
ಶ್ರೀ ಕನಕ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Shri Kanaka Credit Coop Society Recruitment 2026
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಶ್ರೀ ಕನಕ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಗುಮಾಸ್ತ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಅರ್ಜಿ ನಮೂನೆ ಮತ್ತು ಅರ್ಜಿ ಶುಲ್ಕ : ಸಂಘದ ಕಚೇರಿಯಲ್ಲಿ ಈ ಹುದ್ದೆಗೆ ಸಂಬಂಧಿಸಿದ ನೇಮಕಾತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಘದಿಂದ ದೊರೆಯುವ ನಿಗಧಿತ ಅರ್ಜಿಯನ್ನು 50/- ರೂ ಶುಲ್ಕ ಪಾವತಿಸಿ ಪಡೆದು 1000/- ಮೌಲ್ಯದ ಡಿ ಡಿ (ಹಿಂದಿರುಗಿಸದ)ಯನ್ನು (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ರ ಅಭ್ಯರ್ಥಿಗಳಿಗೆ 500/-ರೂ ಡಿ ಡಿ)ಸಿ.ಇ.ಓ ಶ್ರೀ ಕನಕ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ,ಲಿ,, ಶಿಕಾರಿಪುರ ಇವರ ಹೆಸರಿನಲ್ಲಿ ಸಂದಾಯವಾಗುವಂತೆ ಅರ್ಜಿಯ ಜೊತೆಗೆ ಲಗತ್ತಿಸಬೇಕು. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿಯ ಮೇಲ್ಬಾಗದಲ್ಲಿ ಅಂಟಿಸಿ ಎಲ್ಲಾ ದಾಖಲೆಗಳನ್ನು ಒಳಗೊಂಡ ಲಕೋಟೆಯನ್ನು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಶ್ರೀ ಕನಕ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ,ಲಿ.. ಹೊಸ ಮೇದಾರಕೇರಿ, ಶಿಕಾರಿಪುರ ಈ ವಿಳಾಸಕ್ಕೆ ದಿನಾಂಕ 06-02-2026 ರ ಸಂಜೆ 4-00 ಗಂಟೆ ಒಳಗಾಗಿ ತಲುಪುವಂತೆ ಅಂಚೆ ಮೂಲಕ ಸಲ್ಲಿಸತಕ್ಕದ್ದು. ಲಕೋಟೆಯ ಮೇಲೆ ಹುದ್ದೆಯ ಹೆಸರು ನಮೂದಿಸತಕ್ಕದ್ದು. ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ನೇಮಕಾತಿಯ ಪಕ್ಷಿನೋಟ
| ಸರ್ಕಾರಿ ಸಂಸ್ಥೆ | ಶ್ರೀ ಕನಕ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ |
| ಹುದ್ದೆಗಳ ಪದನಾಮ | ಗುಮಾಸ್ತ |
| ಹುದ್ದೆಗಳ ಸಂಖ್ಯೆ | 01 |
| ಕೆಲಸದ ಸ್ಥಳ | ಶಿಕಾರಿಪುರ |
| ಟೆಲಿಗ್ರಾಮ್ ಸೇರುವ ಲಿಂಕ್ |
ವಯೋಮಿತಿ: ನೇಮಕಾತಿ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 06-02-2026 ಕ್ಕೆ ನಿಗದಿಪಡಿಸಲಾಗಿದ್ದು, ಈ ದಿನಾಂಕ್ಕೆ ಅಭ್ಯರ್ಥಿಗಳ ಕನಿಷ್ಟ/ಗರಿಷ್ಟ ವಯೋಮಿತಿ ಈ ಕೆಳಕಂಡಂತೆ ಇರತಕ್ಕದ್ದು.
