ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಲೆಕ್ಕಿಗ (Accountant) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Nirmithi Kendra Recruitment in Raichur 2025

WhatsApp Group Join Now
Telegram Group Join Now
Spread the love

ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಲೆಕ್ಕಿಗ (Accountant) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Nirmithi Kendra Recruitment in Raichur 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ವಿನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ನಿರ್ಮಿತಿ ಕೇಂದ್ರ, ರಾಯಚೂರು ಜಿಲ್ಲೆಯ ವತಿಯಿಂದ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ರಾಯಚೂರು ನಿರ್ಮಿತಿ ಕೇಂದ್ರವು KSR Act 1960 ಅಡಿಯಲ್ಲಿ ನೋಂದಾಯಿತ ಸಂಸ್ಥೆಯಾಗಿರುತ್ತದೆ. ನಿರ್ಮಿತಿ ಕೇಂದ್ರಕ್ಕೆ Accountant-01 ಹುದ್ದೆಯನ್ನು ಒಂದು ವರ್ಷದ ಅವಧಿಗೆ ಹೊರ ಗುತ್ತಿಗೆ (through outsource) ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದೆ ದಿನಾಂಕ 28-05-2025 ರಂದು ಹೊರಡಿಸಿದ Accountant ಹುದ್ದೆಯ ನೇಮಕಾತಿ ಪ್ರಕಟಣೆಯನ್ನು ರದ್ದು ಪಡಿಸಿದೆ.

Accountant-01 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲಾಧಿಕಾರಿಗಳ ಕಛೇರಿಯ ಅಧಿಕೃತ website https://raichur.nic.in ರಲ್ಲಿ ದಿನಾಂಕ 21-07-2025 ರಿಂದ ದಿನಾಂಕ 05-08-2025ರವರೆಗೆ Online ನಲ್ಲಿ Download ಮಾಡಿಕೊಂಡು, ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಸೂಕ್ತ ಎಲ್ಲಾ ದಾಖಲೆಗಳೊಂದಿಗೆ ಸಲ್ಲಿಸಬಹುದು.

ನಿರ್ಮಿತಿ ಕೇಂದ್ರ ರಾಯಚೂರು ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 05-08-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

JOB NEWS: ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 3588 Constable ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BSF Constable Recruitment 2025

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ನಿರ್ಮಿತಿ ಕೇಂದ್ರ
ಹುದ್ದೆಗಳ ಪದನಾಮ: ಅಕೌಂಟೆಂಟ್
ಹುದ್ದೆಗಳ ಸಂಖ್ಯೆ: 01 ಹುದ್ದೆ
ಕಾರ್ಯ ನಿರ್ವಹಿಸಬೇಕಾದ ವಿಳಾಸ: ರಾಯಚೂರು

ಗುತ್ತಿಗೆಯ ಅವಧಿ:

ಒಂದು ವರ್ಷಕ್ಕೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಒಂದು ವರ್ಷದ ಹೊರಗುತ್ತಿಗೆ ಅವಧಿಯನ್ನು ತೃಪ್ತಿಕರವಾಗಿ ಪೂರೈಸಿದಲ್ಲಿ ಅಗತ್ಯವಿದ್ದಲ್ಲಿ ಮಾತ್ರ ಮುಂದಿನ ವರ್ಷಕ್ಕೆ ವಿಸ್ತರಿಸಲಾಗುವುದು. ಇದನ್ನು ಅಭ್ಯರ್ಥಿಯ ಹಕ್ಕು ಎಂದು ತಿಳಿಯತಕ್ಕದ್ದಲ್ಲ.

ವೇತನ ಶ್ರೇಣಿ:

ನಿಯಮಾವಳಿಗಳನ್ವಯ ನಿಗದಿಪಡಿಸಿದ ಮಾಸಿಕವೇತನ ನೀಡಲಾಗುತ್ತದೆ.

ಷರತ್ತುಗಳು & ಅರ್ಹತೆಗಳು:

