ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ RDPR ಇಲಾಖೆಯಿಂದ ಅರ್ಜಿ ಆಹ್ವಾನ: RDPR Ombudsman Jobs 2025

WhatsApp Group Join Now
Telegram Group Join Now
Spread the love

ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ RDPR ಇಲಾಖೆಯಿಂದ ಅರ್ಜಿ ಆಹ್ವಾನ: RDPR Ombudsman Jobs 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ.  ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅನುಷ್ಠಾನದ ಸಂದರ್ಭದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಜಿಲ್ಲಾ ಮಟ್ಟದ ಓಂಬುಡ್ಸ್ ಪರ್ಸನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

    ಕರ್ನಾಟಕ RDPR ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಒಂಬುಡ್ಸ್ ಪರ್ಸನ್ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 21-02-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೋತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ಕರ್ನಾಟಕ ಪಂಚಾಯತ್ ರಾಜ್ ಇಲಾಖೆ
ಹುದ್ದೆಗಳ ಪದನಾಮ: ಓಂಬುಡ್ಸ್ ಪರ್ಸನ್
ಹುದ್ದೆಗಳ ಸಂಖ್ಯೆ: 03 ಹುದ್ದೆಗಳು
ಕಾರ್ಯ ನಿರ್ವಹಿಸಬೇಕಾದ ವಿಳಾಸ: ದಕ್ಷಿಣ ಕನ್ನಡ, ಮೈಸೂರು & ಕೋಲಾರ

ಖಾಲಿ ಹುದ್ದೆಗಳ ವಿವರ:

ದಕ್ಷಿಣ ಕನ್ನಡ, ಕೋಲಾರ ಮತ್ತು ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಓಂಬುಡ್ಸ್ ಪರ್ಸನ್ ಹುದ್ದೆಗಳ ಭರ್ತಿ ನಡೆಯುತ್ತಿದೆ.

ವೇತನ ಶ್ರೇಣಿ:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಾಸಿಕ ನಿಗದಿಪಡಿಸಿದ ವೇತನ ನೀಡುತ್ತಾರೆ.

ಶೈಕ್ಷಣಿಕ ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಮುಗಿಸಿರಬೇಕು.

ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ ಮತ್ತು ಸಮಾಜ ಸೇವೆ / ಮ್ಯಾನೇಜ್ಮೆಂಟ್ ಕ್ಷೇತ್ರಗಳಲ್ಲಿ ಕನಿಷ್ಟ 10 ವರ್ಷಗಳ ಸೇವಾನುಭವ ಹೊಂದಿರಬೇಕು.

ಸಾರ್ವಜನಿಕರೊಂದಿಗೆ/ ಸಮುದಾಯದ ಸಂಸ್ಥೆಗಳಲ್ಲಿಕೆಲಸ ನಿರ್ವಹಿಸಿದ ಅನುಭವ ಕಡ್ಡಾಯವಾಗಿರುತ್ತದೆ.

 ಗ್ರಾಮೀಣ ಪ್ರದೇಶಗಳಲ್ಲಿ ಫಿಲ್ಡ್ ವಿಸಿಟ್ ಮಾಡಲು ಸಮರ್ಥರಾಗಿರಬೇಕು.

ವಯೋಮಿತಿ:  

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 66 ವರ್ಷಗಳನ್ನು ಮೀರುವಂತಿಲ್ಲ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಭರ್ತಿ ಮಾಡುವ ಅರ್ಜಿ ನಮೂನೆ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಮಾತೃ ಇಲಾಖೆಯಿಂದ ಆಕ್ಷೇಪಣೆರಹಿತ ಪ್ರಮಾಣಪತ್ರ

ಸೇವಾ ದಾಖಲಾತಿಗಳು

ಸಂಶೋಧನಾ ಲೇಖನಗಳು, ಅವಾರ್ಡ್ ಗಳು, ಇತರೆ ಪ್ರಸಂಶನೀಯ ಪ್ರಮಾಣಪತ್ರಗಳು

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

ಈ ಲೇಖನದ ಕೊನೆಯ ಭಾಗದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ..

ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.

ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.

ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ.

ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.

ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ…

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಆರಂಭ: 22-01-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-02-2025

ಪ್ರಮುಖ ಲಿಂಕುಗಳು:

ನೋಟಿಫಿಕೇಶನ & ಅರ್ಜಿ ಲಿಂಕ್

ಅಧಿಕೃತ ವೆಬ್ಸೈಟ್ ಲಿಂಕ್

 

ಇತ್ತೀಚಿನ ಸಂಬಂಧಿತ ಸುದ್ದಿಗಳು:
ಬೆಂಗಳೂರು ವಿಶ್ವವಿದ್ಯಾಲಯದಿಂದ ಖಾಲಿ ಇರುವ ಲೈಬ್ರೇರಿ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗುಮಾಸ್ತ & ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ| Urban Cooperative Bank Jobs 2025

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ. 

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top