ಕನಿಷ್ಟ ವಯೋಮಿತಿ: 18 ವರ್ಷ
ಗರಿಷ್ಟ ವಯೋಮಿತಿ:
ಸಾಮಾನ್ಯ ವರ್ಗ: 38
ಹಿಂದೂಳಿದ ವರ್ಗಗಳಾದ 2ಎ, 2ಬಿ, 3ಎ & 3ಬಿ: 41 ವರ್ಷ
ಪಜಾ/ಪಪಂ/ಪ್ರವರ್ಗ 1: 43 ವರ್ಷ
ಆಯ್ಕೆ, ವಿಧಾನ : ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ನೇಮಕಾತಿ ಮಾಡಲಾಗುತ್ತದೆ. ಪದವಿ ಪರೀಕ್ಷೆಯಲ್ಲಿಗಳಿಸಿದ ಒಟ್ಟು ಅಂಕಗಳ ಶೇಕಡ ಪ್ರಮಾಣದ ಆರ್ಹತೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಗೆ ಒಟ್ಟು 200 ಅಂಕಗಳಿಗೆ ಲಿಖಿತ ಪರೀಕ್ಷೆಯನ್ನು ಏರ್ಪಡಿಸಲಾಗುವುದು. ಕನ್ನಡ ಭಾಷೆಗೆ 50 ಅಂಕಗಳು, ಸಾಮಾನ್ಯ ಇಂಗ್ಲಿಷ್ ಭಾಷೆಗಾಗಿ 25 ಅಂಕಗಳು, ಸಾಮಾನ್ಯ ಜ್ಞಾನಕ್ಕಾಗಿ 25 ಅಂಕಗಳು, ಸಹಕಾರ ವಿಷಯಗಳಿಗಾಗಿ 50 ಅಂಕಗಳು, ಭಾರತ ಸಂವಿಧಾನ ವಿಷಯಕ್ಕಾಗಿ 25 ಅಂಕಗಳು, ಬ್ಯಾಂಕಿಂಗ್ ವಿಷಯಗಳಿಗೆ 25 ಅಂಕಗಳನ್ನು ಒಳಗೊಂಡಿರುತ್ತದೆ.
ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5 ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಮೌಖಿಕ ಸಂದರ್ಶನಕ್ಕೆ ಗರಿಷ್ಟ 15 ಅಂಕಗಳನ್ನು ನಿಗಧಿಪಡಿಸಲಾಗಿದೆ. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇ 85 ಕ್ಕೆ ಇಳಿಸಿ ಹಾಗೆ ಪ್ರಾಪ್ತವಾಗುವ ಅಂಕಗಳಿಗೆ ಮೌಖಿಕ ಸಂದರ್ಶನದಲ್ಲಿ ಗಳಿಸುವ ಅಂಕಗಳನ್ನು ಒಟ್ಟುಗೂಡಿಸಿ ಅಂತಿಮ ಮೆರಿಟ್ ಪಟ್ಟಿಯನ್ನು ತಯಾರಿಸಿ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕೆ ನಡೆಸುವ ದಿನಾಂಕದ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ನೀಡಲಾಗುವುದು.
ಲಗತ್ತುಗಳು : ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಅಥವಾ ತತ್ಸಮಾನವಾದ ವಿದ್ಯಾರ್ಹತೆಯ ಎಲ್ಲಾ ವರ್ಷಗಳ/ಸೆಮಿಸ್ಟರ್‌ಗಳ ಅಂಕಪಟ್ಟಿ, ಕಂಪ್ಯೂಟರ್ ಶಿಕ್ಷಣ ಹೊಂದಿದ ಪ್ರಮಾಣ ಪತ್ರ, ಮೀಸಲಾತಿ ಕೋರಿದ್ದಲ್ಲಿ ಮೀಸಲಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್. 2 ಪಾಸ್‌ಪೋರ್ಟ್ ಫೋಟೋ, ಈ ಮೇಲ್ಕಂಡ ಎಲ್ಲಾ ದಾಖಲೆಗಳು ಸ್ವಯಂ ದೃಢೀಕೃತ ಗೊಂಡಿರಬೇಕು.
ನೇಮಕಗೊಂಡ ಅಭ್ಯರ್ಥಿಯು ಸಂಘದ ಆಡಳಿತ ಮಂಡಳಿಯ ತೀರ್ಮಾನಕ್ಕೆ ಒಳಪಟ್ಟು ಮೊದಲ 2 ವರ್ಷಗಳ ಅರ್ಹತಾ ಪರೀಕ್ಷಾ ಅವಧಿ (probationary period ) ಯ ನಿಯಮಗಳಿಗೆ ಒಳಪಟ್ಟಿರುತ್ತದೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ತರುವ ಹಾಗೂ ಯಾವುದೇ ಸಂದರ್ಭದಲ್ಲಿ ಯಾವುದೇ ಕಾರಣವನ್ನು ನೀಡದೇ ರದ್ದುಗೊಳಿಸುವ ಅಧಿಕಾರವನ್ನು ನೇಮಕಾತಿ ಸಮಿತಿ ಹೊಂದಿರುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಭರ್ತಿ ಮಾಡಿರುವ ಅರ್ಜಿ ನಮೂನೆ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು
ಸೇವಾ ದಾಖಲಾತಿಗಳು
ಇತರೆ ಅಗತ್ಯವಿರುವ ದಾಖಲೆಗಳು
ಪ್ರಮುಖ ದಿನಾಂಕಗಳು: 06-02-2026
ಅಧಿಕೃತ ಲಿಂಕುಗಳು:

ಕೊನೆಯ ಮಾತು:
ಶ್ರೀ ಕನಕ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಗುಮಾಸ್ತ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.
