಸಂಸ್ಥೆಯನ್ನ ಒಮ್ಮೆ ಸಂಪರ್ಕಿಸಿ ಮತ್ತೊಮ್ಮೆ ಖಚಿತ ಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಿ.