162 ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ ನಿಂದ ಅರ್ಜಿ ಆಹ್ವಾನ: Nabard Development Officer 2026

WhatsApp Group Join Now
Telegram Group Join Now
Spread the love

 ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ ನಲ್ಲಿ ಖಾಲಿ ಇರುವ 162 ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Nabard Development Officer 2026

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ರಾಷ್ಟ್ರೀಯ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ (ನಬಾರ್ಡ್)‌ ನಲ್ಲಿ ಖಾಲಿ ಇರುವ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಹೌದು ಸ್ನೇಹಿತರೇ ನಬಾರ್ಡ್‌ ನಲ್ಲಿ  ಖಾಲಿ ಇರುವ  162 ಅಭಿವೃದ್ಧಿ ಅಧಿಕಾರಿ  ಹುದ್ದೆಗಳನ್ನು ತುಂಬಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ.

‌National Bank for Agriculture and Rural Development (NABARD) ದಲ್ಲಿ ಖಾಲಿ ಇರುವ 162 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 03-02-2026 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ರಾಷ್ಟ್ರೀಯ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ (ನಬಾರ್ಡ್) ನಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

KSOU ನಿಂದ ದೂರ ಶಿಕ್ಷಣದ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ: KSOU UG AND PG ADMISSION 2026

ಹುದ್ದೆಗಳ ವಿವರ/ Post Details:

ಸಂಸ್ಥೆ ರಾಷ್ಟ್ರೀಯ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ (ನಬಾರ್ಡ್)
ಹುದ್ದೆಗಳ ಹೆಸರು ಅಭಿವೃದ್ಧಿ ಅಧಿಕಾರಿ
ಹುದ್ದೆಗಳ ಸಂಖ್ಯೆ 162 ಹುದ್ದೆಗಳು
ಕೆಲಸದ ಸ್ಥಳ ದೇಶದ ಎಲ್ಲ ಕಡೆ

 

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಅಭಿವೃದ್ಧಿ ಅಧಿಕಾರಿ 159 ಹುದ್ದೆಗಳು
ಅಭಿವೃದ್ಧಿ ಅಧಿಕಾರಿ (ಹಿಂದಿ) 03 ಹುದ್ದೆಗಳು

ಅಭಿವೃದ್ಧಿ ಅಧಿಕಾರಿ ಹುದ್ದೆಗಳು ಮೀಸಲಾತಿವಾರು ಹಂಚಿಕೆ:

ಸಾಮಾನ್ಯ ವರ್ಗ: 78

ಪರಿಶಿಷ್ಟ ಜಾತಿ: 21

ಪರಿಶಿಷ್ಟ ಪಂಗಡ: 17

ಇತರೆ ಹಿಂದೂಳಿದ ವರ್ಗ: 26

ಆರ್ಥಿಕವಾಗಿ ಹಿಂದೂಳಿದ ವರ್ಗ: 17

ಅಂಗವಿಕಲ : 07

ಮಾಜಿ ಸೈನಿಕ : 16

ಅಭಿವೃದ್ಧಿ ಅಧಿಕಾರಿ (ಹಿಂದಿ) ಹುದ್ದೆಗಳು ಮೀಸಲಾತಿವಾರು ಹಂಚಿಕೆ:

ಸಾಮಾನ್ಯ ವರ್ಗ: 02

ಇತರೆ ಹಿಂದೂಳಿದ ವರ್ಗ: 01

 

ವೇತನ/ Salary Scale

ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂಲವೇತನ ರೂ.23100-55700 ರವರೆಗೆ ಇರಲಿದೆ. ಇದಕ್ಕೆ ಮನೆಬಾಡಿಗೆ ಭತ್ಯೆ, ತುಟ್ಟಿಭತ್ಯೆ ಹಾಗೂ ಇನ್ನಿತರ ಸೌಲಭ್ಯಗಳು ಸಿಗಲಿದೆ. ಅಂದರೆ ಆಯ್ಕೆಯಾದ ಪ್ರಾರಂಭದಲ್ಲಿ ರೂ.46500/- ರವರೆಗೆ ನಿವ್ವಳ ವೇತನ ಸಿಗಲಿದೆ.