  1. ಭಾರತೀಯ ನಾಗರೀಕನಾಗಿರತಕ್ಕದ್ದು.
  2. ವಯೋಮಿತಿ ಗರಿಷ್ಠ 45 ವರ್ಷ.
  3. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆಂತಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು,
  4. ಅಭ್ಯರ್ಥಿಯು ಯಾವುದೇ ಕ್ರಿಮಿನಲ್ ಮೊಕದ್ದಮೆಯಲ್ಲಿ ಭಾಗಿಯಾಗಿರತಕ್ಕದ್ದಲ್ಲ.
  5. Accountant ಹುದ್ದೆಗೆ M.Com or MBA (Finance) ಶೈಕ್ಷಣಿಕ ಅರ್ಹತೆಯ ಜೊತೆಗೆ ಅನುಕ್ರಮವಾಗಿ ಕನಿಷ್ಠ 1 ಅನುಭವ ಹೊಂದಿರತಕ್ಕದ್ದು.
  6. ಅಭ್ಯರ್ಥಿಯು ಹುದ್ದೆಗೆ ನಿಗದಿಪಡಿಸಿದ ಕನಿಷ್ಠ 1 ವರ್ಷದ ಅನುಭವ ಪ್ರಮಾಣವನ್ನು ಅರ್ಜಿಯೊಂದಿಗೆ ಸಲ್ಲಿಸುವಾಗ Misconduct ಅಥವಾ Financial Misappropriation ಅಭ್ಯರ್ಥಿಯನ್ನು ವಜಾಗೊಳಿಸಿರುವುದಿಲ್ಲವೆಂದು ಮತ್ತು ಅಭ್ಯರ್ಥಿಯ ನಡತೆಯು ಉತ್ತಮವಾಗಿದೆಂದು NOC ಪಡೆದು ಕಡ್ಡಾಯವಾಗಿ ಅನುಭವ ಪ್ರಮಾಣ ಪತ್ರದೊಂದಿಗೆ ಸಲ್ಲಿಸತಕ್ಕದ್ದು.

JOB NEWS: AIIMS ನಲ್ಲಿ ಖಾಲಿ ಇರುವ 3500 ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: AIIMS 3500 Nursing Officer Recruitment 2025

ವಯೋಮಿತಿ:  

ಅಭ್ಯರ್ಥಿಗಳು ಗರಿಷ್ಟ 45 ವರ್ಷಗದವರೆಗೆ ಅರ್ಜಿ ಸಲ್ಲಿಸಬಹುದು.

ನೇಮಕಾತಿ ವಿಧಾನ:

ನೇಮಕಾತಿ ವಿಧಾನ:- ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಪೂರ್ವ ಅನುಭವದಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳಲ್ಲಿ, ನಿಗದಿಪಡಿಸಿದ ವಿದ್ಯಾರ್ಹತೆ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆಯಲ್ಲಿ ಅತೀ ಹೆಚ್ಚು ಅಂಕ ಪಡೆದ (ಶೇಕಡದಲಿ.) ಅಭ್ಯರ್ಥಿಗಳನ್ನು ಮಾತ್ರ ಪಾರದರ್ಶಕತೆಯಿಂದ ನೇರವಾಗಿ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳ ಮೂಲ ದಾಖಲೆಗಳ ನೈಜತೆ ಮತ್ತು ಅಭ್ಯರ್ಥಿಯ ನಡತೆಯ ಪೂರ್ವ ಪರಿಶೀಲನೆಗೆ ಒಳಪಟ್ಟಿರುತ್ತದೆ. (ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ).

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

  1. ಭರ್ತಿ ಮಾಡಿರುವ ಅರ್ಜಿ ನಮೂನೆ
  2. ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
  3. ಜಾತಿ & ಆದಾಯ ಪ್ರಮಾಣ ಪತ್ರ,
  4. ಕನ್ನಡ ಮಾದ್ಯಮ ಪ್ರಮಾಣಪತ್ರ,
  5. ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
  6. ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

  • ಯಾದಗಿರಿ ಜಿಲ್ಲೆಯ ಅಧಿಕೃತ ವೆಬ್ಸೈಟ್ https://raichur.nic.in ವೆಬ್ಸೈಟ್ ಗೆ ಬೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
  • ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
  • ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ನಂತರ ಅದನ್ನು ಒಂದು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ______________ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
  • ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
  • ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.

ಅರ್ಜಿ ಕಳುಹಿಸಿಕೊಡುವ ವಿಳಾಸ:

NIRMITI KENDRA, RAICHUR, Sy.No.809(A), Bolmandoddi Road, RAICHUR-584 103, e-Mail ID:pmnkrcr@gmail.com
Contact No: Project Manager-99454 94157

JOB NEWS: ಅಗ್ನಿಶಾಮಕ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ: BOB Recruitment for Fire Safety Officer 2025

ಪ್ರಮುಖ ದಿನಾಂಕಗಳು:

ಅರ್ಜಿ ಸುಲ್ಲಿಸುವ ಪ್ರಾರಂಭದ ದಿನಾಂಕ: 23-06-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-07-2025

ಅಧಿಕೃತ ಲಿಂಕುಗಳು/ Official Links

ನೋಟಿಫಿಕೇಶನ್ ಡೌನ್ಲೋಡ್

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

 

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top