ಆಹಾರ ಇಲಾಖೆ & ಇತರೆ ಕಡೆಗಳಲ್ಲಿ ಖಾಲಿ ಇರುವ 3100 ಕೆಳದರ್ಜೆ ಕ್ಲರ್ಕ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: SSC CHSL Recruitment 2025

WhatsApp Group Join Now
Telegram Group Join Now
Spread the love

ಆಹಾರ ಇಲಾಖೆ & ಇತರೆ ಕಡೆಗಳಲ್ಲಿ ಖಾಲಿ ಇರುವ 3100 ಕೆಳದರ್ಜೆ ಕ್ಲರ್ಕ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: SSC CHSL Recruitment 2025

ನಮಸ್ತೆ ಸ್ನೇಹಿತರೇ, ಸಿಬ್ಬಂದಿ ನೇಮಕಾತಿ ಆಯೋಗದಿಂದ ಬೃಹತ್ ನೇಮಕಾತಿ  ಅಧಿಸೂಚನೆ ಪ್ರಕಟವಾಗಿದೆ (SSC CHSL Examination) . ಕೇಂದ್ರ ಸರ್ಕಾರದ ಆಹಾರ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಳದರ್ಜೆ ಕ್ಲರ್ಕ್ & ಡಾಟಾ ಎಂಟ್ರಿ ಆಪರೇಟರ್  ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಹತೆ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Staff Selection Commission  ನ ವತಿಯಿಂದ ಖಾಲಿ ಇರುವ ಒಟ್ಟು  3131 Combined Higher Secondary Level Examination (CHSL) 2025 ಅನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು 18-07-2025ರವರೆಗೆ ನೀಡಲಾಗಿದೆ. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

SSC CHSL 2025 ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

JOB NEWS: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 14582 ಅಪ್ಪರ್ ಡಿವಿಸನ್ ಕ್ಲರ್ಕ್ & ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Apply for SSC CGL Examination 2025

ನೇಮಕಾತಿಯ ಪಕ್ಷಿನೋಟ

ನೇಮಕಾತಿ ಸಂಸ್ಥೆ ಸಿಬ್ಬಂದಿ ನೇಮಕಾತಿ ಆಯೋಗ
ಹುದ್ದೆಗಳ ಪದನಾಮ ಕೆಳದರ್ಜೆ ಕ್ಲರ್ಕ್ & ಡಾಟಾ ಎಂಟ್ರಿ ಆಪರೇಟರ್ 
ಹುದ್ದೆಗಳ ಸಂಖ್ಯೆ 3131
ಕೆಲಸದ ಸ್ಥಳ ದೇಶದಾದ್ಯಂತಾ

ಹುದ್ದೆಗಳ ವಿವರ:

ವರ್ಗ ಹುದ್ದೆಗಳ ಸಂಖ್ಯೆ
ಕೆಳ ದರ್ಜೆ ಕ್ಲರ್ಕ್ / LDC (Junior Secretariat Assistant)
ಡಾಟಾ ಎಂಟ್ರಿ ಆಪರೇಟರ್
ಡಾಟಾ ಎಂಟ್ರಿ ಆಪರೇಟರ್ ಗ್ರೇಡ್ ಎ
ಒಟ್ಟು ಹುದ್ದೆಗಳು 3131

ವೇತನ/ Salary Scale

ಕೇಂದ್ರ ಸರ್ಕಾರದ 7ನೇ ವೇತನ ನಿಯಮಾವಳಿಗಳ ಕೆಳಕಂಡಂತೆ ಮೂಲ ವೇತನ ನಿಗದಿ ಮಾಡಲಾಗಿದೆ.

ವರ್ಗ ಮೂಲ ವೇತನ
ಕೆಳ ದರ್ಜೆ ಕ್ಲರ್ಕ್ / LDC (Junior Secretariat Assistant) 19900-63200
ಡಾಟಾ ಎಂಟ್ರಿ ಆಪರೇಟರ್ 25500-81100
ಡಾಟಾ ಎಂಟ್ರಿ ಆಪರೇಟರ್ ಗ್ರೇಡ್ ಎ 25500-81100

 

ವಯೋಮಿತಿ/ Age limit:

ದಿನಾಂಕ 01-01-2026ಕ್ಕೆ ನಿಗದಿಪಡಿಸಿದಂತೆ

ಕನಿಷ್ಟ ವಯೋಮಿತಿ: 18 ವರ್ಷ

ಗರಿಷ್ಟ ವಯೋಮಿತಿ: 27 ವರ್ಷ

ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ  ಪಿಯುಸಿ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

(ಸ್ನೇಹಿತರೇ ಈ ನೇಮಕಾತಿ ಸೇರಿದಂತೆ ಯಾವುದೇ ನೇಮಕಾತಿ/ ಸ್ಕಾಲರ್ಶಿಫ್/ ಸ್ಕೀಮ್ ಗಳಿಗೆ ಅರ್ಜಿ ಸಲ್ಲಿಸಿಕೊಡಲಾಗುವುದು. ವಾಟ್ಸಪ್ (9108736889) ಮುಖಾಂತರ  ದಾಖಲೆಗಳನ್ನು ಕಳುಹಿಸಿದರೇ ಕಡಿಮೆ ದರದಲ್ಲಿ ಅರ್ಜಿ ಸಲ್ಲಿಸಿ ಪಿಡಿಎಫ್ ಅನ್ನು ನಿಮಗೆ ಕಳುಹಿಸಿಕೊಡಲಾಗುವುದು)

ಅರ್ಜಿ ಶುಲ್ಕ/ Application Fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ: ರೂ. 100/-ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಮಹಿಳೆ/ಪಜಾ/ ಪಪಂ/ ಅಂಗವಿಕಲ/ ಮಾಜಿಸೈನಿಕ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

JOB NEWS: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 2964 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply SBI CBO Recruitment 2025

 ಆಯ್ಕೆವಿಧಾನ/ Selection procedure:

ಲಿಖಿತ ಪರೀಕ್ಷೆ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಕರ್ನಾಟಕದಲ್ಲಿನ ಪರೀಕ್ಷಾ ಕೇಂದ್ರಗಳು:

ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ, ಶಿವಮೊಗ್ಗ, ಉಡುಪಿ, ಹುಬ್ಬಳ್ಳಿ

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂ‍ಖ್ಯೆ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು www.ssc.gov.in ವೆಬ್ಸೈಟ್ ಗ ಬೇಟಿ ನೀಡಿ Registration ಟ್ಯಾಬ್ ಗೆ ಹೋಗಿ. ಅಲ್ಲಿ ನೊಂದಣಿ ಮಾಡಿಕೊಳ್ಳಿ.
  3. ನೊಂದಣಿ ಮಾಡಿಕೊಂಡ ನಂತರ Registration Number & Password ಅನ್ನು ಬಳಸಿಕೊಂಡು ಲಾಗಿನ್ ಮಾಡಿಕೊಳ್ಳಿ.
  4. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  5. Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
  6. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.

JOB NEWS: ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: KSRLPS Tumkur DC Office jobs 2025

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-06-2025

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-07-2025        

ಕಂಪ್ಯೂಟರ್ ಬೇಸಡ್ ಪರೀಕ್ಷೆಯ ದಿನಾಂಕ: ಸೆಪ್ಟೆಂಬರ್ 08 ರಿಂದ ಸೆಪ್ಟೆಂಬರ್ 18ರವರೆಗೆ

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:
ಅರ್ಜಿ ಸಲ್ಲಿಸಿ/ Apply Online:
ವೆಬ್ಸೈಟ್/ Website :

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top