ವಯೋಮಿತಿ/ Age limit:

ದಿನಾಂಕ 01-01-2026ಕ್ಕೆ ನಿಗದಿಪಡಿಸಿದಂತೆ

ಕನಿಷ್ಟ ವಯೋಮಿತಿ- 21 ವರ್ಷ

ಗರಿಷ್ಟ ವಯೋಮಿತಿ 35 ವರ್ಷ

ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.

ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಂಘದಲ್ಲಿ ಖಾಲಿ ಇರುವ ಗುಮಾಸ್ತ & ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭಿವೃದ್ಧಿ ಅಧಿಕಾರಿ:-

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

ಅಭಿವೃದ್ಧಿ ಅಧಿಕಾರಿ (ಹಿಂದಿ): ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ವಿಶ್ವವಿದ್ಯಾಲಯದಿಂದ ಇಂಗ್ಲಿಷ್/ಹಿಂದಿ ವಿಷಯದಲ್ಲಿ ಕನಿಷ್ಟ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಪ.ಜಾ/ಪ.ಪಂ/ ಅಂಗವಿಕಲ ರೂ.100/-
ಸಾಮಾನ್ಯ/ಓಬಿಸಿ/ಇಡಬ್ಲೂಎಸ್‌ ರೂ.550/-
ನಬಾರ್ಡ್‌ ಸಿಬ್ಬಂದಿಗಳಿಗೆ ಅರ್ಜಿ ಶುಲ್ಕವಿಲ್ಲ

 ಆಯ್ಕೆವಿಧಾನ/ Selection procedure:

ಹಂತ 1: ಪೂರ್ವಭಾವಿ ಪರೀಕ್ಷೆ/ Preliminary Examination

ಹಂತ 2: ಮುಖ್ಯ ಪರೀಕ್ಷೆ/ Main Exam

ಹಂತ 3: ಭಾಷಾ ಪ್ರಾವಿಣ್ಯತಾ ಪರೀಕ್ಷೆ/ Language Proficiency Exam

 

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಆಧಾರ್ ಕಾರ್ಡ್,

ಇತ್ತೀಚಿನ ಫಾಸ್ಪೋರ್ಟ್ ಸೈಜಿನ ಭಾವಚಿತ್ರ,

ಚಾಲ್ತಿಯಲ್ಲಿರುವ ಇಮೇಲ್ ಐಡಿ & ಮೊಬೈಲ್ ಸಂಖ್ಯೆ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು.

ಎಡ ಹೆಬ್ಬೆರಳಿನ ಗುರುತು.

ಕೈ ಬರವಣಿಗೆಯ ಫಾರ್ಮೆಟ್

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು www.‌nabard.org/ ವೆಬ್ಸೈಟ್ ಗ ಬೇಟಿ ನೀಡಿ Career Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
  4. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  5. Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
  6. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-01-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-02-2026    

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

 

 

ಕೊನೆಯ ಮಾತು:

ರಾಷ್ಟ್ರೀಯ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ (ನಬಾರ್ಡ್)‌ ನಲ್ಲಿ ಖಾಲಿ ಇರುವ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿರುತ್ತದೆ.  ನಬಾರ್ಡ್‌ ನಲ್ಲಿ  ಖಾಲಿ ಇರುವ  162 ಅಭಿವೃದ್ಧಿ ಅಧಿಕಾರಿ ಹಾಗೂ ಅಭಿವೃದ್ಧಿ ಅಧಿಕಾರಿ (ಹಿಂದಿ) ಹುದ್ದೆಗಳನ್ನು ತುಂಬಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಯಾವುದೇ ವಿಷಯದಲ್ಲಿ ಪದವಿ ಮುಗಿಸಿದವರು ಈ ಹುದ್ದೆಗಳ ಅವಕಾಶವನ್ನು ಪಡೆಯಬಹುದು.  ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top