ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ಶಾಲೆಗಳಲ್ಲಿ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಆಹ್ವಾನ| KREIS Admission Entrance Exam 2026
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ /ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ| ಬಿ.ಆರ್. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 2026 ನೇ ಸಾಲಿಗೆ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಕಟಣೆ ಹೊರಬಿದ್ದಿದೆ. ಈ ಶಾಲೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಹೊಂದಿರಬೇಕಾದ ಅರ್ಹತೆಗಳು, ಆದಾಯ ಮಿತಿ, ಅರ್ಜಿ ಸಲ್ಲಿಸುವ ವಿದಾನ, ಪರೀಕ್ಷಾ ವಿಧಾನ, ಪ್ರಮುಖ ದಿನಾಂಕ & ಇನ್ನಿತರ ಮಾಹಿತಿಗಳನ್ನುಇಲ್ಲಿ ತಿಳಿಸಿಕೊಡಲಾಗಿದೆ. ಆಕಾಂಕ್ಷಿಗಳು ಇದನ್ನು ಪೂರ್ತಿಯಾಗಿ ಓದಿಕೊಳ್ಳಿ & ಇತರರಿಗೂ ಶೇರ್ ಮಾಡಿ.

ಸರ್ಕಾರದ ಆದೇಶಾನುಸಾರ 2026-27ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಮತ್ತು ಪೋಷಕರ ಅನುಕೂಲಕ್ಕಾಗಿ ಪ್ರಾಧಿಕಾರದ ವೆಬ್ ಸೈಟಿನಲ್ಲಿ ಮಾಹಿತಿಯನ್ನು ಪ್ರಕಟಿಸಲಾಗಿದೆ.
ಪ್ರಾಥಮಿಕ ಗ್ರಾಮೀಣ ಕೃಷಿ ಸಂಘದಲ್ಲಿ ಖಾಲಿ ಇರುವ ಗುಮಾಸ್ತ & ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಭ್ಯರ್ಥಿಗಳು / ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 10-01-2026 ರಿಂದ ಪ್ರಾಧಿಕಾರದ ವೆಬ್‌ಸೈಟಿನಿಂದ ಘೋಷಣಾ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ 25-01-2026 ಸಂಜೆ 4.00 ರೊಳಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ವಸತಿ ಶಾಲೆಗಳಿಗೆ ಸಲ್ಲಿಸಿ ಸ್ವೀಕೃತಿ ಪಡೆಯಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಕೆಳಕಂಡಂತಿದೆ.
| ವರ್ಗ | ವಾರ್ಷಿಕ ಆದಾಯ ಮಿತಿ |
| 2ಎ, 2ಬಿ, 3ಎ & 3ಬಿ ವರ್ಗ | 2.5 ಲಕ್ಷ ರೂ |
| ಪ್ರವರ್ಗ 1 | 2.5 ಲಕ್ಷ ರೂ |
| ಪರಿಶಿಷ್ಟ ಜಾತಿ/ ಪ. ಪಂಗಡ | 1 ಲಕ್ಷ |
ಕೇಂದ್ರ ಸಚಿವಾಲಯದಲ್ಲಿ ಖಾಲಿ ಇರುವ 316 ಗ್ರೂಪ್ ಸಿ ಸ್ಟೆನೋಗ್ರಾಫರ್ ಹುದ್ದೆಗ ನೇಮಕಾತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವುದು ಹೇಗೆ/ Application Submission Method?
6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2026” ವನ್ನು https://cetonline.karnataka.gov.in/kea/kreis2026 ವೆಬ್ ಸೈಟ್ http://kreis.karnataka.gov.in ನಲ್ಲಿ ಪಡೆಯಬಹುದು. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ 18-02-2026 ರಿಂದ ಈ ಮೇಲ್ಕಂಡ ವೆಬ್‌ಸೈಟ್‌ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಗಮನಿಸಿ/ Attention:
ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ. ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರ ಮುಖ್ಯಸ್ಥರನ್ನು ಸಂಪರ್ಕಿಸಬೇಕು.
ಹೇಗೆ ಆಯ್ಕೆ ಮಾಡಲಾಗುತ್ತದೆ/ Selection Procedure?
ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿ /ವಿದ್ಯಾರ್ಥಿನಿಯರಿಗೆ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.
ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 70000/-
ಪ್ರವೇಶ ಪರೀಕ್ಷೆಯ ದಿನಾಂಕ:
01-03-2026 ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1.00 ರವರೆಗೆ
ಪ್ರಮುಖ ಲಿಂಕುಗಳು
ಕೊನೆಯ ಮಾತು:
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ /ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ| ಬಿ.ಆರ್. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು ಆಸಕ್ತ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವ ಕ್ರಮವನ್ನು ಅನುಸರಿಸಿ ಮತ್ತು ಅದಕ್ಕೆ ಇಂದಿನಿಂದಲೇ ಸರಿಯಾದ ಅಧ್ಯಯನವನ್ನು ಕೈಗೊಳ್ಳಿ. ನಿಮಗೆಲ್ಲರಿಗೂ ಯಶಸ್ಸು ಸಿಗಲಿ ಎಂದು ಆಶಿಸುತ್ತೇನೆ.
