ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ: Online Application for Pre Recruitment of Police Sub Inspector 2025
ಸ್ನೇಹಿತರೇ, ನಮಸ್ತೆ 2025-26ನೇ ಸಾಲಿಗೆ ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಪರೀಕ್ಷಾ ಪೂರ್ವ ಉಚಿತ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಕುರಿತು ಪತ್ರಿಕಾ ಪ್ರಕಟಣೆ ಹೊರಬಿದ್ದಿದೆ. ಪದವಿ ಮುಗಿಸಿದ ಆಸಕ್ತ ಮಹಿಳಾ & ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.
2025-26ನೇ ಸಾಲಿಗೆ ಇಂದಿರಾಗಾಂಧಿ ವೃತ್ತಿ ತರಬೇತಿ ಕೇಂದ್ರಗಳ ಮೂಲಕ ಸಮಾಜ ಕಲ್ಯಾಣ ಇಲಾಖೆಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಗಳಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಅದರಂತೆ, ತರಬೇತಿ ಅವಧಿ, ತರಬೇತಿ ವಿವರ, ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.
ತರಬೇತಿಯ ವಿವರ:
ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ 04 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 90 ದಿನಗಳ ವಸತಿಯುತ ಪೂರ್ವ-ನೇಮಕಾತಿ Police Sub Inspector ಪರೀಕ್ಷಾ ಪೂರ್ವ ತರಬೇತಿ.
ಈ ಕೆಳಗಿನ ತರಬೇತಿಗಳು ಒಳಗೊಂಡಿದೆ:
- ದೈಹಿಕ ಚಟುವಟಿಕೆಗಳು – ಓಟ, ಎತ್ತರ ಜಿಗಿತ, ಶಾಟ್‌ಪುಟ್
- ಡ್ರಿಲ್
- ತರಗತಿಯ ತರಬೇತಿ
- ದಿನಕ್ಕೆ 3 ಬಾರಿ ಊಟದ ವ್ಯವಸ್ಥೆ
ವಯೋಮಿತಿ:
ಕನಿಷ್ಟ ವಯೋಮಿತಿ | 21 |
ಗರಿಷ್ಟ ವಯೋಮಿತಿ | 31 |
ಅಭ್ಯರ್ಥಿಯ ಸಾಮಾನ್ಯ ಅರ್ಹತೆಗಳು:
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
- ನಿಗದಿತ ನಮೂನೆಯಲ್ಲಿ ಜಾತಿ & ಆದಾಯ ಪ್ರಮಾಣಪತ್ರ ಹೊಂದಿರಬೇಕು.
- ವಾರ್ಷಿಕ ಆದಾಯ ಎಲ್ಲ ಮೂಲಗಳಿಂದ ರೂ. 5 ಲಕ್ಷ ಮೀರಿರಬಾರದು.
- ನಿಗದಿತ ಮಿಸಲಾತಿಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಪ್ರಮಾಣಪತ್ರ ಪಡೆದಿರಬೇಕು.
- ಅಭ್ಯರ್ಥಿಗಳು ಯಾವುದಾದರೂ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು.
ವಿದ್ಯಾರ್ಹತೆ:
ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.
ತರಬೇತಿಯ ನಿಯಮಗಳು ಮತ್ತು ಷರತ್ತುಗಳು:
- ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಅಭ್ಯರ್ಥಿಯು ಆಯ್ಕೆ ಮಾಡಿದ ವಿಭಾಗದ ಪ್ರಕಾರ ತರಬೇತಿ ವಿಭಾಗವನ್ನು ನಿಯೋಜಿಸಲಾಗುತ್ತದೆ.
- ಅಭ್ಯರ್ಥಿಯ ತರಬೇತಿ ವಿಭಾಗವನ್ನು ಬದಲಾಯಿಸವ ಹಕ್ಕುಗಳನ್ನು ಇಲಾಖೆಯು ಹೊಂದಿರುತ್ತದೆ.
- ಅಭ್ಯರ್ಥಿಯು ತರಬೇತಿಯ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಪಾಲಿಸಬೇಕು ಮತ್ತು ತರಬೇತಿಯ ವೇಳಾಪಟ್ಟಿಯನ್ನು ನಿರ್ವಹಿಸಬೇಕು. ತರಬೇತಿಯ ನಿಯಮಗಳನ್ನು ಪಾಲಿಸದಿದ್ದರೆ ಅಭ್ಯರ್ಥಿಯನ್ನು ಅನರ್ಹಗೊಳಿಸುವ ಹಕ್ಕನ್ನು ಇಲಾಖೆಯು ಹೊಂದಿರುತ್ತದೆ.
- ತರಬೇತಿ ಸಂಸ್ಥೆ, ಅಧ್ಯಾಪಕ ಸದಸ್ಯರು ಅಥವಾ ಬೋಧಕರ ಕಡೆಗೆ ಅವಿಧೇಯತೆ ಅಥವಾ ದುರ್ನಡತೆ ಪ್ರದರ್ಶಿಸುವ ಯಾವುದೇ ಅಭ್ಯರ್ಥಿಯನ್ನು ತಕ್ಷಣವೇ ಅನರ್ಹಗೊಳಿಸಲಾಗುತ್ತದೆ.
- ಅಭ್ಯರ್ಥಿಯು 90 ದಿನಗಳ ಪೂರ್ಣ ತರಬೇತಿಯನ್ನು ಪೂರ್ಣಗೊಳಿಸಬೇಕು ಹಾಗೂ ತರಬೇತಿ ಆವರಣದಿಂದ ಹೊರಗೆ ಹೋಗಲು ಅವಕಾಶವಿರುದಿಲ್ಲ.
- ತರಬೇತಿ ಅವಧಿಯಲ್ಲಿ ಯಾವುದೇ ಗಾಯಗಳು ಅಥವಾ ಅಹಿತಕರ ಘಟನೆಗಳು ಸಂಭವಿಸಿದಲ್ಲಿ, ತರಬೇತಿ ಸಂಸ್ಥೆ ಅಥವಾ ಇಲಾಖೆಯು ಜವಾಬ್ದಾರರಾಗಿರುವುದಿಲ್ಲ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ & ಇಮೇಲ್ ಐಡಿ
ಆಧಾರ್ ಕಾರ್ಡ್
ಶೈಕ್ಷಣಿಕ ದಾಖಲಾತಿಗಳು
ಇತ್ತೀಚಿನ ಭಾವಚಿತ್ರ
ಜಾತಿ & ಆದಾಯ ಪ್ರಮಾಣ ಪತ್ರ,
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಹಾಕುವ ವಿಧಾನ/ Application Submission Method:
- ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
- ಅಭ್ಯರ್ಥಿಗಳು https://igccd.karnataka.gov.in/ ವೆಬ್ಸೈಟ್ ಗ ಬೇಟಿ ನೀಡಿ Online Application for Pre- Recruitment of Police Constable ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
- Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-09-2025
ಪ್ರಮುಖ ಲಿಂಕುಗಳು:
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.