ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ ಕ್ಲರ್ಕ್, ಕ್ಯಾಶಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ‍Souharda Sahakari niyamitha jobs 2025

WhatsApp Group Join Now
Telegram Group Join Now
Spread the love

ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ ಕ್ಲರ್ಕ್, ಕ್ಯಾಶಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ‍Souharda Sahakari niyamitha jobs 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ವಿನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಶ್ರೀ ಚೌಡೇಶ್ವರಿ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ, ಸಿಂದಗಿ ಯಲ್ಲಿ ಖಾಲಿ ಇರುವ ಹುದ್ದೆಗಳನ್ನು  ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಶ್ರೀ ಚೌಡೇಶ್ವರಿ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ, ಸಿಂದಗಿ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 20-05-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

JOB NEWS: ರಾಷ್ಟ್ರೀಯ ಅಲ್ಪಸಂಖ್ಯಾತರ ಅಭಿವೃದ್ಧಿ & ಹಣಕಾಸು ನಿಗಮದಿಂದ (NMDFC) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ಶ್ರೀ ಚೌಡೇಶ್ವರಿ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ, ಸಿಂದಗಿ
ಹುದ್ದೆಗಳ ಪದನಾಮ: ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ
ಹುದ್ದೆಗಳ ಸಂಖ್ಯೆ: 10 ಹುದ್ದೆಗಳು
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬಾಗಲಕೋಟೆ

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಮ್ಯಾನೇಜರ್ 01
ಕ್ಲರ್ಕ್ 01
ಕ್ಯಾಶಿಯರ್ 01
ಅಟೆಂಡರ್ 01
ಸಿಪಾಯಿ 01
ಪಿಗ್ಮಿ ಏಜೆಂಟರ್ 05

ವೇತನ ಶ್ರೇಣಿ:

ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಮ್ಯಾನೇಜರ್ MCOM/ MBA/ BCOM/BCA
ಕ್ಲರ್ಕ್ BCOM/ ANY DEGREE
ಕ್ಯಾಶಿಯರ್ BCOM/ ANY DEGREE
ಅಟೆಂಡರ್ PUC
ಸಿಪಾಯಿ SSLC/ PUC
ಪಿಗ್ಮಿ ಏಜೆಂಟರ್ SSLC

ಮ್ಯಾನೇಜರ್ ಹಾಗೂ ಇತರ ಎಲ್ಲ ಹುದ್ದೆಗಳಿಗೆ ಕಂಪ್ಯೂಟರ್‌ನಲ್ಲಿ ಕಡ್ಡಾಯವಾಗಿ ಪರಿಣತಿ ಹೊಂದಿರಬೇಕು. ಬಿ.ಕಾಮ್, ಪದವಿಧರರಿಗೆ ಹಾಗೂ ಅನುಭವಿಕರಿಗೆ ಆದ್ಯತೆ ನೀಡಲಾಗುವುದು.

JOB NEWS: ಅಕೌಂಟೆಂಟ್ ಕಮ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಬಿಕಾಂ ಪದವಿಧರರಿಂದ ಅರ್ಜಿ ಆಹ್ವಾನ: Bhagyodaya Vidyavardaka Sangha recruitment 2025

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

  1. ವೈಯಕ್ತಕ ರೆಸ್ಯೂಮ್
  2. ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
  3. ಗಣಕಯಂತ್ರ ಕೋರ್ಸ್ ಪ್ರಮಾಣಪತ್ರ
  4. ಅರ್ಜಿ ಶುಲ್ಕ ಪಾವತಿಸಿದ ರಸೀಧಿ
  5. ಜಾತಿ & ಆದಾಯ ಪ್ರಮಾಣ ಪತ್ರ,
  6. ಕನ್ನಡ ಮಾದ್ಯಮ ಪ್ರಮಾಣಪತ್ರ,
  7. ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
  8. ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ತಮ್ಮ ಭಾವಚಿತ್ರ, ವಿದ್ಯಾರ್ಹತೆಯ ದಾಖಲೆಗಳ ನಕಲು ಪ್ರತಿಯೊಂದಿಗೆ ಅರ್ಜಿ ನಮೂನೆಯೊಂದಿಗೆ ಅಧ್ಯಕ್ಷರು, ಶ್ರೀ ಚೌಡೇಶ್ವರಿ ಸೌಹಾರ್ದ ಪತ್ತಿನ ಸಹಕಾರಿ ನಿ. ಸಿಂದಗಿ ಜಿಲ್ಲೆ ವಿಜಯಪುರ ಈ ವಿಳಾಸಕ್ಕೆ ಕಳುಹಿಸಬೇಕು. ಅರ್ಹ ಅಭ್ಯರ್ಥಿಗಳಿಗೆ ಪತ್ರ ಮೂಲಕ ಸಂದರ್ಶನ ದಿನಾಂಕ ಮತ್ತು ಸಮಯವನ್ನು ತಿಳಿಸಲಾಗುವುದು. ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಸ್ವಂತ ಖರ್ಚಿನಲ್ಲಿ ತಮ್ಮ ಮೂಲ ಅಂಕಪಟ್ಟಿ ಹಾಗೂ ಭಾವಚಿತ್ರದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿಳಾಸ : ಶ್ರೀ ಚೌಡೇಶ್ವರಿ ಸೌಹಾರ್ದ ಪತ್ತಿನ ಸಹಕಾರಿ ನಿ., ಸಿಂದಗಿ, ಶ್ರೀ ಚೌಡೇಶ್ವರಿ ಕಲ್ಯಾಣ ಮಂಟಪ, ಬಂದಾಳ ರೋಡ, ಓಂ ಶಾಂತಿ ನಗರ, ಸಿಂದಗಿ, ಜೆ: ವಿಜಯಪುರ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 20.05.2025ರ ಸಾಯಂಕಾಲ 4 ಗಂಟೆ ಒಳಗೆ ತಮ್ಮ ಅರ್ಜಿಗಳನ್ನು ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7899689930, 9449534777 ಸಂಪರ್ಕಿಸಬೇಕು ಎಂದು ಕೋರಲಾಗಿದೆ.

JOB NEWS: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 2600 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SBI CBO Jobs 2025

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-05-2025

ಅಧಿಕೃತ ಲಿಂಕುಗಳು/ Official Links

ನೋಟಿಫಿಕೇಶನ್ ಡೌನ್ಲೋಡ್

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top