KEA- BCWD Notification 2025 ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯಾವುದೇ ಪದವೀಧರರಿಗೆ ಅಧಿಸೂಚನೆ| ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ:
ಸ್ನೇಹಿತರೇ, ನಮಸ್ತೆ 2025-26ನೇ ಸಾಲಿಗೆ ಕರ್ನಾಟಕ ಸರ್ಕಾರ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪ್ರವರ್ಗ 1, 2ಎ, 2ಬಿ, 3ಎ & 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ನಾಗರಿಕ ಸೇವಾ ಮತ್ತು ಬ್ಯಾಂಕಿಂಗ್ ಪ್ರೊಬೇಶನರಿ ಆಫೀಸರ್ ಪರೀಕ್ಷೆಗಳ ಪೂರ್ವಭಾವಿ ಉಚಿತ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಕುರಿತು ಪತ್ರಿಕಾ ಪ್ರಕಟಣೆ ಹೊರಬಿದ್ದಿದೆ. ಪದವಿ ಮುಗಿಸಿದ ಆಸಕ್ತ ಮಹಿಳಾ & ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.
2025-26ನೇ ಸಾಲಿಗೆ ಪ್ರತಿಷ್ಟಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳ ಮೂಲಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರವರ್ಗ 1, 2ಎ, 2ಬಿ, 3ಎ & 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ನಾಗರಿಕ ಸೇವಾ ಮತ್ತು ಬ್ಯಾಂಕಿಂಗ್ ಪಿಓ ಪರೀಕ್ಷೆಗಳ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಯು.ಪಿ.ಎಸ್.ಸಿ ನಾಗರಿಕ ಸೇವಾ ಮತ್ತು ಬ್ಯಾಂಕಿಂಗ್ ಪಿಓ ಪರೀಕ್ಷೆಗಳ ಪರೀಕ್ಷೆಗಳಿಗೆ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (K.E.A) Karnataka Examination Authority ರವರ ಮೂಲಕ ಸಾಮಾನ್ಯ ಪವೇಶ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗಧಿತ ಗುರಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ. ಸದರಿ ಅಭ್ಯರ್ಥಿಗಳಿಗೆ ಶಿಷ್ಯ ವೇತನವನ್ನು ಸರ್ಕಾರದಿಂದ ಮಂಜೂರಾದ ದರದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು ಮತ್ತು ತರಬೇತಿ ವೆಚ್ಚವನ್ನು ತರಬೇತಿ ಸಂಸ್ಥೆಗಳಿಗೆ ಪಾವತಿಸಲಾಗುವುದು.
ಯು.ಪಿ.ಎಸ್.ಸಿ ನಾಗರಿಕ ಸೇವಾ ಮತ್ತು ಬ್ಯಾಂಕಿಂಗ್ ಪಿಓ ಪರೀಕ್ಷೆಗಳ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.
ಕೋರ್ಸ್ ಗಳ ವಿವರ & ತರಬೇತಿಯ ಅವಧಿ:
ಕೋರ್ಸ್ | ಅವಧಿ |
UPSC ಪರೀಕ್ಷೆ | 7 ರಿಂದ 9 ತಿಂಗಳು |
Banking PO | 3 ತಿಂಗಳು |
ವಯೋಮಿತಿ:
ಕೋರ್ಸ್ | ವಯೋಮಿತಿ |
UPSC ಪರೀಕ್ಷೆ | 21-31 |
Banking PO | 21-27 |
ಅಭ್ಯರ್ಥಿಯ ಸಾಮಾನ್ಯ ಅರ್ಹತೆಗಳು:
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
- ನಿಗದಿತ ನಮೂನೆಯಲ್ಲಿ ಜಾತಿ & ಆದಾಯ ಪ್ರಮಾಣಪತ್ರ ಹೊಂದಿರಬೇಕು.
- ವಾರ್ಷಿಕ ಆದಾಯ ಎಲ್ಲ ಮೂಲಗಳಿಂದ ರೂ. 5 ಲಕ್ಷ ಮೀರಿರಬಾರದು.
- ನಿಗದಿತ ಮಿಸಲಾತಿಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಪ್ರಮಾಣಪತ್ರ ಪಡೆದಿರಬೇಕು.
- ಅಭ್ಯರ್ಥಿಗಳು ಯಾವುದಾದರೂ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಿದ್ಯಾರ್ಹತೆ:
ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಮುಗಿಸಿರಬೇಕು.
ಆಯ್ಕೆ ವಿಧಾನ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ & ಇಮೇಲ್ ಐಡಿ
ಆಧಾರ್ ಕಾರ್ಡ್
ಶೈಕ್ಷಣಿಕ ದಾಖಲಾತಿಗಳು
ಇತ್ತೀಚಿನ ಭಾವಚಿತ್ರ
ಜಾತಿ & ಆದಾಯ ಪ್ರಮಾಣ ಪತ್ರ,
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಹಾಕುವ ವಿಧಾನ/ Application Submission Method:
- ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
- ಅಭ್ಯರ್ಥಿಗಳು www.kea.kar.nic.in ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
- Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-06-2025
ಪ್ರಮುಖ ಲಿಂಕುಗಳು:
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.