ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 14582 ಅಪ್ಪರ್ ಡಿವಿಸನ್ ಕ್ಲರ್ಕ್ & ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: SSC CGL Examination 2025
ನಮಸ್ತೆ ಸ್ನೇಹಿತರೇ, ಇಂದು ಈ ಲೇಖನದಲ್ಲಿ ಹೊಸ ಉದ್ಯೋಗ ಮಾಹಿತಿಯನ್ನು ಹಂಚಿಕೊಳ್ಳಲಿದ್ದೇನೆ. ಸಿಬ್ಬಂದಿ ನೇಮಕಾತಿ ಆಯೋಗದಿಂದ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗದಿಂದ 2025 ನೇ ಸಾಲಿನ ಕಂಬೈಂಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗೆ ಅರ್ಜಿ ಕರೆಯಲಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 14582 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಯಾವುದೇ ಪದವಿ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Staff Selection Commission ನ ವತಿಯಿಂದ ಖಾಲಿ ಇರುವ ಒಟ್ಟು 14582 Combined Graduate Level 2025 (CGL) ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು 04-07-2025ರವರೆಗೆ ನೀಡಲಾಗಿದೆ. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
SSC CGL Examination 2025 ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ
ನೇಮಕಾತಿ ಸಂಸ್ಥೆ | ಸಿಬ್ಬಂದಿ ನೇಮಕಾತಿ ಆಯೋಗ |
ಹುದ್ದೆಗಳ ಪದನಾಮ | ಗ್ರೂಪ್ ಬಿ & ಸಿ |
ಹುದ್ದೆಗಳ ಸಂಖ್ಯೆ | 14582 ಹುದ್ದೆಗಳು |
ಕೆಲಸದ ಸ್ಥಳ | ದೇಶದಾದ್ಯಂತಾ |
ಹುದ್ದೆಗಳ ವಿವರ:
ವರ್ಗ | ಹುದ್ದೆಗಳ ಸಂಖ್ಯೆ |
ಪರಿಶಿಷ್ಟ ಜಾತಿ | 314 |
ಪರಿಶಿಷ್ಟ ಪಂಗಡ | 148 |
ಇತರೆ ಹಿಂದೂಳಿದ ವರ್ಗ(OBC) | 561 |
ಸಾಮಾನ್ಯ ವರ್ಗ | 1169 |
ಆರ್ಥಿಕವಾಗಿ ಹಿಂದೂಳಿದ ವರ್ಗ (EWS) | 231 |
ಒಟ್ಟು ಹುದ್ದೆಗಳು | 2423 |
ವೇತನ/ Salary Scale
ಕೇಂದ್ರ ಸರ್ಕಾರದ 7ನೇ ವೇತನ ನಿಯಮಾವಳಿಗಳ ಹಂತ 1 ರಿಂದ ಹಂತ 8ರವರೆಗೆ ವೇತನ ನೀಡಲಾಗುತ್ತದೆ.
ವಯೋಮಿತಿ/ Age limit:
ದಿನಾಂಕ 01-08-2025ಕ್ಕೆ ನಿಗದಿಪಡಿಸಿದಂತೆ
ಕನಿಷ್ಟ ವಯೋಮಿತಿ: 18 ವರ್ಷ
ಗರಿಷ್ಟ ವಯೋಮಿತಿ: 30 ವರ್ಷ
ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಂತಿಮ ವರ್ಷದ ಪದವಿಯಲ್ಲಿರುವ ಅಭ್ಯರ್ಥಿಗಳು ಕೂಡ ಅರ್ಜಿ ಹಾಕಬಹುದು.
(ಸ್ನೇಹಿತರೇ ಈ ನೇಮಕಾತಿ ಸೇರಿದಂತೆ ಯಾವುದೇ ನೇಮಕಾತಿ/ ಸ್ಕಾಲರ್ಶಿಫ್/ ಸ್ಕೀಮ್ ಗಳಿಗೆ ಅರ್ಜಿ ಸಲ್ಲಿಸಿಕೊಡಲಾಗುವುದು. ವಾಟ್ಸಪ್ (9108736889) ಮುಖಾಂತರ ದಾಖಲೆಗಳನ್ನು ಕಳುಹಿಸಿದರೇ ಕಡಿಮೆ ದರದಲ್ಲಿ ಅರ್ಜಿ ಸಲ್ಲಿಸಿ ಪಿಡಿಎಫ್ ಅನ್ನು ನಿಮಗೆ ಕಳುಹಿಸಿಕೊಡಲಾಗುವುದು)
ಅರ್ಜಿ ಶುಲ್ಕ/ Application Fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ: ರೂ. 100/-ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪಜಾ/ ಪಪಂ/ ಅಂಗವಿಕಲ/ ಮಾಜಿಸೈನಿಕ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಕರ್ನಾಟಕದಲ್ಲಿನ ಪರೀಕ್ಷಾ ಕೇಂದ್ರಗಳು:
ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ, ಶಿವಮೊಗ್ಗ, ಉಡುಪಿ, ಹುಬ್ಬಳ್ಳಿ
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಫಾಸ್ಪೋರ್ಟ್ ಸೈಜಿನ ಇತ್ತೀಚಿನ ಭಾವಚಿತ್ರ
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಹಾಕುವ ವಿಧಾನ/ Application Submission Method:
- ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
- ಅಭ್ಯರ್ಥಿಗಳು www.ssc.gov.in ವೆಬ್ಸೈಟ್ ಗ ಬೇಟಿ ನೀಡಿ Registration ಟ್ಯಾಬ್ ಗೆ ಹೋಗಿ. ಅಲ್ಲಿ ನೊಂದಣಿ ಮಾಡಿಕೊಳ್ಳಿ.
- ನೊಂದಣಿ ಮಾಡಿಕೊಂಡ ನಂತರ Registration Number & Password ಅನ್ನು ಬಳಸಿಕೊಂಡು ಲಾಗಿನ್ ಮಾಡಿಕೊಳ್ಳಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
- Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-06-2025
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-07-2025
ಕಂಪ್ಯೂಟರ್ ಬೇಸಡ್ ಪರೀಕ್ಷೆಯ ದಿನಾಂಕ: ಆಗಸ್ಟ್ 13 ರಿಂದ 30ರವರೆಗೆ
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: |
ಅರ್ಜಿ ಸಲ್ಲಿಸಿ/ Apply Online: |
ವೆಬ್ಸೈಟ್/ Website : |
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.